LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಐಎಎಫ್ ಅಧಿಕಾರಿಯ ಪತ್ನಿಗೆ ವಂಚಿಸಿ ಅತ್ಯಾಚಾರ;ನಾಗಪುರದಲ್ಲಿ ತಡವಾಗಿ ಬೆಳಕಿಗೆ ಬಂದ ಭೀಕರ ಕೃತ್ಯ

ನಾಗಪುರದಲ್ಲಿ ಭಾರತೀಯ ವಾಯುಪಡೆಯ (ಐಎಎಫ್) ಅಧಿಕಾರಿಯೊಬ್ಬರ ಪತ್ನಿಯ ಮೇಲೆ ಅತ್ಯಾಚಾರ ಎಸಗಿ, ಬ್ಲ್ಯಾಕ್‌ಮೇಲ್ ಮಾಡಿ ಹಾಗೂ ಬಲವಂತವಾಗಿ ಧರ್ಮ ಮತಾಂತರಕ್ಕೆ ಯತ್ನಿಸಿರುವ ಆಘಾತಕಾರಿ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಸಂಚಲನ ಮೂಡಿಸಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ೨೪ ವರ್ಷದ ಸಂತ್ರಸ್ತ ಮಹಿಳೆಯು, ತನ್ನ ಹಳೆಯ ಸಹಪಾಠಿ ಎನ್ನಲಾದ ಅಯಾಜ್ ತಾಜ್ ಮದಾರೆ ಎಂಬಾತನಿಂದ ತಪ್ಪಿಸಿಕೊಳ್ಳಲು ತೀವ್ರವಾಗಿ ಹೋರಾಡುತ್ತಿರುವುದು ಕಂಡುಬಂದಿದೆ. ಆತ ಮಹಿಳೆಯ ಕೈಗಳನ್ನು ಬಲವಾಗಿ ಹಿಡಿದುಕೊಂಡು, ಧಾರ್ಮಿಕ ಶ್ಲೋಕಗಳನ್ನು ಪಠಿಸುತ್ತಾ ಆಕೆಯ ಮೇಲೆ ಬಲವಂತವಾಗಿ ಮತಾಂತರ ಪ್ರಕ್ರಿಯೆ ನಡೆಸಲು ಯತ್ನಿಸುತ್ತಿದ್ದಾನೆ. ಈ ವೇಳೆ ಮಹಿಳೆಯು ಅತ್ಯಂತ ಆತಂಕದಿಂದ “ನನ್ನನ್ನು ಬಿಟ್ಟುಬಿಡಿ” (ಛೋಡೋ ಮುಜೆ) ಎಂದು ಜೋರಾಗಿ ರೋದಿಸುತ್ತಾ, ಆತನ ಹಿಡಿತದಿಂದ ಮುಕ್ತಿ ಪಡೆಯಲು ಯತ್ನಿಸುತ್ತಿರುವುದು ವಿಡಿಯೋದಲ್ಲಿದೆ. ಈ ಘಟನೆಯ ಬೆನ್ನಲ್ಲೇ ಆಕೆಯನ್ನು ಮತಾಂತರಗೊಳಿಸಲಾಗಿದೆ ಎಂದು ಘೋಷಿಸಿ, ಬಳಿಕ ಅತ್ಯಾಚಾರಕ್ಕೆ ಯತ್ನಿಸಲಾಗಿತ್ತು ಎಂದು ಮಹಿಳೆ ದೂರಿದ್ದಾರೆ.

ಘಟನೆಯ ಹಿನ್ನೆಲೆ: ಸಂತ್ರಸ್ತ ಮಹಿಳೆಯ ಪತಿ ಭಾರತೀಯ ವಾಯುಪಡೆಯಲ್ಲಿ ಅಧಿಕಾರಿಯಾಗಿದ್ದು, ಸದ್ಯ ಬೇರೆ ನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಹಿಳೆಯು ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದು, ೨೦೨೫ರ ಫೆಬ್ರವರಿಯಲ್ಲಿ ಆರೋಪಿ ಅಯಾಜ್ ಮದಾರೆ ಜಾಗ ಖರೀದಿಸುವ ನೆಪದಲ್ಲಿ ಆಕೆಯನ್ನು ಸಂಪರ್ಕಿಸಿದ್ದನು. ಮಾತುಕತೆಗಾಗಿ ವರ್ಧಾ ರಸ್ತೆಯಲ್ಲಿರುವ ಹೋಟೆಲ್‌ವೊಂದಕ್ಕೆ ಕರೆಸಿಕೊಂಡಿದ್ದ ಆತ, ಮಹಿಳೆಗೆ ನೀಡಿದ ಜ್ಯೂಸ್‌ನಲ್ಲಿ ಅಮಲು ಪದಾರ್ಥ ಬೆರೆಸಿದ್ದನು. ಇದನ್ನು ಕುಡಿದು ಮಹಿಳೆ ಪ್ರಜ್ಞೆ ತಪ್ಪಿದಾಗ ಆಕೆಯ ಮೇಲೆ ಅತ್ಯಾಚಾರ ಎಸಗಿ, ಆ ದೃಶ್ಯಗಳನ್ನು ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದನು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಬ್ಲ್ಯಾಕ್‌ಮೇಲ್ ಮತ್ತು ಸುಲಿಗೆ: ಅಶ್ಲೀಲ ವಿಡಿಯೋ ಹಾಗೂ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪಿಯು, ಮಹಿಳೆಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಷ್ಟೇ ಅಲ್ಲದೆ, ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್ ಮಾಡುವ ಮೂಲಕ ಆಕೆಯಿಂದ ಸುಮಾರು ೩.೦೯ ಲಕ್ಷ ರೂಪಾಯಿಗಳನ್ನು ದೋಚಿದ್ದಾನೆ. ಜೊತೆಗೆ ಇಸ್ಲಾಂ ಧರ್ಮಕ್ಕೆ ಮತಾಂತರವಾಗುವಂತೆ ತೀವ್ರ ಒತ್ತಡ ಹೇರಿ, ಧಾರ್ಮಿಕ ಆಚರಣೆಗಳ ಹೆಸರಿನಲ್ಲಿ ಹಲವು ವಿಧಿವಿಧಾನಗಳನ್ನು ಬಲವಂತವಾಗಿ ಮಾಡಿಸಿದ್ದಾನೆ ಎಂದು ಮಹಿಳೆ ತಿಳಿಸಿದ್ದಾರೆ.

ಪೊಲೀಸ್ ಕ್ರಮ: ಸುಮಾರು ಒಂದು ವರ್ಷದ ಹಿಂದೆ ನಡೆದಿದ್ದ ಈ ಭೀಕರ ಘಟನೆಯ ಬಗ್ಗೆ ಮಹಿಳೆಯು ಇತ್ತೀಚೆಗಷ್ಟೇ ತನ್ನ ಪತಿಗೆ ಮಾಹಿತಿ ನೀಡಿದ್ದು, ಬಳಿಕ ನಾಗಪುರ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಖ್ಯ ಆರೋಪಿ ಅಯಾಜ್ ತಾಜ್ ಮದಾರೆ ಮತ್ತು ಆತನಿಗೆ ಸಹಕರಿಸಿದ ಅಮೀನ್ ಶೇಖ್ ಎಂಬಾತನನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಮಧ್ಯಪ್ರದೇಶದ ತಾಮಿಯಾ ನಿವಾಸಿ ಹಜರತ್ ಮೌಲಾನಾ ಎಂಬ ಮೂರನೇ ಆರೋಪಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ