ಬೆಂಗಳೂರು: ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ತಮ್ಮ ಬೆಂಬಲಿಗರೊಂದಿಗೆ ಭಾನುವಾರ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಮತ್ತು ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಅಖಂಡ ಶ್ರೀನಿವಾಸ ಮೂರ್ತಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಇತ್ತೀಚೆಗಷ್ಟೇ ಹೆಚ್.ಡಿ. ಕುಮಾರಸ್ವಾಮಿ ಅವರು ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ತೆರಳಿ ಪಕ್ಷಕ್ಕೆ ಆಹ್ವಾನ ನೀಡಿದ್ದರು. ಈಗ ಅಖಂಡ ಶ್ರೀನಿವಾಸ ಮೂರ್ತಿ ಪಕ್ಷ ಸೇರ್ಪಡೆಗೆ ಸಮಯ ನಿಗದಿಯಾಗಿದೆ. ಸಗಾಯಪುರಂ ಪುಟ್ಬಾಲ್ ಕ್ರೀಡಾಂಗಣದಲ್ಲಿ ಸಮಾವೇಶ ನಡೆಯಲಿದ್ದು, ಈ ಸಮಾವೇಶದಲ್ಲಿ ಅವರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.