LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮೀಣ ಭಾಗದಲ್ಲಿ ಸೇವೆ ಮಾಡಿ, ನಗರಗಳತ್ತ ಜನರು ವಲಸೆ ಬರುವುದನ್ನು ತಪ್ಪಿಸಿ: ವೈದ್ಯ ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಕರೆ

ಬೆಂಗಳೂರು: ವೈದ್ಯರು ಕಣ್ಣಿಗೆ ಕಾಣುವ ದೇವರು. ಜನ ಎಷ್ಟೇ ಕಷ್ಟ ಇದ್ದರೂ ಬಹಳ ನಂಬಿಕೆ ಹಾಗೂ ವಿಶ್ವಾಸದಿಂದ ವೈದ್ಯರ ಬಳಿ ಹೋಗುತ್ತಾರೆ. ನೀವು ಅವರ ನಂಬಿಕೆ ಉಳಿಸಿಕೊಂಡು ಸೇವೆ ಮಾಡಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ವೈದ್ಯ ಪದವೀಧರರಿಗೆ ಕಿವಿಮಾತು ಹೇಳಿದರು.

ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಮಂಗಳವಾರ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಈ ವೃತ್ತಿಯಲ್ಲಿ ನಿಮಗೆ ನಿತ್ಯ ಸವಾಲು ಎದುರಾಗುತ್ತದೆ. ನಿಮ್ಮ ಮುಂದೆ ದೊಡ್ಡ ಸ್ಪರ್ಧೆ ಇದೆ. ನಾನು ಬೇರೆ ದೇಶಗಳಲ್ಲಿ ಪ್ರವಾಸ ಮಾಡಿದ್ದೇನೆ. ಅಲ್ಲಿನ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಭಾರತೀಯರು ಅದರಲ್ಲೂ ಕರ್ನಾಟಕದ ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ. ಇಲ್ಲಿರುವ ಗುಣಮಟ್ಟ ಭಾರತ ಮಾತ್ರವಲ್ಲ, ವಿಶ್ವದಲ್ಲೇ ಎಲ್ಲೂ ಇಲ್ಲ. ಇಲ್ಲಿ ತಯಾರಾದ ವೈದ್ಯರ ಪ್ರತಿಭೆ, ಗುಣಮಟ್ಟ, ಸೇವೆ ಹಾಗೂ ಬದ್ಧತೆಗೆ ಸರಿಸಾಟಿ ಯಾರೂ ಇಲ್ಲ ಎಂದರು.

ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಿ, ಜನ ನಗರಗಳತ್ತ ವಲಸೆ ಬರುವುದನ್ನು ತಪ್ಪಿಸಿ

ಭಾರತ ಈಗ ಸಾಮಾಜಿಕ ಹಾಗೂ ತಂತ್ರಜ್ಞಾನ ಪರಿವರ್ತನೆಯ ತಿರುವಿನಲ್ಲಿದೆ. ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅತ್ಯಾಧುನಿಕ ಅವಿಷ್ಕಾರ ಕಂಡಿದೆ. ನೀವು ಕೇವಲ ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆ ಒದಗಿಸುವುದರ ಬಗ್ಗೆ ಮಾತ್ರ ಗಮನ ಹರಿಸಬಾರದು. ಗ್ರಾಮೀಣ ಪ್ರದೇಶದಲ್ಲೂ ಆರೋಗ್ಯ ಸೇವೆ ಒದಗಿಸುವತ್ತ ಗಮನಹರಿಸಬೇಕು ಎಂದು ಕರೆ ನೀಡಿದರು.

ನಶೆ ಮುಕ್ತ ಭಾರತ, ನಶೆ ಮುಕ್ತ ಕರ್ನಾಟಕ, ನಶೆ ಮುಕ್ತ ಕ್ಯಾಂಪಸ್ ಮಾಡುವ ಅಭಿಯಾನ ಯಶಸ್ವಿಯಾಗಲಿ. ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ವೈದ್ಯರಾಗಿದ್ದು, ಬಹಳ ಆಸಕ್ತಿಯಿಂದ ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸಬೇಕು ಎಂದು ಈ ಖಾತೆ ಜವಾಬ್ದಾರಿ ಹೊತ್ತಿದ್ದಾರೆ. ಅವರ ಅವಧಿಯಲ್ಲಿ ಇಲಾಖೆಯನ್ನು ಬಹಳ ಶಿಸ್ತಿನಿಂದ ನಡೆಸುತ್ತಿದ್ದು, ಇಷ್ಟು ಶಿಸ್ತನ್ನು ನಾನು ಕಳೆದ 30 ವರ್ಷಗಳಲ್ಲಿ ನೋಡಿರಲಿಲ್ಲ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಯಾವುದೇ ಒಂದು ವಿವಿಯ ಶಕ್ತಿ ಎಂದರೆ ಅಲ್ಲಿನ ವಿದ್ಯಾರ್ಥಿಗಳ ಸಂಖ್ಯೆಯಲ್ಲ, ಪದವಿಗಳ ಸಂಖ್ಯೆಯೂ ಅಲ್ಲ. ಅಲ್ಲಿರುವ ಗುಣಮಟ್ಟದ ಶಿಕ್ಷಕರು. ಶಿಕ್ಷಕರು ವಿದ್ಯಾರ್ಥಿಗಳ ಮಾರ್ಗದರ್ಶಕರಾಗಬೇಕು, ಸಂಶೋಧನೆಗೆ ಪೂರಕವಾಗಿ ವಿದ್ಯಾರ್ಥಿಗಳಿಗೆ ರೋಲ್ ಮಾಡೆಲ್ ಗಳಾಗಿರಬೇಕು. ಎಲ್ಲರೂ ಜತೆಯಾಗಿ ಕೆಲಸ ಮಾಡೋಣ. ಮುಂದೆ ನಾವು ನೀವೆಲ್ಲರೂ ರಾಮನಗರದ ಕ್ಯಾಂಪಸ್ ನಲ್ಲಿ ಸಿಗೋಣ. ಕರ್ನಾಟಕ ಸರ್ಕಾರ ಈ ವಿವಿಗೆ ಅಗತ್ಯವಿರುವ ಎಲ್ಲಾ ಸಹಕಾರವನ್ನು ನೀಡಲು ಬದ್ಧವಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ನಾನು ಮಾಡುತ್ತಿರುವ ಮೊದಲ ಭಾಷಣವಿದು. ನಾನು ಹುಟ್ಟುತ್ತಾ ಕೃಷಿಕ, ವೃತ್ತಿಯಲ್ಲಿ ಉದ್ಯಮಿ, ಆಯ್ಕೆಯಲ್ಲಿ ಶಿಕ್ಷಣತಜ್ಞ, ಆಸಕ್ತಿಯಲ್ಲಿ ರಾಜಕಾರಣಿ. ರಾಜೀವ್ ಗಾಂಧಿ ವಿವಿ ದೇಶದ ಅತಿದೊಡ್ಡ ಆರೋಗ್ಯ ವಿವಿಗಳಲ್ಲಿ ಒಂದಾಗಿದೆ. 1044 ಅಫಿಲಿಯೇಟೆಡ್ ಕಾಲೇಜುಗಳಿವೆ. ಲಕ್ಷಾಂತರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ ಪ್ರತಿ ವರ್ಷ 13,940 ವೈದ್ಯರ ತಯಾರಿ

ನಮ್ಮ ರಾಜ್ಯ ಪ್ರತಿ ವರ್ಷ 72 ಸಾವಿರ ಪದವೀಧರರನ್ನು ತಯಾರಿಸುತ್ತಿದೆ. ವರ್ಷಕ್ಕೆ 13,940 ವೈದ್ಯರನ್ನು ಕೊಡುಗೆಯಾಗಿ ನೀಡುತ್ತಿದ್ದು, ಜಗತ್ತಿನಲ್ಲೇ ಅತಿ ಹೆಚ್ಚು ವೈದ್ಯರನ್ನು ನೀಡುತ್ತಿರುವುದು ನಮ್ಮ ರಾಜ್ಯ. ಅಟಲ್ ಬಿಹಾರಿ ವಾಜಪೇಯಿ ಅವರು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಶಂಕುಸ್ಥಾಪನೆಗೆ ಬಂದಾಗ, ವಿಶ್ವದ ನಾಯಕರು ಮೊದಲು ದೆಹಲಿಗೆ ಬಂದು, ನಂತರ ದೇಶದ ಇತರೆ ಭಾಗಗಳಿಗೆ ಹೋಗುತ್ತಿದ್ದರು. ಈಗ ಕಾಲ ಬದಲಾಗುತ್ತಿದೆ. ಮೊದಲು ಬೆಂಗಳೂರಿಗೆ ಬಂದು ನಂತರ ದೇಶದ ಇತರೆ ಭಾಗಗಳಿಗೆ ಹೋಗುತ್ತಿದ್ದಾರೆ ಎಂದು ಹೇಳಿದರು.

ನಮ್ಮ ರಾಜ್ಯ ಕೇವಲ ಐಟಿ ಕ್ಷೇತ್ರ ಮಾತ್ರವಲ್ಲ ಇತರೆ ಕ್ಷೇತ್ರಗಳಲ್ಲಿ ಪ್ರತಿಭಾವಂತ ಮಾನವ ಸಂಪನ್ಮೂಲವನ್ನು ಹೊಂದಿದೆ. ಬೆಂಗಳೂರಿನಲ್ಲಿ 26 ಲಕ್ಷ ಐಟಿ ವೃತ್ತಿಪರರಿದ್ದಾರೆ. ಕ್ಯಾಲಿಫೋರ್ನಿಯಾದಲ್ಲಿ 13 ಲಕ್ಷ ಐಟಿ ವೃತ್ತಿಪರರಿದ್ದಾರೆ. ನಮ್ಮ ರಾಜ್ಯದಲ್ಲೇ ಅತಿ ಹೆಚ್ಚು ಮೆಡಿಕಲ್ ಕಾಲೇಜುಗಳಿವೆ. 72 ವೈದ್ಯಕೀಯ ಕಾಲೇಜುಗಳಿದ್ದು, ದೇಶದ ಬೇರೆ ಯಾವುದೇ ರಾಜ್ಯಗಳಲ್ಲಿ ಇಲ್ಲ. ಇದು ನಮ್ಮ ಶಕ್ತಿ. ಇಲ್ಲಿ ತಯಾರಾದ ಅತ್ಯುತ್ತಮ ವೈದ್ಯರು, ನರ್ಸ್ ಗಳು ವಿಶ್ವದಾದ್ಯಂತ ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ವಿವರಿಸಿದರು.

ರಾಜೀವ್ ಗಾಂಧಿ ವಿವಿ ಇದಕ್ಕೆಲ್ಲಾ ಆಧಾರಸ್ತಂಭವಾಗಿ ನಿಂತಿದೆ. ಈ ವಿವಿಗೆ ನಮ್ಮ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರಿನಲ್ಲಿದೆ. ಅವರು ಶಿಕ್ಷಣವು ಸಮಾಜದಲ್ಲಿ ಸಮಾನತೆ ತರುವ ಸಾಧನ ಎಂದು ಹೇಳಿದವರು. ಈ ವಿವಿ ಕಳೆದ 3 ದಶಕಗಳಲ್ಲಿ 8 ಲಕ್ಷ ಪದವೀಧರರನ್ನು ತಯಾರು ಮಾಡಿದೆ. ಸಮಾಜದ ಎಲ್ಲಾ ವರ್ಗಕ್ಕೆ ಆರೋಗ್ಯ ಸೇವೆ ನೀಡಿ ಕಾಪಾಡುವುದು ಈ ವಿವಿಯ ಮೂಲ ಉದ್ದೇಶ ಎಂದರು.

ನಾನು ವಿದ್ಯಾರ್ಥಿ ಜೀವನದಲ್ಲೇ ರಾಜಕೀಯ ಪ್ರವೇಶಿಸಿದ ಕಾರಣ ಪದವಿ ಪಡೆಯಲು ಆಗಿರಲಿಲ್ಲ. ನಾನು 2008ರಲ್ಲಿ 47 ವರ್ಷವಾದಾಗ ಮೈಸೂರು ವಿವಿಯಲ್ಲಿ ಪದವಿ ಪಡೆದೆ. ನಾನು ಬಂಗಾರಪ್ಪ, ಎಸ್.ಎಂ ಕೃಷ್ಣ ಅವರ ಸರ್ಕಾರದಲ್ಲಿ ಸಚಿವನಾಗಿದ್ದೆ. ಆದರೆ ಪದವಿ ಪಡೆದಾಗ ಆದಾಗ ಆದ ಸಂತೋಷ ಬೇರೆ ಯಾವಾಗಲೂ ಆಗಿರಲಿಲ್ಲ. ಇಂದು ದೇವರ ಕೃಪೆಯಿಂದ ನಾನು ನಿಮ್ಮೆಲ್ಲರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಇತಿಹಾಸ ಮರುಕಳಿಸುತ್ತದೆ. ನೀವು ಇಂದು ಪದವೀಧರರಾಗಿದ್ದೀರಿ. ನಿಮ್ಮ ಮುಂದೆ ಉತ್ತಮ ಭವಿಷ್ಯವಿದೆ. ಇಡೀ ವಿಶ್ವ ನಮ್ಮತ್ತ ಮುಖ ಮಾಡಿದೆ. ನೀವು ಈ ವೃತ್ತಿಯನ್ನು ಆಯ್ಕೆ ಮಾಡಿಕೊಂಡಿರುವುದಕ್ಕೆ ಧನ್ಯವಾದಗಳು. ನೀವು ಬದುಕಿನಲ್ಲಿ ಆದರ್ಶ, ಗುರಿ ಇಟ್ಟುಕೊಂಡು ಸಾಧನೆ ಮಾಡಲು ಹೊರಟಿದ್ದೀರಿ. ನಿಮಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ