LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲವ್ ಜಿಹಾದ್ ಗೆ ಹೆದರಿ ಅಪ್ರಾಪ್ತೆ ಆತ್ಮಹತ್ಯೆ ಪ್ರಕರಣ: ಗರಗ ಸಿಪಿಐ ಸಸ್ಪೆಂಡ್

ಧಾರವಾಡ: ಲವ್ ಜಿಹಾದ್ ಪ್ರಕರಣಕ್ಕೆ ಹೆದರಿ ಅಪ್ರಾಪ್ತೆ ಆತ್ಮಹತ್ಯೆಗೆ ಶರಣಾಗಿರುವ ಕೇಸ್ ಗೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದಡಿ ಗರಗ ಸರ್ಕಲ್ ಸಿಪಿಐ ಶಿವಯೋಗಿ ಲೋಹಾರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಧಾರವಾಡ ಜಿಲ್ಲಾ ಪೊಲೀಸ್ ಎಸ್‌ಪಿ ಗುಂಜನ್ ಆರ್ಯ ಮಾನತು ಆದೇಶ ಆದೇಶ ಹೊರಡಿಸಿದ್ದಾರೆ. ಅಪ್ರಾಪ್ತೆ ಲವ್ ಜಿಹಾದ್ ಪ್ರಕರಣದಲ್ಲಿ ಪೊಲೀಸರು ರಾಜಿ ಸಂಧಾನ ಮಾಡಲು ಮುಂದಾಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೆ, ಈ ಪ್ರಕರಣದ ಹಿನ್ನೆಲೆಯಲ್ಲಿ ಅಪ್ರಾಪ್ತೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಆರೋಪಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದ ತನಿಖೆಯಲ್ಲಿ ಕರ್ತವ್ಯ ಲೋಪ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಸಿಪಿಐ ಶಿವಯೋಗಿ ಲೋಹಾರ್ ವಿರುದ್ಧ ಇಲಾಖೆ ಕ್ರಮ ಕೈಗೊಂಡಿದೆ.

ಬಜರಂಗ ದಳ ಕಾರ್ಯಕರ್ತರು ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಅದರ ಬೆನ್ನಲ್ಲೇ ಇಂದು ಸಿಪಿಐ ಅಮಾನತು ಆದೇಶ ಹೊರಬಿದ್ದಿದೆ. ಪ್ರಕರಣದ ತನಿಖೆ ಮುಂದುವರೆದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ