LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಲಕ್ಷ್ಮಿ ಬೆನ್ನಲ್ಲೇ ಗೃಹಜ್ಯೋತಿ ಯೋಜನೆಗೂ ಮೇಜರ್ ಸರ್ಜರಿಗೆ ಮುಂದಾದ ಸರ್ಕಾರ: ಇ-ಕೆವೈಸಿ ಮೂಲಕ ಮರುಪರಿಶೀಲನೆಗೆ ಸಿದ್ಧತೆ

ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳ ದುರ್ಬಳಕೆ ತಡೆಯಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಒಂದೊಂದೇ ಯೋಜನೆಗಳ ಪರುಷ್ಕರಣೆಗೆ ಮುಂದಾಗಿದೆ. ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ ಬೆನ್ನಲ್ಲೇ ಮನೆಗೆ 200 ಯೂನಿಟ್​ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ಪರಿಷ್ಕರಣೆಗೂ ನಿರ್ಧರಿಸಿದೆ.

ಗೃಹಜ್ಯೋತಿ ಪರಿಷ್ಕರಣೆ ಬಗ್ಗೆ ಎರಡು ದಿನಗಳಲ್ಲಿ ಸರ್ಕಾರದಿಂದ ಈ ಬಗ್ಗೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದ್ದು, ಪರಿಷ್ಕರಣೆ ವಿಚಾರವಾಗಿ ಇಲಾಖೆಗೆ ನಿಖರ ಮಾನದಂಡ ಪ್ರಕಟವಾಗಬಹುದೆಂದು ನಿರೀಕ್ಷಿಸಲಾಗಿದೆ.

ಗೃಹಜ್ಯೋತಿ ಯೊಜನೆಯಡಿ ರಾಜ್ಯದ 1.70 ಕೋಟಿ ಕುಟುಂಬಗಳು ಉಚಿತ ವಿದ್ಯುತ್ ಪಡೆಯುತ್ತಿವೆ. ಮಹತ್ವಾಕಾಂಕ್ಷಿ ಈ ಯೋಜನೆಗೆ ಪ್ರತಿ ತಿಂಗಳು 440 ಕೋಟಿ ರೂಪಾಯಿ ಹಣವನ್ನು ಸರ್ಕಾರ ವೆಚ್ಚ ಮಾಡುತ್ತಿದೆ. ಆದರೆ ಹಲವರು ಗೃಹಬಳಕೆ ಹೆಸರಿನಲ್ಲಿ‌ ವಾಣಿಜ್ಯ ಬಳಕೆಗೂ ಫ್ರೀ ವಿದ್ಯುತ್ ಬಳಕೆ ಮಾಡುತ್ತಿರುವ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಪ್ರಾಪರ್ಟಿ, ಮಳಿಗೆಗಳಿಗೆ ಫ್ರೀ ವಿದ್ಯುತ್ ‌ಪಡೆದವರಿಗೆ ಬಿಸಿ ಮುಟ್ಟಿಸಲು ಸಿದ್ಧತೆ ನಡೆದಿದ್ದು, ಉಚಿತ ವಿದ್ಯುತ್ ಪಡೆಯುತ್ತಿರುವ ಹೊರ ರಾಜ್ಯದ ಜನರಿಗೂ ಶಾಕ್ ನೀಡಲು ಸರ್ಕಾರ ಮುಂದಾಗಿದೆ. ಆಧಾರ್, ಇ-ಕೆವೈಸಿ, ಮೊಬೈಲ್​ ನಂಬರ್ ಮೂಲಕ ಮರುಪರಿಶೀಲನೆ ನಡೆಯಲಿದ್ದು, ಸೇವಾ ಸಿಂಧು ಪೋರ್ಟಲ್​ನಲ್ಲಿ ಇದಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ.

ಇನ್ನು ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಮಾಹಿತಿ ನೀಡಿರುವ ಸಿಎಂ ಡಿ.ಕೆ. ಶಿವಕುಮಾರ್​​, ವೋಟ್ ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆ ಕೊಡುತ್ತೇವೆ ಎಂದಿದ್ದಾರೆ. ಈ ಹಿಂದೆ ತರಾತುರಿಯಲ್ಲಿ ಫಲಾನುಭವಿಗಳು ಯಾರದ್ದೋ ನಂಬರ್ ಕೊಟ್ಟಿದ್ದಾರೆ. ಹೀಗಾಗಿ ಗೃಹಲಕ್ಷ್ಮಿ ಹಣ ಯಾರದ್ದೋ ಅಕೌಂಟ್​ಗೆ ಹೋಗ್ತಿದೆ. ಅದರ ಬದಲು ಫಲಾನುಭವಿಗಳ ಖಾತೆಗೇ ಹಣ ಸಂದಾಯವಾಗಬೇಕು. ನಾವು ಕರ್ನಾಟಕದವರಿಗೆ ಮಾತ್ರ ಗ್ಯಾರಂಟಿಗಳನ್ನು ಕೋಡೋದು ಎಂದು ಸ್ಪಷ್ಟಪಡಿಸಿದರು.

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಬಿಜೆಪಿ ನಾಯಕರು ಅನಗತ್ಯವಾಗಿ ರೋಪಗಳನ್ನು ಮಾಡುತ್ತಿದ್ದಾರೆ. ಅರ್ಹಫಲಾನುಭವಿಗಳಿಗೆ ಸಿಗಬೇಕು ಆ ನಟ್ಟಿನಲ್ಲಿ ಮಾತ್ರ ಕ್ರಮಕೈಗೊಳ್ಳಲಾಗುತ್ತಿದೆ ಎಣ್ದರು.

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ವಿಪಕ್ಷ ಬಿಜೆಪಿಗರಿಗೆ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ ಕೌಂಟರ್​​ ಕೊಟ್ಟಿದ್ದು, ಬಿಜೆಪಿ ತಮ್ಮ ಕಾರ್ಯಕರ್ತರಿಗೆ ಗ್ಯಾರಂಟಿ ಬೇಡ ಅಂತಾ ಅಭಿಯಾನ ಮಾಡಲಿ. ಅವರಿಗೆ ಗ್ಯಾರಂಟಿ ಬೇಡ ಅಂದ್ರೆ ಬೇಡ, ಬೇರೆಯವರು ಪಡೀತಾರೆ. ಆದರೆ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ. ಅರ್ಹರಿಗೆ ಗ್ಯಾರಂಟಿ ಸಿಗಬೇಕೆಂದು ಪರಿಷ್ಕರಣೆ ಮಾಡಲಾಗ್ತಿದೆ ಎಂದವರು ಹೇಳಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ