LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ: ಸಿ.ಟಿ.ರವಿ ನೇತೃತ್ವದಲ್ಲಿ ಸತ್ಯಶೋಧನಾ ಸಮಿತಿ ರಚಿಸಿದ ಬಿಜೆಪಿ

ಬೆಂಗಳೂರು: ವಿಧಾನ ಪರಿಷತ್​​ ಚುನಾವಣೆಯಲ್ಲಿ ಅಡ್ಡಮತದಾನದ ನಡೆದಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸತ್ಯಶೋಧನಾ ಸಮಿತಿ ರಚನೆ ಮಾಡಿದೆ.

ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ನೇತೃತ್ವದಲ್ಲಿ ಸತ್ಯ ಶೋಧನಾ ಸಮಿತಿ ರಚನೆ ಮಾಡಲಾಗಿದ್ದು, ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಎನ್​.ಮಹೇಶ್, ಶಾಸಕ ಮಹೇಶ್ ಟೆಂಗಿನಕಾಯಿ ಒಳಗೊಂಡ ತ್ರಿಸದಸ್ಯ ಸಮಿತಿಗೆ ಜೂನ್ 25ರೊಳಗೆ ವರದಿ ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೂಚಿಸಿದ್ದಾರೆ.

ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡಮತದಾನ ಹಿನ್ನೆಲೆ ರಾಜ್ಯ ಬಿಜೆಪಿ ಅದ್ಯಕ್ಷ ಬಿ.ವೈ.ವಿಜಯೇಂದ್ರಗೆ ಕೇಂದ್ರ ಮಾಜಿ ಸಚಿವ ಭಗವಂತ್ ಖೂಬಾ ಪತ್ರ ಬರೆದಿದ್ದಾರೆ. ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧವೇ ರಾಜಾರೋಷವಾಗಿ ಕೆಲಸ ಮಾಡಿದರೂ ಅವರ ವಿರುದ್ಧ ಕ್ರಮ ಕೈಗೊಂಡಿಲ್ಲ. ಇದರಿಂದಾಗಿಯೇ ಪರಿಷತ್​​ ಚುನಾವಣೆಯಲ್ಲಿ ಅಡ್ಡಮತದಾನ ನಡೆದಿದೆ.

ಎಷ್ಟೋ ಕಡೆ ಶಾಸಕರು ತಮ್ಮ ಬೆಂಬಲಿಗರಿಗೆ ಮುನ್ಸೂಚನೆ ನೀಡುತ್ತಿದ್ದಾರೆ. ಕಾರ್ಯಕರ್ತರು ಸಂಘಟನೆಯಲ್ಲಿ ಕೆಲಸ ಮಾಡದೇ ದೂರ ಉಳಿಯುತ್ತಿದ್ದಾರೆ. ಹಣ ಕೊಟ್ಟು ಜನರನ್ನು ಕರೆತಂದು ಕಾರ್ಯಕರ್ತರು ಎಂದು ಬಿಂಬಿಸುವ ಕೆಲಸ ಆಗುತ್ತಿದ್ದರೂ ಇದ್ಯಾವುದನ್ನೂ ಪ್ರಶ್ನಿಸುತ್ತಿಲ್ಲ ಎಂದು ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ. 2028ರಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಶಿಸ್ತು ಕ್ರಮ ಆಗಲೇಬೇಕು ಎಂದು ಪತ್ರದಲ್ಲಿಒತ್ತಾಯಿಸಿದ್ದಾರೆ. ಇದೇ ವಿಚಾರವಾಗಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸದಸ್ಯರಿಗೂ ಈ ಸಂಬಂಧ ಮನವಿ ಮಾಡಿದ್ದಾರೆ.

ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಅಡ್ಡಮತದಾನದಿಂದ ನಮಗೂ ಬೇಸರ ಹಾಗೂ ನೋವಾಗಿದೆ ಎಂದು ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಅಡ್ಡಮತದಾನ ಆಗಬಾರದಿತ್ತು, ಆದರೆ ದುರಾದೃಷ್ಟವಶಾತ್ ಆಗಿದೆ. ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ. ಈ ಬೆಳವಣಿಗೆಯಿಂದ ವಿಚಲಿತ ಆಗಿ ಓಡಿಹೋಗುವವನು ನಾನಲ್ಲ. ಇದನ್ನು ಅರಗಿಸಿಕೊಳ್ಳುವ ಶಕ್ತಿ ನನಗಿದೆ. ನಾನು ರಾಜ್ಯ ಬಿಜೆಪಿ ಅಧ್ಯಕ್ಷ, ಬಿ.ಎಸ್​.ಯಡಿಯೂರಪ್ಪನವರ ಮಗ. ಅಡ್ಡಮತದಾನ ಬಗ್ಗೆ ಯಾರಿಗೆ ಹೇಳಬೇಕೋ ಹೇಳುತ್ತೇನೆ ಎಂದು ತಿಳಿಸಿದ್ದಾರೆ.

ಅಲ್ಲದೇ ಅಡ್ಡಮತದಾನದ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸತ್ಯ ಶೋಧನಾ ಸಮಿತಿ ರಚಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಾವೇರಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ; ತಂದೆ, ಮಗ ಸ್ಥಳದಲ್ಲೇ ದುರಂತ ಸಾವು!BREAKING : ಚಿಕ್ಕಮಗಳೂರಲ್ಲಿ ಭೀಕರ ಅಪಘಾತ : ರಸ್ತೆಗೆ ಬಿದ್ದ ಬೈಕ್ ಸವಾರರ ಮೇಲೆ ಹರಿದ ಬಸ್ : ಸ್ಥಳದಲ್ಲೇ ಇಬ್ಬರ ದುರ್ಮರಣ!BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆ