ಬೆಂಗಳೂರು: ಹಿರಿಯ ನಟ ದೊಡ್ಡಣ್ಣ ಅವರ ಸಾವಿನ ಕುರಿತಾಗಿ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ಬೆಂಗಳೂರು ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಬದುಕಿರುವಾಗಲೇ ಮೃತಪಟ್ಟಿದ್ದಾರೆ ಎಂದು ಎಐ ಮೂಲಕ ಎಡಿಟ್ ಮಾಡಿ ಫೋಟೋ ವೈರಲ್ ಮಾಡಲಾಗಿದೆ. ಶ್ರದ್ಧಾಂಜಲಿ ಸಲ್ಲಿಸಲಾಗಿದೆ. ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಟ ದೊಡ್ಡಣ್ಣ ದೂರು ನೀಡಿದ್ದಾರೆ.
ಬದುಕಿರುವಾಗಲೇ ಸತ್ತಿದ್ದಾರೆ ಎಂದು ಪೋಸ್ಟ್ ಹಂಚಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗಿದೆ. ಇದರಿಂದ ನನಗೆ ಮಾನಸಿಕ ನೋವು, ಆಘಾತ ಉಂಟಾಗಿದೆ. ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೊಡ್ಡಣ್ಣ ದೂರು ನೀಡಿದ್ದಾರೆ. ಜೂನ್ 15ರಂದು ದೊಡ್ಡಣ್ಣ ದೂರು ನೀಡಿದ್ದಾರೆ. ಕೇಸ್ ದಾಖಲಿಸಿ ಸೈಬರ್ ಪೋಲೀಸರು ತನಿಖೆ ಕೈಗೊಂಡಿದ್ದಾರೆ.