LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಮಿಳುನಾಡಿನಲ್ಲಿ ಬ್ಲಾಸ್ಟ್ ಸಿನಿಮಾದ ಭರ್ಜರಿ ಕಲೆಕ್ಷನ್: ಸಣ್ಣ ಬಜೆಟ್ ಚಿತ್ರದ ದೊಡ್ಡ ಸಾಹಸಕ್ಕೆ ಪ್ರೇಕ್ಷಕರು ಫಿದಾ

ಸ್ಯಾಂಡಲ್‌ವುಡ್ ಸೇರಿದಂತೆ ದಕ್ಷಿಣ ಭಾರತದ ಖ್ಯಾತ ನಟ ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಬ್ಲಾಸ್ಟ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆ ಬರೆಯುತ್ತಿದೆ. ಸಣ್ಣ ಬಜೆಟ್‌ನಲ್ಲಿ ಮೂಡಿಬಂದ ಈ ಸಿನಿಮಾ ಪ್ರೇಕ್ಷಕರಿಂದ ಭರ್ಜರಿ ಪ್ರಶಂಸೆ ಪಡೆದುಕೊಂಡಿದ್ದು, ಥಿಯೇಟರ್‌ಗಳಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಚಿತ್ರದಲ್ಲಿ ಅರ್ಜುನ್ ಜೊತೆಗೆ ಅಭಿರಾಮಿ ಮತ್ತು ಪ್ರೀತಿ ಮುಖುಂದನ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಇತ್ತೀಚಿನ ಸಿನಿ ವ್ಯಾಪಾರದ ವರದಿಗಳ ಪ್ರಕಾರ, ಈ ಚಿತ್ರವು ವಿಶ್ವಾದ್ಯಂತ ಬರೋಬ್ಬರಿ 70 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಬ್ಲಾಕ್‌ಬಸ್ಟರ್ ಲಿಸ್ಟ್ ಸೇರಿದೆ. ಕೇವಲ ತಮಿಳುನಾಡು ಬಾಕ್ಸ್ ಆಫೀಸ್ ಒಂದರಲ್ಲೇ ಸಿನಿಮಾ ಸುಮಾರು 30 ಕೋಟಿ ರೂಪಾಯಿ ಒಟ್ಟು ಗಳಿಕೆ ಮಾಡಿದೆ ಎಂದು ತಿಳಿದುಬಂದಿದೆ. ಕಡಿಮೆ ಬಜೆಟ್‌ನ ಸಿನಿಮಾವೊಂದಕ್ಕೆ ತಮಿಳುನಾಡಿನಲ್ಲಿ ಈ ಮಟ್ಟದ ಕಲೆಕ್ಷನ್ ಲಭಿಸಿರುವುದು ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ.

ಬಹುತೇಕ ಎಲ್ಲಾ ಪ್ರದೇಶಗಳಲ್ಲೂ ಚಿತ್ರವು ನಿರೀಕ್ಷೆಗೂ ಮೀರಿದ ಪ್ರದರ್ಶನ ನೀಡುತ್ತಿದ್ದು, ವೀಕ್ಷಕರನ್ನು ಚಿತ್ರಮಂದಿರಗಳತ್ತ ಸೆಳೆಯುತ್ತಿದೆ. ನವನಿರ್ದೇಶಕ ಸುಭಾಷ್ ರಾಜ್ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರಕ್ಕೆ ಎಜಿಎಸ್ ಎಂಟರ್‌ಟೈನ್‌ಮೆಂಟ್ ಬಂಡವಾಳ ಹೂಡಿದೆ. ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಈ ಸಿನಿಮಾಗೆ ಪವರ್‌ಫುಲ್ ಹಿನ್ನೆಲೆ ಸಂಗೀತ ಮತ್ತು ಹಾಡುಗಳನ್ನು ನೀಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ