LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್: ಸಿಎಂ ಡಿ.ಕೆ.ಶಿವಕುಮಾರ್ ಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್

ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಕೇಸ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಅವಹೇಳನಕಾರಿ ಪೋಸ್ಟ್ ಪ್ರಕರಣವನ್ನು ರದ್ದುಪಡಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಫೋರ್ಜರಿ, ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸಿದ ಆರೋಪ ಮಾಡಿ ವಕೀಲ ಯೋಗೇಂದ್ರ ಹೊಡಘಟ್ಟ ಎಂಬುವರು ದಾಖಲಿಸಿದ್ದ ಪ್ರಕರಣವನ್ನು ರದ್ದು ಕೋರಿ ಡಿ.ಕೆ ಶಿವಕುಮಾರ್, ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ನೀಡಿದೆ.

ಹುಬ್ಬಳ್ಳಿಯಲ್ಲಿ 1992ರಲ್ಲಿ ನಡೆದ ರಾಮ ಜನ್ಮಭೂಮಿ ಕುರಿತ ಹೋರಾಟದಲ್ಲಿ ಭಾಗಿಯಾಗಿದ್ದ ಕರಸೇವಕ ಶ್ರೀಕಾಂತ ಪೂಜಾರಿಯನ್ನು 31 ವರ್ಷಗಳ ಬಳಿಕ ಅಂದರೆ ರಾಮ ಮಂದಿರ ಉದ್ಘಾಟನೆ ಸಮಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಂಧಿಸಿ ಜೈಲಿಗಟ್ಟಿತ್ತು. ಕಾಂಗ್ರೆಸ್​ ಸರ್ಕಾರ ಉದ್ದೇಶ ಪೂರ್ವಕವಾಗಿ ಬಂಧಿಸಿದೆ. ಹೀಗಾಗಿ ಇದನ್ನು ಖಂಡಿಸಿ ಬಿಜೆಪಿ ನಾಯಕರು ’ನಾನೂ ಕರಸೇವಕ, ನನ್ನನ್ನೂ ಬಂಧಿಸ” ಎಂದು ವಿಭಿನ್ನ ಅಭಿಯಾನ ಮಾಡಿದ್ದರು. ಇದಕ್ಕೆ ಡಿ.ಕೆ ಶಿವಕುಮಾರ್​​ ಸೇರಿದಂತೆ ಕಾಂಗ್ರೆಸ್​​ ನಾಯಕರು ತಿರುಚಿ ಪೋಸ್ಟರ್​​ಗಳನ್ನು ಹಾಕಿದ್ದರು ಎಂದು ಆರೋಪಿಸಿ ವಕೀಲ ಯೋಗೇಂದ್ರ ಹೊಡಘಟ್ಟ ಖಾಸಗಿ ದೂರು ದಾಖಲಿಸಿದ್ದರು.

ಕಾಂಗ್ರೆಸ್​​ ತಿರುಚಿದ ಪೋಸ್ಟರ್​​ಗಳು ಫೋರ್ಜರಿ ಮತ್ತು ಎರಡು ಗುಂಪುಗಳ‌ ನಡುವೆ ದ್ವೇಷ ಮೂಡಿಸುವ ಉದ್ದೇಶ ಎಂದು ಆರೋಪಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಖಾಸಗಿ ದೂರು ಸಲ್ಲಿಸಿದ್ದರು. ದೂರು ಆಧರಿಸಿ ಹೈಗ್ರೌಂಡ ಪೊಲೀಸರು ಡಿಸಿಎಂ ಡಿ.ಕೆ ಶಿವಕುಮಾರ್​​ ಮತ್ತು ಬಿಆರ್​ ನಾಯ್ಡು ವಿರುದ್ಧ ಎಫ್​ಐಆರ್​​ ದಾಖಲಾಗಿತ್ತು. ಅರ್ಜಿ ಪರಿಶೀಲಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಿತ್ತು. ಬಳಿಕ ಇದಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಇದೀಗ ಪ್ರಕರಣವನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ