LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರಿಗೆ ಮುಖ್ಯ ಮಾಹಿತಿ ; ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ತೋಟಗಾರಿಕೆ ಇಲಾಖೆಯು 2026-27ನೇ ಸಾಲಿಗೆ ಜಿಲ್ಲೆಯಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್, ಹನಿ ನೀರಾವರಿ, ಕೃಷಿ ಯಾಂತ್ರೀಕರಣ ಉಪಯೋಜನೆ, VBGRAMG, RKVY, ಜೇನು ಸಾಕಾಣಿಕೆ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮುಂತಾದ ಯೋಜನೆಗಳಡಿ ವಿವಿಧ ಕಾರ್ಯಕ್ರಮಗಳಿಗೆ ಸಹಾಯಧನ ಒದಗಿಸಲಾಗುತ್ತಿದ್ದು, ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ.

ರೈತರು ನಿಗದಿತ ನಮೂನೆ ಅರ್ಜಿಯನ್ನು ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಹತ್ತಿರದ ರೈತ ಸಂಪರ್ಕ ಕೇಂದ್ರಗಳಿAದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ನಿಗದಿತ ಸಮಯದಲ್ಲಿ ಸಲ್ಲಿಸುವಂತೆ ತೋಟಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ -08182-279415/ 9980009438, ಭದ್ರಾವತಿ-08282-295029/9108252536, ಶಿಕಾರಿಪುರ-08187-223544/ 8310662972, ಸೊರಬ – 08184-295112 /9663634388, ಸಾಗರ-08183-295124/ 9900903393, ಹೊಸನಗರ – 08185-295364/ 9591695327, ತೀರ್ಥಹಳ್ಳಿ-08181-228151/ 9108280642 ಗಳನ್ನು ಸಂಪರ್ಕಿಸುವುದು.

ಹೊರಗುತ್ತಿಗೆ ಆಧಾರದಲ್ಲಿ ಪಶುವೈದ್ಯರ ನೇಮಕಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ ವೈದ್ಯಕೀಯ ಚಿಕಿತ್ಸೆ ನೀಡುವ ಸಲುವಾಗಿ, ಶಿವಮೊಗ್ಗ ವೃತ್ತ ವ್ಯಾಪ್ತಿಯಲ್ಲಿ ವನ್ಯಪ್ರಾಣಿಗಳು ಮೃತಪಟ್ಟಾಗ ಮರಣೋತ್ತರ ಪರೀಕ್ಷೆ, ವನ್ಯಪ್ರಾಣಿ ಮತ್ತು ಮಾನವ ಸಂಘರ್ಷದ ಸಂದರ್ಭದಲ್ಲಿ ಮತ್ತು ಇನ್ನಿತರೆ ತುರ್ತು ಸಂದರ್ಭದಲ್ಲಿ ವನ್ಯಪ್ರಾಣಿಗಳ ರಕ್ಷಣಿ ಮತ್ತು ಸ್ಥಳಾಂತರ ಕಾರ್ಯಗಳನ್ನು ತ್ವರಿತವಾಗಿ ಪರಿಸ್ಥಿತಿಗಳನ್ನು ನಿಭಾಯಿಸಲು 01 ಪಶುವೈದ್ಯರ ಅವಶ್ಯಕತೆ ಇದ್ದು, ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ಪಶುವೈದ್ಯರ ಹುದ್ದೆಗೆ Bachelor of veterinary science & Animal husbandry ಶಿಕ್ಷಣವನ್ನು ಹೊಂದಿರುವ ಜೊತೆಗೆ ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳ ವನ್ಯಜೀವಿ ಕ್ಷೇತ್ರ / ಮೃಗಾಲಯ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸಿದ ಅನುಭವ ಪಡೆದಿರುವ, ವನ್ಯಜೀವಿ ವಿಷಯದಲ್ಲಿ ಸ್ನಾತಕೋತ್ತರ ಪಶುವೈದ್ಯಕೀಯ ಪದವಿ ಪಡೆದಿರುವ ಪಶುವೈದ್ಯರು ದಿ:06.07.2026 ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸುವುದು. ಜು.02 ರೊಳಗೆ ಸ್ವಯಂ ವಿವರಗಳೊಂದಿಗೆ ಅವಶ್ಯಕವಾದ ಪೂರಕ ದಾಖಲಾತಿಗಳನ್ನು ಅಂಚೆ ಮೂಲಕ ಅಥವಾ ಮುದ್ದಾಂ ಈ ಕಚೇರಿಗೆ ಸಲ್ಲಿಸುವಂತೆ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಅರ್ಜಿ ನಮೂನೆಗಾಗಿ ಅಥವಾ ಉಪ ಅರಣ್ಯ ಸಂರಕ್ಷಣಾಧಿಕಾರಿ. ವನ್ಯಜೀವಿ ವಿಭಾಗ ಕಛೇರಿ. ಶಿವಮೊಗ್ಗ ಅಥವಾ ವೆಬ್‌ಸೈಟ್ https://sakrebailuelephantcamp.org/ ಮೂಲಕ ಪಡೆಯುವುದು.ಹೆಚ್ಚಿನ ಮಾಹಿತಿಗೆ ದೂ. ಸಂ.: 08182-222983, ವಿಜಯ್‌ಕುಮಾರ್ ಕಾಳಪ್ಪನವರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವನ್ಯಜೀವಿ ಉಪ ವಿಭಾಗ, ಶಿವಮೊಗ್ಗ- ಮೊಬೈಲ್ ಸಂಖ್ಯೆ:- 9481461553. ವಿನಯ್ ಜೆ ಆರ್. ವಲಯ ಅರಣ್ಯಾಧಿಕಾರಿ, ಸಕ್ರೆಬೈಲು ವನ್ಯಜೀವಿ ವಲಯ, ಗಾಜನೂರು, 9663121406 ಇವರುಗಳನ್ನು ಸಂಪರ್ಕಿಸುವುದು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ