LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಆರೋಪ: ಸಿಎಂ ಡಿಕೆ ವಿರುದ್ಧದ ಪ್ರಕರಣ ರದ್ದು

ಬೆಂಗಳೂರು: ಬಿಜೆಪಿ ನಾಯಕರ ಫೋಟೋ ಸಹಿತ ಆಕ್ಷೇಪಾರ್ಹ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದ ಮೇಲೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ರದ್ದು ಕೋರಿ ಸಿಎಂ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ಶುಕ್ರವಾರ ವಿಚಾರಣೆ ನಡೆದಿದೆ. ಡಿ.ಕೆ. ಶಿವಕುಮಾರ್ ಪರ ವಕೀಲ ಹೆಚ್‌.ಪಿ. ಪ್ರವೀಣ್ ಗೌಡ ಅವರು ಶಿವಕುಮಾರ್ ಅವರ ಸಾಮಾಜಿಕ ಜಾಲತಾಣ ಖಾತೆ ಮೂಲಕ ಆಕ್ಷೇಪಾರ್ಹ ಪೋಸ್ಟ್ ಗಳನ್ನು ಹಾಕಲಾಗಿದೆ ಎನ್ನುವ ಕಾರಣಕ್ಕೆ ಅವರ ವಿರುದ್ಧ ಕೇಸ್ ದಾಖಲಿಸಲಾಗಿತ್ತು.

ಆದರೆ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದವರು ಪೋಸ್ಟ್ ಅನ್ನು ಅಪ್ಲೋಡ್ ಮಾಡಿದ್ದಾರೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರು ಎನ್ನುವ ಕಾರಣಕ್ಕೆ ಅವರನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ವಾದಿಸಿದ್ದರು.

ರಾಮ ಜನ್ಮಭೂಮಿ ವಿಚಾರವಾಗಿ ಮೂರು ದಶಕಗಳ ಹಿಂದಿನ ಪ್ರಕರಣದಲ್ಲಿ ಶ್ರೀಕಾಂತ್ ಪೂಜಾರಿ ಎಂಬುವರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದರು. ಪೊಲೀಸರ ಈ ನಡೆ ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದು, ಈ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿ ನಾಯಕರನ್ನು ಟೀಕಿಸುವ ಭರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿ.ಸುನಿಲ್ ಕುಮಾರ್ ಫೋಟೋ ಬಳಸಿ ಬರಹಗಳ ಚಿತ್ರಗಳನ್ನು ಕೆಪಿಸಿಸಿ ಫೇಸ್ಬುಕ್ ಪೇಜ್ ನಲ್ಲಿ ಪೋಸ್ಟ್ ಮಾಡಲಾಗಿತ್ತು.

ಈ ಬಗ್ಗೆ ಬಿಜೆಪಿ ಕಾನೂನು ಘಟಕದ ಸಂಚಾಲಕ ಯೋಗೇಂದ್ರ ಹೊಡಘಟ್ಟ ಅವರು ನೀಡಿದ ಖಾಸಗಿ ದೂರು ಆಧರಿಸಿ ಹೈಗ್ರೌಂಡ್ಸ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠದಿಂದ ಈ ಆದೇಶ ನೀಡಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ