LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿಯವರು ಸೌಜನ್ಯಕ್ಕಾದರೂ ನಮ್ಮನ್ನು ಕೇಳಬೇಕಿತ್ತು: ಆತ್ಮಸಾಕ್ಷಿಯಂತೆ ಮತದಾನ ಮಾಡುತ್ತೇನೆ: ಉಚ್ಛಾಟಿತ ಶಾಸಕ ಶಿವರಾಮ್ ಹೆಬ್ಬಾರ್ ಹೇಳಿಕೆ

ಬೆಂಗಳೂರು: ವಿಧಾನ ಪರಿಷತ್ 7 ಸ್ಥಾನಗಳಿಗೆ ಮತದಾನ ಆರಂಭವಾಗಿದ್ದು, ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಮೂರು ಪಕ್ಷಗಳ ಶಾಸಕರು ವಿಧಾನಸೌಧಕ್ಕೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ.

ಬಿಜೆಪಿಯಿಂದ ಉಚ್ಛಾಟಿತರಾಗಿರುವ ಶಾಸಕರಾದ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಹಾಗೂ ಬಸನಗೌಡ ಪಾಟೀಲ್ ಯಾವ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ವಿಧಾನಸೌಧದಲ್ಲಿ ಸುದ್ದಿಗಾರರೊಮ್ದಿಗೆ ಮಾತನಾಡಿದ ಶಾಸಕ ಶಿವರಾಮ್ ಹೆಬ್ಬಾರ್, ಬಿಜೆಪಿಯವರು ನಮ್ಮನ್ನು ಸೌಜನ್ಯಕ್ಕಾದರೂ ಬಿಜೆಪಿಗೆ ಮತಹಾಕುವಂತೆ ಕೇಳುತ್ತಾರೆ ಎಂದುಕೊಂಡಿದ್ದೆವು. ಆದರೆ ಬಿಜೆಪಿಯವರಾಗಲಿ ಜೆಡಿಎಸ್ ನವರಾಗಲಿ ಯಾರೂ ನಮ್ಮನ್ನು ಕೇಳಿಲ್ಲ. ಕಾಂಗ್ರೆಸ್ ನಾಯಕರು ನಮ್ಮನ್ನು ಸಂಪರ್ಕಿಸಿದ್ದರು. ಸ್ವತಃ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಅಭ್ಯರ್ಥಿಗೆ ಮತಹಾಕುವಂತೆ ಮನವಿ ಮಾಡಿಕೊಂಡಿದ್ದಾರೆ. ಆದರೆ ನಾವು ಇನ್ನೂ ಯಾರಿಗೆ ಮತ ಹಾಕಬೇಕೆಂದು ನಿರ್ಧರಿಸಿಲ್ಲ ಎಂದರು.

ಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ನಾವು ಭೇಟಿಯಾಗಿದ್ದೆವು. ನಮ್ಮ ಕ್ಷೇತ್ರದ ಅಭಿವೃದ್ಧಿಗೆ ಕ್ಷೇತ್ರದ ಜನರ ಅಭಿವೃದ್ಧಿಗೆ ಕೇಳಿದ್ದೆವು. ಆ ನಿಟ್ಟಿನಲ್ಲಿ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಆದಾಗ್ಯೂ ನಾವು ನಮ್ಮ ಆತ್ಮಸಾಕ್ಷಿಯಂತೆ ಮತದಾನ ಮಾಡುತ್ತೇವೆ. ನಮ್ಮ ಆತ್ಮಸಾಕ್ಷಿಗೆ ಏನನಸುತ್ತದೆ ಹಾಗೇ ಮತ ಹಾಕುತ್ತೇವೆ ಎಂದು ಹೇಳಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ