LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಈಡಿಗ ಸಮುದಾಯದ ಗುರುಗಳಿಗೆ ಜೀವ ಬೆದರಿಕೆ; ಭದ್ರತೆ ಒದಗಿಸುವಂತೆ ಸಿಎಂ ಡಿಕೆಗೆ ಮನವಿ ಪತ್ರ

ಬೆಂಗಳೂರು: ಈಡಿಗ ಸಮುದಾಯದ ಗುರುಗಳಾದ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠ ಕಲಬುರ್ಗಿ ಶ್ರೀ ಶರಣಬಸವೇಶ್ವರ ಮಠ ಹಾವೇರಿ ಪೀಠಾಧಿಪತಿಗಳಾದ ಶ್ರೀ ಪ್ರಣವಾನಂದರಾಮ್ ಮಹಾಸ್ವಾಮಿಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಜೀವ ಬೆದರಿಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸ್ವಾಮೀಜಿಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠ ಟ್ರಸ್ಟ್ ಹಾಗೂ ಅತಿ ಹಿಂದುಳಿದ ಮಠಾಧೀಶರ ಮಹಾಸಭಾ ಸ್ವಾಮೀಜಿಗಳು ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಮುಖ್ಯಮಂತ್ರಿಗಳ ಸದಾಶಿವನಗರ ನಿವಾಸಕ್ಕೆ ಸ್ವಾಮೀಜಿಗಳು ಬುಧವಾರ ಭೇಟಿ ನೀಡಿ ಮನವಿ ಮಾಡಿದರು. ಸರ್ವಧರ್ಮ ಸಮಾಜದ ಶ್ರೀ ಸಂಗಮಾನಂದ ಸ್ವಾಮೀಜಿ, ವಿಶ್ವಕರ್ಮ ಸಮಾಜದ ಶ್ರೀ ದೊಡ್ಡೇಂದ್ರ ಸ್ವಾಮೀಜಿ, ಬಂಜಾರ ಸಮಾಜದ ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಕುಂಬಾರ ಸಮಾಜದ ಶ್ರೀ ಬಸವಮೂರ್ತಿ ಕುಂಬಾರ ಗುಡ್ಡಯ್ಯ ಸ್ವಾಮೀಜಿ, ಹೂಗಾರ ಸಮಾಜದ ಹಳ್ಳಿರಾಯ ನಾಟಿಕಾರ ಸ್ವಾಮೀಜಿ, ಅರೆ ಅಲೆಮಾರಿ ಸಮಾಜದ ಶ್ರೀ ಕರುಣಾಕರ ಸ್ವಾಮೀಜಿ, ಪಿಂಜಾರ ಸಮಾಜದ ಶ್ರೀ ಮರುಳಶಂಕರ ಸ್ವಾಮೀಜಿಗಳು ಮನವಿ ಸಲ್ಲಿಸಿದರು.

ಶ್ರೀ ಪ್ರಣಾವಾನಂದರಾಮ್ ಮಹಾಸ್ವಾಮಿಗಳು ಈಡಿಗ ಹಾಗೂ ಹಿಂದುಳಿದ ಸಮಾಜಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ಗೋಕರ್ಣದಲ್ಲಿ ನಡೆದ ಸಮಾಜ ಸಭೆಯಲ್ಲಿ ಧ್ವನಿ ಎತ್ತಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಸಮುದಾಯಗಳಿಗೂ ಸಮನಾಗಿ ಅನುದಾನ ಬಿಡುಗಡೆ ಮಾಡಬೇಕಿತ್ತು ಎಂದು ಆಗ್ರಹಿಸಿದ್ದರು. ಹೀಗಾಗಿ ಸ್ವಾಮೀಜಿಗಳ ವಿರುದ್ಧ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕುರುಬ ಸಮಾಜದ ಸಂಘಟನೆಗಳು ಹಾಗೂ ಅವುಗಳ ಕೆಲವು ಮುಖಂಡರು ಶ್ರೀಗಳ ವಿರುದ್ಧ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಟಿವಿ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳ ಕಾಮೆಂಟ್ ಗಳಲ್ಲಿ ಇದೇ ಸಮುದಾಯಕ್ಕೆ ಸೇರಿದವರು ಶ್ರೀಗಳನ್ನು ಕೊಲ್ಲುತ್ತೇವೆ ಎಂದು ಬರೆದಿದ್ದಾರೆ. ಜಾತಿಗಳ ಮಧ್ಯೆ ಘರ್ಷಣೆ ಆಗಬಾರದು ಹಾಗೂ ಶ್ರೀಗಳಿಗೆ ತೊಂದರೆ ಆಗಬಾರದು. ಹೀಗಾಗಿ ಪ್ರಣಾವಾನಂದರಾಮ್ ಮಹಾಸ್ವಾಮಿಗಳಿಗೆ ಭದ್ರತೆ ಒದಗಿಸಬೇಕು” ಎಂದು ಮನವಿ ಮಾಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ