LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ: ಪ್ರೊ.ಕೆ.ಎಸ್.ಭಗವಾನ್ ವಿರುದ್ಧ ದೂರು ದಾಖಲು

ಬೆಂಗಳೂರು: ಹಿಂದೂಗಳ ಆರಾಧ್ಯ ದೈವ ಶ್ರೀರಾಮನ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡಿದ್ದ ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಬೆಂಗಳೂರಿನ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಲಾಗಿದೆ. 

ಇತ್ತೀಚೆಗೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಪ್ರೊ. ಕೆ.ಎಸ್. ಭಗವಾನ್ ಅವರು ಶ್ರೀರಾಮ ಹಾಗೂ ಹಿಂದೂ ಧರ್ಮಗ್ರಂಥಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಶ್ರೀರಾಮನ ಜನನ ಮತ್ತು ಹಿಂದೂ ಧಾರ್ಮಿಕ ಆಚರಣೆಗಳ ಬಗ್ಗೆ ಅವರು ಆಡಿರುವ ಮಾತುಗಳು ಕೋಟ್ಯಂತರ ಹಿಂದೂಗಳ ಶ್ರದ್ಧೆ ಹಾಗೂ ಧಾರ್ಮಿಕ ಭಾವನೆಗಳಿಗೆ ತೀವ್ರ ಧಕ್ಕೆ ತಂದಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. 

ಹಾಗಾಗಿ ಹಿಂದೂ ಜನಜಾಗೃತಿ ಸಮಿತಿಯಿಂದ ದೂರು ದಾಖಲಿಸಲಾಗಿದ್ದು, ಭಗವಾನ್ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದೆ. ಈ ಹಿಂದೆಯೂ ಕೂಡ ಪ್ರೊ. ಭಗವಾನ್ ಅವರು ಶ್ರೀರಾಮ, ಶ್ರೀಕೃಷ್ಣ ಮತ್ತು ಭಗವದ್ಗೀತೆಯ ಕುರಿತು ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದರು. 

ಸದ್ಯ ಅವರ ಭಾಷಣದ ವಿಡಿಯೋ ಮತ್ತು ಧ್ವನಿಮುದ್ರಣ ಸೇರಿದಂತೆ ಅಗತ್ಯ ಸಾಕ್ಷ್ಯಗಳನ್ನು ದೂರಿನೊಂದಿಗೆ ಪೊಲೀಸರಿಗೆ ಸಲ್ಲಿಸಲಾಗಿದ್ದು, ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನದ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸಿವೆ.

ಪ್ರೊ.ಕೆ.ಎಸ್.ಭಗವಾನ್, ಶ್ರೀರಾಮ ದಶರಥ ಮಹಾರಾಜನಿಗೆ ಜನಿಸಿದವನಲ್ಲ. ಪುತ್ರಕಾಮೇಷ್ಠಿ ಯಾಗ ಮಾಡಿದಾಗ ಜನಿಸಿದವನು. ಹಾಗಾಗಿ ರಾಮ ಧಶರಥನ ಮಗನಲ್ಲ ಎಂದು ರಾಮನ ಹುಟ್ಟಿನ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ