LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬೆನ್ನಲ್ಲೇ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಶಿಫಾರಸು

ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಮುಂದಾದ ಬೆನ್ನಲ್ಲೇ ಇದೀಗ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಶುಕ್ರವಾರ ನಡೆದ ಗ್ಯಾರಂಟಿ ಪರಿಶೀಲನಾ ಸಭೆಯಲ್ಲಿ ಈ ಕುರಿತಾಗಿ ಶಿಫಾರಸು ಮಾಡಲಾಗಿದೆ. ನಷ್ಟ ಸರಿದೂಗಿಸಲು ದರ ಹೆಚ್ಚಳ ಅನಿವಾರ್ಯವೆಂದು ಮುಖ್ಯಮಂತ್ರಿಗಳಿಗೆ ಗ್ಯಾರಂಟಿ ಸಮಿತಿ ಮನವಿ ಮಾಡಿದೆ. ಶಕ್ತಿ ಯೋಜನೆಯಿಂದಾಗಿ ರಾಜ್ಯ ಸಾರಿಗೆ ಇಲಾಖೆಗೆ 5173 ಕೋಟಿ ರೂ. ಕೊರತೆ ಉಂಟಾಗಿದೆ. ಈ ಕೊರತೆ ಹಣವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಸಾರಿಗೆ ನಿಗಮ ಸರ್ಕಾರವನ್ನು ಒತ್ತಾಯಿಸಿದೆ.

ಇದರೊಂದಿಗೆ ಸಿಬ್ಬಂದಿ ಬಾಕಿ ವೇತನ ಪಾವತಿಗೆ 1271 ಕೋಟಿ ರೂಪಾಯಿ ಅಗತ್ಯವಿದೆ. ಇದರಲ್ಲಿ 450 ಕೋಟಿ ರೂ. ಬಿಡುಗಡೆಯಾಗಿದ್ದು, ಡೀಸೆಲ್ ದರ ಮತ್ತು ಸಿಬ್ಬಂದಿಯ ವೆಚ್ಚ ಹೆಚ್ಚಳವಾಗಿದೆ. 2025ರ ಜನವರಿ 5 ರಂದು ಪ್ರಯಾಣದರ ಹೆಚ್ಚಳ ಮಾಡಿದ್ದು, ನಂತರದಲ್ಲಿ ಪ್ರಯಾಣದರ ಹೆಚ್ಚಳ ಮಾಡಿಲ್ಲ. ಶಕ್ತಿ ಯೋಜನೆಯಡಿ ಮೇ ಅಂತ್ಯದವರೆಗೆ 763 ಕೋಟಿ ಮಹಿಳೆಯರು ಪ್ರಯೋಜನ ಪಡೆದಿದ್ದಾರೆ. 2026 -27 ನೇ ಸಾಲಿಗೆ 10 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲು ಅಂದಾಜಿಸಲಾಗಿದೆ ಎಂದು ಹೇಳಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ