LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಕಿನ್‌ಕೇರ್ ಅಲ್ಲವೇ ಅಲ್ಲ: ಕೊನೆಗೂ ತಮ್ಮ ಅಂದದ ಅಸಲಿ ರಹಸ್ಯ ಬಿಚ್ಚಿಟ್ಟ ನಟಿ ರಶ್ಮಿಕಾ ಮಂದಣ್ಣ

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸದ್ಯ ಕೃತಿ ಸನೋನ್ ಮತ್ತು ಶಾಹಿದ್ ಕಪೂರ್ ನಟನೆಯ ‘ಕಾಕ್‌ಟೇಲ್ 2’ ಚಿತ್ರದ ಬಿಡುಗಡೆಯ ತಯಾರಿಯಲ್ಲಿದ್ದಾರೆ. ಇದರ ನಡುವೆ ಇನ್‌ಸ್ಟಾಗ್ರಾಮ್‌ನಲ್ಲಿ ಅವರು ನಡೆಸಿದ ಸಂವಾದವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ. ಅಭಿಮಾನಿಯೊಬ್ಬರು ಕೇಳಿದ ಸೌಂದರ್ಯದ ರಹಸ್ಯದ ಪ್ರಶ್ನೆಗೆ ರಶ್ಮಿಕಾ ನೀಡಿರುವ ಉತ್ತರ ಎಲ್ಲರ ಗಮನ ಸೆಳೆದಿದೆ. ಸಾಮಾನ್ಯವಾಗಿ ನಟಿಯರು ತಮ್ಮ ಅಂದದ ರಹಸ್ಯಕ್ಕಾಗಿ ಬ್ಯೂಟಿ ಪ್ರಾಡಕ್ಟ್‌ಗಳು ಅಥವಾ ದುಬಾರಿ ಚಿಕಿತ್ಸೆಗಳನ್ನು ಶಿಫಾರಸು ಮಾಡುತ್ತಾರೆ. ಆದರೆ ರಶ್ಮಿಕಾ ಮಾತ್ರ ತಮ್ಮ ಸೌಂದರ್ಯದ ಹಿಂದೆ ಯಾವುದೇ ಸ್ಕಿನ್‌ಕೇರ್ ದಿನಚರಿ ಇಲ್ಲ ಎಂದು ಹೇಳುವ ಮೂಲಕ ಎಲ್ಲರನ್ನು ಆಶ್ಚರ್ಯಚಕಿತರನ್ನಾಗಿಸಿದ್ದಾರೆ.

ನಿಮ್ಮ ಸೌಂದರ್ಯದ ರಹಸ್ಯವೇನು ಎಂದು ಅಭಿಮಾನಿಯೊಬ್ಬರು ಕೇಳಿದಾಗ, ರಶ್ಮಿಕಾ ಭಾವನಾತ್ಮಕ ಮತ್ತು ಆಪ್ತವಾದ ಉತ್ತರವೊಂದನ್ನು ನೀಡಿದ್ದಾರೆ. ನಿಮ್ಮ ಒಳಗಿನ ಮಗುವನ್ನು ಸದಾ ಜೀವಂತವಾಗಿಡುವ ಮತ್ತು ನಿಮ್ಮ ಸಂತೋಷವನ್ನು ಗೌರವಿಸುವಂತಹ ಜನರೊಂದಿಗೆ ಇರುವುದೇ ನಿಜವಾದ ಸೌಂದರ್ಯ ಎಂದು ಅವರು ಹೇಳಿದ್ದಾರೆ. ತಮ್ಮ ಸುತ್ತಲೂ ಸದಾ ಧನಾತ್ಮಕ ಚಿಂತನೆಯುಳ್ಳ ಜನರನ್ನು ಹೊಂದುವುದು ಮತ್ತು ಸದಾ ಸಂತೋಷದಿಂದ ಇರುವುದೇ ತಮ್ಮ ಮುಖದ ಹೊಳಪಿಗೆ ಕಾರಣ ಎಂದು ಅವರು ಹಂಚಿಕೊಂಡಿದ್ದಾರೆ. ಬಾಹ್ಯ ಸೌಂದರ್ಯಕ್ಕಿಂತ ಮಾನಸಿಕ ನೆಮ್ಮದಿ ಮತ್ತು ಸಂತೋಷ ಮುಖ್ಯ ಎಂಬ ಅವರ ಈ ಮಾತುಗಳಿಗೆ ಅಭಿಮಾನಿಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದೇ ಸಂವಾದದಲ್ಲಿ ತಮ್ಮ ಜೀವನದ ಬಗ್ಗೆ ಮಾತನಾಡಿದ ಅವರು, ಸದ್ಯದ ತಮ್ಮ ಬದುಕು ಒಂದು ಸುಂದರ ಕನಸು ನನಸಾದಂತೆ ಇದೆ ಎಂದಿದ್ದಾರೆ. ಅಲ್ಲದೆ ಜೀವನದ ಅತ್ಯಂತ ಸಂತೋಷದ ಕ್ಷಣ ಯಾವುದು ಎಂಬ ಪ್ರಶ್ನೆಗೆ, ತಮ್ಮ ಆಪ್ತ ಗೆಳೆಯ ಹಾಗೂ ಪತಿ ವಿಜಯ್ ದೇವರಕೊಂಡ ಅವರನ್ನು ವಿವಾಹವಾಗಿದ್ದೇ ಜೀವನದ ಬೆಸ್ಟ್ ಮೂಮೆಂಟ್ ಎಂದು ಬರೆದುಕೊಂಡಿದ್ದಾರೆ.

ಈ ಸಂವಾದದ ಬಳಿಕ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ತೆಲಂಗಾಣದ ತುಂಬನಪೇಟೆ ಗ್ರಾಮದಲ್ಲಿ ನಡೆದ ವಿದ್ಯಾರ್ಥಿವೇತನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಈ ಸಮಾರಂಭಕ್ಕೆ ರಶ್ಮಿಕಾ ಸಾಂಪ್ರದಾಯಿಕ ಶೈಲಿಯಲ್ಲಿ ಕಂಗೊಳಿಸಿದ್ದರು. ಕಂದು ಬಣ್ಣದ ಬಾರ್ಡರ್ ಇರುವ ಸಾಸಿವೆ ಹಳದಿ ಬಣ್ಣದ ಸೀರೆಯನ್ನು ಉಟ್ಟು, ಅದಕ್ಕೆ ಹೊಂದುವಂತಹ ಸರಳವಾದ ಚಿನ್ನದ ಆಭರಣಗಳನ್ನು ಧರಿಸಿದ್ದರು. ಕನಿಷ್ಠ ಮೇಕಪ್, ಸಣ್ಣ ಬಿಂದಿ ಹಾಗೂ ಸಿಂಧೂರದೊಂದಿಗೆ ತಲೆಗೆ ಮಲ್ಲಿಗೆ ಮುಡಿದು ಸರಳ ಹಾಗೂ ಆಕರ್ಷಕ ಲುಕ್‌ನಲ್ಲಿ ಮಿಂಚಿದ ನಟಿಯ ಫೋಟೋಗಳು ಈಗ ಇಂಟರ್ನೆಟ್‌ನಲ್ಲಿ ವೈರಲ್ ಆಗುತ್ತಿವೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ