LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸೋಲು: ಅತಿಯಾದ ನಂಬಿಕೆಯೆ ಆಘಾತ ತಂದಿದೆ ಎಂದು ಬೇಸರ ವ್ಯಕ್ತಪಡಿಸಿದ ಹೆಚ್.ಡಿ.ಕುಮಾರಸ್ವಾಮಿ

ಮೈಸೂರು: ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಶಾಸಕರಿಂದ ಅಡ್ಡಮತದಾನ ಹಾಗೂ ಜೆಡಿಎಸ್ ಅಭ್ಯರ್ಥಿ ಸೋಲಿನ ವಿಚಾರವಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಅಡ್ಡ ಮತದಾನ ನಡೆಯುತ್ತದೆ ಎಂಬುದು ನಮಗೆ ಮೊದಲೇ ತಿಳಿದಿತ್ತು ಎಂದು ತಿಳಿಸಿದ್ದಾರೆ. ಅತಿಯಾದ ನಂಬಿಕೆ ಆಘಾತವನ್ನು ತಂದಿದೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಪಕ್ಷದ ಭವಿಷ್ಯದ ಕುರಿತು ಮಾತನಾಡಿದ ಕುಮಾರಸ್ವಾಮಿ, ಇನ್ನು ಮುಂದೆ ಯುವಕರು ಹಾಗೂ ಹೊಸ ಮುಖಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡುವ ನಿರ್ಧಾರ ಮಾಡಿರುವುದಾಗಿ ಘೋಷಿಸಿದರು. ಯಾವುದೇ ನಿರ್ದಿಷ್ಟ ವ್ಯಕ್ತಿಯ ಹೆಸರನ್ನು ಪ್ರಸ್ತಾಪಿಸಲ್ಲ. ಆದರೆ ಪಕ್ಷದ ವಿಚಾರದಲ್ಲಿ ಬದಲಾವಣೆಗಳನ್ನು ಮಾಡುವುದಾಗಿ ತಿಳಿಸಿದರು.

ಜಿ.ಟಿ.ದೇವೇಗೌಡರ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಗರಂ ಆದ ಕುಮಾರಸ್ವಾಮಿ, ‘ಅವರ ಹೆಸರು ಎತ್ತಬೇಡಿ’ ಎಂದು ಗದರಿದರು. ಕಳೆದ ಒಂದೂವರೆ ವರ್ಷದಿಂದಲೂ ಅವರ ಬಗ್ಗೆ ಮಾತನಾಡಿಲ್ಲ, ಇತ್ತೀಚೆಗೆ ನಡೆದ ಚಾಮುಂಡೇಶ್ವರಿ ಕ್ಷೇತ್ರದ ಸಭೆಯಲ್ಲೂ ಅವರ ಹೆಸರನ್ನು ಪ್ರಸ್ತಾಪಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ಪಕ್ಷದಲ್ಲಿ ಅಂತಿಮ ನಿರ್ಧಾರವನ್ನು ತಾವೇ ಕೈಗೊಳ್ಳುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ. ಕಾರ್ಯಕರ್ತರ ಅಭಿಪ್ರಾಯಗಳನ್ನು ಆಧರಿಸಿ ತಾವೇ ನಿರ್ಣಯಗಳನ್ನು ಮಾಡುವುದಾಗಿ ತಿಳಿಸಿದರು. ಇದು ಪಕ್ಷದ ಆಂತರಿಕ ವಿಚಾರಗಳಲ್ಲಿ ತಮ್ಮದೇ ಅಂತಿಮ ಮಾತು ಎಂಬ ಸಂದೇಶವನ್ನು ರವಾನಿಸಿದೆ.

ಗುರುವಾರ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐವರೂ ಅಭ್ಯರ್ಥಿಗಳು ಗೆದ್ದು ಬೀಗಿದ್ದಾರೆ. ಬಿಜೆಪಿಯ ಇಬ್ಬರು ಅಬ್ಯರ್ಥಿಗಳು ಮೇಲ್ಮನೆ ಪ್ರವೇಶಿಸಿದ್ದರೆ, ಜೆಡಿಎಸ್‌ನ ಗೋವಿಂದ ರಾಜುಗೆ ಸೋಲಾಗಿದೆ. ಜೆಡಿಎಸ್ ಶಾಸಕರ ಅಡ್ಡಮತದಾನವೇ ಸೋಲಿಗೆ ಕಾಅರಣ ಎನ್ನಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ