LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಂಡ್ಯ ಮೇಡಂಗೂ ಟೋಪಿ ಹಾಕಿದ್ರು; ಅವರಿಗಾದರೂ ರಾಜ್ಯಸಭೆ ಟಿಕೆಟ್ ಕೊಟ್ಟಿದ್ರೆ ನಾವೇನು ಬೇಡಾ ಅಂತಿದ್ವಾ? ರೇವಣ್ಣ ಅಚ್ಚರಿ ಹೇಳಿಕೆ

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್​.ಡಿ. ದೇವೇಗೌಡರಿಗೆ ರಾಜ್ಯಸಭಾ ಸ್ಥಾನ ಕೈತಪ್ಪಿದ ಬಗ್ಗೆ ಪ್ರತಿಕ್ರಿಯಿಸಿರುವ ಶಾಅಸಕ ಹೆಚ್​​.ಡಿ. ರೇವಣ್ಣ, ದೇವೇಗೌಡರು ಅಧಿಕಾರಕ್ಕಾಗಿ ಎಂದಿಗೂ ಯಾರ ಬಾಗಿಲಿಗೂ ಹೋಗಿಲ್ಲ. ಪ್ರಧಾನಮಂತ್ರಿ ಹುದ್ದೆಯನ್ನೇ ಅವರು ತ್ಯಾಗ ಮಾಡಿದ್ದರು. ಹೀಗಿರುವಾಗ ರಾಜ್ಯಸಭೆ ಬಗ್ಗೆ ತಲೆಕೆಡಿಸಿಕೊಳ್ಳುತ್ತಾರಾ? ದೇವೇಗೌಡರು ಟಿಕೆಟ್ ಕೇಳಲು ಹೋಗಿದ್ದರಾ? ಅಥವಾ ಕುಮಾರಣ್ಣ ಟಿಕೆಟ್ ಕೇಳಲು ಹೋಗಿದ್ದರಾ? ಇಲ್ಲ ಎಂದು ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ರೇವಣ್ಣ, ರಾಜ್ಯಸಭಾ ಸ್ಥಾನಕ್ಕಾಗಿ ದೇವೇಗೌಡರು ಅಥವಾ ಕುಮಾರಸ್ವಾಮಿಯವರು ಯಾರನ್ನೂ ಕೇಳಿರಲಿಲ್ಲ. ಬಿಜೆಪಿಯವರೇ ಮೊದಲು ರಾಜ್ಯಸಭಾ ಸ್ಥಾನಕ್ಕೆ ದೇವೇಗೌಡರು ಮತ್ತು ಸದಾನಂದಗೌಡರ ಹೆಸರು ಹೇಳಿದರು. ಬಳಿಕ ಮಂಡ್ಯ ಮೇಡಂ ಸುಮಲತಾ ಅವರ ಹೆಸರು ಹೇಳಿದರು. ಅವರಿಗಾದರೂ ಟಿಕೆಟ್ ಕೊಟ್ಟರಾ ಅದೂ ಇಲ್ಲ ಎಂದಿದ್ದಾರೆ.

ಮಂಡ್ಯ ಮೇಡಂ ಅವ್ರಿಗೂ ಟೋಪಿ ಹಾಕಿದರು. ಪಾಪ ಅವರಿಗಾದರೂ ಟಿಕೆಟ್ ಕೊಟ್ಟಿದ್ದರೆ ಆಗ್ತಿತ್ತು. ಅವರಿಗೆ ಕೊಟ್ಟಿದ್ದರೆ ನಾವೇನು ಬೇಡಾ ಅಂತಿದ್ವಾ? ಎಂದು ಹೇಳಿದರು.

ಇನ್ನು ರಾಜ್ಯದಲ್ಲಿ ಇನ್ನೆರಡು ವರ್ಷ ಡಿ.ಕೆ.ಶಿವಕುಮಾರ್ ಸಿಎಂ ಆಗಿರಲಿ. ಮುಂದೆ 2028ಕ್ಕೆ ನೋಡೋಣ. ಹಿಂದೆ ಎಸ್.ಎಂ.ಕೃಷ್ಣ ಸಿಎಂ ಆಗಿದ್ದರು ಏನಾಯ್ತು? 2004ರಲ್ಲಿ ಏನಾಯ್ತು ಅದನ್ನೂ ನೋಡಿದ್ದೇನೆ. 2014, 2018 ಎಲ್ಲವನ್ನೂ ನೋಡಿದ್ದೇನೆ ನಾನು. ನಾನೂ 30 ವರ್ಷ ಶಾಸಕನಾಗಿ ಸೇವೆ ಸಲ್ಲಿಸಿದ್ದೇನೆ ಎಂದು ಹೇಳಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ