LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿವಾಹಿತೆಗೆ ಅಸಭ್ಯ ಮೆಸೇಜ್ ಮಾಡಿ ಕಿರುಕುಳ: ಯುವಕನ ಹತ್ಯೆಗೈದು ಶವಕ್ಕೆ ಬೆಂಕಿ

ಬಳ್ಳಾರಿ: ಸಂಬಂಧಿಯಾಗಿರುವ ವಿವಾಹಿತೆಗೆ ಜಾಲತಾಣದಲ್ಲಿ ಅಸಭ್ಯ ಮೆಸೇಜ್ ಮಾಡಿ ಕಿರುಕುಳ ನೀಡುತ್ತಿದ್ದ ಯುವಕನನ್ನು ಸಂಚು ರೂಪಿಸಿ ಕೊಲೆ ಮಾಡಿ ಮೃತದೇಹವನ್ನು ಸುಟ್ಟು ಹಾಕಿದ ಘಟನೆ ಬಳ್ಳಾರಿಯ ಮೋಕಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬಳ್ಳಾರಿಯ ಬಸವನಗೌಡ ಪಾಟೀಲ್(26) ಕೊಲೆಯಾದ ಯುವಕ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಸಂಬಂಧಿ ಶ್ವೇತಾ, ಆಕೆಯ ಪತಿ ದೊಡ್ಡಬಸವನಗೌಡ ಮತ್ತು ಸಹೋದರ ವಿಜಯ್ ಎಂಬವರನ್ನು ಮೋಕಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಳ್ಳಾರಿಯ ವೈದ್ಯಕೀಯ ಲ್ಯಾಬ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಬಸವನಗೌಡ ಪಾಟೀಲ್ ತನ್ನ ಸಹೋದರನ ಪತ್ನಿಯ ಸಹೋದರಿಯಾದ ಶ್ವೇತಾಗೆ ಹಲವು ತಿಂಗಳುಗಳಿಂದ ಅಸಭ್ಯ ಮೆಸೇಜ್ ಮಾಡಿ ಕಿರುಕುಳ ನೀಡುತ್ತಿದ್ದ. ಆತನ ಕಿರುಕುಳದಿಂದ ಬೇಸತ್ತ ಶ್ವೇತಾ ಪತಿಗೆ ವಿಷಯ ತಿಳಿಸಿದ್ದರು.

ನಂತರ ಬಸನಗೌಡನ ವಿಕೃತಿಗೆ ಅಂತ್ಯ ಹಾಡಲು ನಿರ್ಧರಿಸಿದ ಮೂವರು ಸಂಚು ರೂಪಿಸಿ ಆತನನ್ನು ಕರೆ ಮಾಡಿ ಕರೆಸಿಕೊಂಡಿದ್ದಾರೆ. ಕೊಲೆ ಮಾಡಿ 10 ಕಿಲೋಮೀಟರ್ ದೂರದಲ್ಲಿ ಮೃತದೇಹ ಸುಟ್ಟು ಹಾಕಿದ್ದಾರೆ ಎನ್ನಲಾಗಿದೆ. ತನಿಖೆ ಕೈಗೊಂಡ ಪೊಲೀಸರು ಮೃತನ ಮೊಬೈಲ್ ಕರೆ ಮತ್ತು ವಾಟ್ಸಾಪ್ ಸಂದೇಶಗಳನ್ನು ಪರಿಶೀಲಿಸಿದಾಗ ಕೊಲೆ ವಿಚಾರ ಬೆಳಕಿಗೆ ಬಂದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ