LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯತ್ನಾಳ್ ಗೆ ಕಾಂಗ್ರೆಸ್ ಟಿಕೆಟ್ ಆಫರ್ ಕೊಟ್ಟಿದ್ದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಲು ಕಾರಣ ನನ್ನ ಪಕ್ಷ ನಿಷ್ಠೆ ಹೊರತು ಬಿಜೆಪಿಗೆ ಕಮ್ ಬ್ಯಾಕ್ ಆಗಬೇಕು ಎಂಬ ಕಾರಣಕ್ಕೆ ಅಲ್ಲ. ಬಿಜೆಪಿಯವರು ನನ್ನನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳದಿದ್ದರೂ ನನಗೆ ಚಿಂತೆ ಇಲ್ಲ ಎಂದು ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಯತ್ನಾಳ್, ಬಿಜೆಪಿಗೆ ನಾನು ಕಬ್ ಬ್ಯಾಕ್ ಮಾಡಲು ಮತ ಹಾಕಿಲ್ಲ. ನನ್ನ ರಾಜಕೀಯ ಸ್ಟ್ಯಾಂಡ್ ಗಟ್ಟಿಯಾಗಿದೆ. ಕರ್ನಾಟಕ ಬಿಜೆಪಿಯಲ್ಲಿ ಭ್ರಷ್ಟ ಕುಟುಂಬ ರಾಜಕಾರಣ ನಡೆಯುತ್ತಿದೆ. ಅದು ಕೊನೆಗೊಳ್ಳುವವರೆಗೂ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಈ ಹಿಂದೆಯೂ ನಾನು ಪಕ್ಷ ನಿಷ್ಠೆ ತೋರಿದ್ದೆ. ಈಗಲೂ ನಾನು ಪಕ್ಷ ನಿಷ್ಠೆಯನ್ನು ಅನುಸರಿಸುತ್ತೇನೆ ಎಂದರು.

ರಾಜಕೀಯದಲ್ಲಿ ತಮ್ಮ ನಿಲುವು ದೃಢವಾಗಿದೆ ಎಂದು ಹೇಳಿದ ಅವರು, ಹಿಂದೊಮ್ಮೆ ಎಂಎಲ್‌ಸಿ ಆಗಿದ್ದಾಗ ನಡೆದ ಘಟನೆಯನ್ನು ಯತ್ನಾಳ್ ನೆನಪಿಸಿಕೊಂಡಿದ್ದು, ಶಂಕರ್ ಮೂರ್ತಿ ವಿರುದ್ಧ ಉಗ್ರಪ್ಪನವರು ಮಂಡಿಸಿದ್ದ ಅವಿಶ್ವಾಸ ನಿರ್ಣಯದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಂ.ಬಿ. ಪಾಟೀಲ್ ಅವರು ತಮ್ಮನ್ನು ಭೇಟಿ ಮಾಡಿದ್ದರು. ಸಿಂದಗಿ ಅಥವಾ ದೇವರಿಪ್ಪಳಿ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಹಾಗೂ ಸಾಕಷ್ಟು ಅಭಿವೃದ್ಧಿ ಹಣ ನೀಡುವುದಾಗಿ ಆಮಿಷವೊಡ್ಡಿ, ಅವಿಶ್ವಾಸ ನಿರ್ಣಯಕ್ಕೆ ಬೆಂಬಲ ನೀಡುವಂತೆ ಕೇಳಿದ್ದರು. ಆದರೆ, ತಾವು ಬಿಜೆಪಿ ಚಿಹ್ನೆಯಿಂದ ಆಯ್ಕೆಯಾಗಿದ್ದು, ತಮ್ಮ ನಿಷ್ಠೆ ಬಿಜೆಪಿಗೆ ಮಾತ್ರ ಎಂದು ಸ್ಪಷ್ಟಪಡಿಸಿ ಆ ಪ್ರಸ್ತಾಪವನ್ನು ತಿರಸ್ಕರಿಸಿದ್ದೆ. ಆ ಮತದಿಂದಾಗಿಯೇ ಡಿ.ಎಸ್. ಶಂಕರ್ ಮೂರ್ತಿ ಸಭಾಪತಿಯಾಗಿ ಮುಂದುವರೆಯಲು ಸಾಧ್ಯವಾಯಿತು ಎಂದು ಅವರು ನೆನಪಿಸಿಕೊಂಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ