LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿವಾಹಿತೆಗೆ ಮತ್ತು ಬರುವ ಪಾನೀಯ ಕುಡಿಸಿ ರೇಪ್, ಬೆತ್ತಲೆ ಚಿತ್ರ ಸೆರೆಹಿಡಿದು ಬ್ಲಾಕ್ ಮೇಲ್

ಚಿಕ್ಕಬಳ್ಳಾಪುರ: ವಿವಾಹಿತೆಗೆ ಮತ್ತು ಬರುವ ಪಾನೀಯ ಕುಡಿಸಿ ಅತ್ಯಾಚಾರ ಎಸಗಿದ್ದಲ್ಲದೆ ಬೆತ್ತಲೆ ವಿಡಿಯೋ ಚಿತ್ರೀಕರಣ ಮಾಡಿ ಬ್ಲಾಕ್ ಮೇಲ್ ಮಾಡಿ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡ ಆರೋಪ ಕೇಳಿ ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿದ್ದ ತನ್ನ ಚಿಕ್ಕಮ್ಮನ ಮನೆಗೆ ಹೋಗಿ ಬರುತ್ತಿದ್ದ ಮಹಿಳೆಗೆ ಚಿಕ್ಕಮ್ಮನ ಮನೆಯಲ್ಲಿ ಪರಿಚಯವಾದ ವ್ಯಕ್ತಿ ಸಂಚು ರೂಪಿಸಿ ಅತ್ಯಾಚಾರ ಎಸಗಿದ್ದಾನೆ. ಮಹಿಳೆಯನ್ನು ನಂಬಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ ವ್ಯಕ್ತಿ ಜ್ಯೂಸ್ ನಲ್ಲಿ ಮತ್ತು ಬರುವ ಪದಾರ್ಥ ಬೆರೆಸಿ ಕೊಟ್ಟಿದ್ದಾರೆ. ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದು, ಆಕೆಯ ಬೆತ್ತಲೆ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಬ್ಲಾಕ್ ಮೇಲ್ ಒಂದೂವರೆ ವರ್ಷದಿಂದ ಮಹಿಳೆಯನ್ನು ಬೆದರಿಸಿ ಹಲವು ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಅಲ್ಲದೇ 400 ಗ್ರಾಂ ಚಿನ್ನಾಭರಣ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾನೆ ಎಂದು ಮಹಿಳೆ ದೂರು ನೀಡಿದ್ದು, ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಪತಿಯೊಂದಿಗೆ ವಾಸವಾಗಿರುವ ಶಿಡ್ಲಘಟ್ಟ ತಾಲೂಕಿನ ಮಹಿಳೆ ಬೆಂಗಳೂರಿನಲ್ಲಿದ್ದ ಚಿಕ್ಕಮ್ಮನ ಮನೆಗೆ ಹೋಗಿ ಬರುವಾಗ ಚಿಕ್ಕಮ್ಮನ ಸ್ನೇಹಿತ ಮಂಡ್ಯ ಮೂಲದ ರಮೇಶ್ ಎಂಬಾತ ಪರಿಚಯವಾಗಿದ್ದ. ತನ್ನ ಮನೆಗೆ ಕರೆದುಕೊಂಡು ಹೋಗಿದ್ದ ಆರೋಪಿ ಜ್ಯೂಸ್ ನಲ್ಲಿ ಮತ್ತು ಬರುವ ಪದಾರ್ಥ ಬೆರೆಸಿಕೊಟ್ಟು ಅತ್ಯಾಚಾರ ಎಸಗಿ ಬೆತ್ತಲೆ ವಿಡಿಯೋ ಮಾಡಿಕೊಂಡಿದ್ದ. ಯಾರಿಗಾದರೂ ವಿಷಯ ತಿಳಿಸಿದರೆ ವಿಡಿಯೋಗಳನ್ನು ಜಾಲತಾಣದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಸಿದ್ದ. ಮರ್ಯಾದೆಗೆ ಅಂಜಿದ ಮಹಿಳೆ ಯಾರಿಗೂ ವಿಷಯ ತಿಳಿಸಿರಲಿಲ್ಲ. ಇದನ್ನೇ ಬಳಸಿಕೊಂಡ ಆರೋಪಿ ರಮೇಶ ಒಂದೂವರೆ ವರ್ಷದಿಂದ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದು, ಆಕೆಯ ಬಳಿ ಇದ್ದ ಚಿನ್ನಾಭರಣ ಮತ್ತು ನಾಲ್ಕೈದು ಲಕ್ಷ ಹಣ ಪಡೆದು ವಂಚಿಸಿದ್ದಾನೆ. ಈ ವಿಚಾರ ಪತಿಗೆ ಗೊತ್ತಾಗಿದ್ಲ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಈ ನಡುವೆ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಧೈರ್ಯ ಹೇಳಿ ಪೊಲೀಸರಿಗೆ ದೂರು ಕೊಡಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ