ಧಾರವಾಡ : ನಿರ್ಮಿತಿ ಕೇಂದ್ರದ ಅಭಿಯಂತರರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಧಾರವಾಡಲ್ಲಿ ನಡೆದಿದೆ.
ನಿರ್ಮಿತಿ ಕೇಂದ್ರದ ಯೋಜನಾ ಅಭಿಯಂತರ ಸುರೇಂದ್ರ ಕುಮಾರ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಧಾರವಾಡ ನಗರದ ಬಾರಾಕೊಟ್ರಿ ಬಡಾವಣೆಯ ಬಾಡಿಗೆ ಮನೆ ಸೇರಿದಂತೆ ಒಟ್ಟು ಮೂರು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಅದೇ ಪ್ರದೇಶದಲ್ಲಿರೋ ಅವರ ಇನ್ನೊಂದು ಮನೆ ಹಾಗೂ ನಿರ್ಮಿತಿ ಕೇಂದ್ರದ ಕಚೇರಿ ಮೇಲೆ ಸಹ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಲೋಕಾಯುಕ್ತ ಎಸ್ಪಿ ಸಿದ್ಧಲಿಂಗಪ್ಪ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.