LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

‘ಮಜಾಭಾರತ’ ಖ್ಯಾತಿಯ ಹಾಸ್ಯ ಕಲಾವಿದ ಸಿದ್ದಾರ್ಥ ಅನುಮಾನಾಸ್ಪದ ಸಾವು

ಬೀದರ್: ‘ಮಜಾಭಾರತ’ ಕಾಮಿಡಿ ರಿಯಾಲಿಟಿ ಶೋ ಖ್ಯಾತಿಯ ಸಿದ್ದಾರ್ಥ ಪರಸನೂರ(36) ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ಬೀದರ್ ಜಿಲ್ಲೆ ಹುಮ್ನಾಬಾದ್ ತಾಲೂಕಿನ ಹಣಕುಣಿ ರಸ್ತೆಯ ಪಕ್ಕದ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ. ಹುಮ್ನಾಬಾದ್ ಟೀಚರ್ಸ್ ಕಾಲೋನಿಯಲ್ಲಿ ವಾಸವಾಗಿದ್ದ ಸಿದ್ದಾರ್ಥ ಜೂನ್ 13 ರಂದು ಸ್ನೇಹಿತರೊಂದಿಗೆ ಮನೆಯಿಂದ ಹೊರ ಹೋಗಿದ್ದವರು ಸೋಮವಾರ ಶವವಾಗಿ ಪತ್ತೆಯಾಗಿದ್ದಾರೆ. ಮೂರು ದಿನವಾದರೂ ಸಿದ್ದಾರ್ಥ ಮನೆಗೆ ಆಗಮಿಸಲಿಲ್ಲ. ಸೋಮವಾರ ಬೆಳಗ್ಗೆ ಅವರ ಕುಟುಂಬದವರು ಹುಮ್ನಾಬಾದ್ ಪೊಲೀಸ್ ಠಾಣೆಗೆ ನಾಪತ್ತೆ ದೂರು ನೀಡಿದ್ದರು. ಸೋಮವಾರ ಮಧ್ಯಾಹ್ನ ಅವರ ಶವ ಪತ್ತೆಯಾಗಿದೆ.

ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಪೊಲೀಸರು ಮಾಹಿತಿ ಸಂಗ್ರಹಿಸಿದ್ದು, ನಂತರದಲ್ಲಿ ಶವ ಪತ್ತೆಯಾಗಿದೆ. ಮೃತದೇಹವನ್ನು ಬ್ರಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಸಿದ್ಧಾರ್ಥ ಸಾವಿಗೆ ನಿಖರ ಕಾರಣ ಗೊತ್ತಾಗಿಲ್ಲ. ಹುಮ್ನಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

‘ಮಜಾಭಾರತ’ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ಸಿದ್ದಾರ್ಥ ಗಮನ ಸೆಳೆದಿದ್ದರು. ಅಭಿನಯದ ಮೂಲಕ ಮನರಂಜನೆ ನೀಡಿದ್ದರು. ಹುಮ್ನಾಬಾದ್ ಟೀಚರ್ಸ್ ಕಾಲೋನಿಯಲ್ಲಿ ವಾಸಿಸುತ್ತಿದ್ದ ಸಿದ್ದಾರ್ಥ ಮೃತದೇಹ ಹುಮ್ನಾಬಾದ್ ಹೊರವಲಯದ ಖಾಲಿ ಜಾಗದಲ್ಲಿ ಪತ್ತೆಯಾಗಿದ್ದು, ಅನುಮಾನಕ್ಕೆ ಕಾರಣವಾಗಿದೆ. ಅವರದು ಸಹಜ ಸಾವಲ್ಲ ಎನ್ನುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ