LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾರ್ವಜನಿಕ ಹಿತಕ್ಕಾಗಿ ಹುಲಿಕಲ್ ಘಾಟ್ ನಲ್ಲಿ ಬಸ್ ಸಂಚಾರಕ್ಕೆ ಅವಕಾಶ: ಜಿಲ್ಲಾಧಿಕಾರಿ ಆದೇಶ

ಶಿವಮೊಗ್ಗ: ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ ಹೆದ್ದಾರಿ-52 ಹುಲಿಕಲ್ ಘಾಟ್ ವ್ಯಾಪ್ತಿಯ ಚಂಡಿಕಾಂಬ ದೇವಸ್ಥಾನದ ಬಳಿ ಇರುವ ಹೇರ್‌ಪೀನ್ ತಿರುವಿನಲ್ಲಿ ಅಳವಡಿಸಿರುವ ವೇಗಮಿತಿ 20ಕಿ.ಮೀ. ಸೂಚನಾ ಫಲಕದಂತೆ ಚಕ್ರತಳ 496 ಸೆ.ಮೀ. ಮೀರದ ಮತ್ತು 40+2 ಆಸನ ಸಾಮರ್ಥ್ಯವುಳ್ಳ ಹಾಗೂ ವಾಹನದ ಒಟ್ಟು ತೂಕ 9000 ಕೆ.ಜಿ. ಮೀರದ ಮಜಲು ಬಸ್ಸು ವಾಹನಗಳ ಏಕ ಮುಖ ಸಂಚಾರ ವ್ಯವಸ್ಥೆಯನ್ನು ಖಚಿತಪಡಿಸಿಕೊಂಡು ಸೂಚಿತ ಸಾಮರ್ಥ್ಯದ ಮಜಲು ಬಸ್ಸು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ.

ಕಳೆದ ಏಪ್ರಿಲ್ 9 ರಂದು ಹುಲಿಕಲ್ ಘಾಟ್‌ನ ಹೇರ್‌ಪಿನ್ ತಿರುವಿನಲ್ಲಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಸುಮಾರು 12 ಮೀಟರ್ ಎತ್ತರದ ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ 5 ಅಡಿಯಷ್ಟು ಭೂಕುಸಿತ ಉಂಟಾಗಿತ್ತು. ರಸ್ತೆಯ ಮೇಲ್ಭಾಗದಲ್ಲೂ ಬಿರುಕುಗಳು ಕಾಣಿಸಿಕೊಂಡಿದ್ದರಿಂದ ಸುರಕ್ಷತೆಯ ದೃಷ್ಟಿಯಿಂದ ಮಾಸ್ತಿ ಕಟ್ಟೆಯಿಂದ ಹೊಸ ಅಂಗಡಿವರೆಗೆ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಬದಲಿ ಮಾರ್ಗದ ವ್ಯವಸ್ಥೆ ಮಾಡಲಾಗಿತ್ತು.

ನಂತರದ ದಿನಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಚಂಡಿಕಾAಬ ದೇವಸ್ಥಾನದ ಬಳಿ ಮೆಟ್ಟಿಲುಗಳನ್ನು ಬಳಸಿಕೊಂಡು ವಾಹನಗಳ ಅದಲು-ಬದಲು ಮೂಲಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.

ಪ್ರಸ್ತುತ ಘಾಟ್ ರಸ್ತೆಯ ತಿರುವಿನಲ್ಲಿ ತಡೆಗೋಡೆ ನಿರ್ಮಿಸಿ, ರಸ್ತೆಯ ಮಟ್ಟದವರೆಗೆ ಮಣ್ಣಿನ ಏರಿಯೊಂದಿಗೆ ಲೀನ್ ಕಾಂಕ್ರೀಟ್ ಹಾಕಿ ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿಗೊಳಿಸಲಾಗಿದೆ. ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್, ಪೊಲೀಸ್ ಅಧೀಕ್ಷಕರು ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ವರದಿ ಮತ್ತು ಪ್ರಸ್ತಾವನೆಯನ್ನು ಪರಿಶೀಲಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಘಾಟಿಯಲ್ಲಿ ಮತ್ತೊಮ್ಮೆ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಸುರಕ್ಷತೆಗಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ:

ಘಾಟಿ ರಸ್ತೆಯಲ್ಲಿ ತಡೆಗೋಡೆ ಹಾಗೂ ಎಚ್ಚರಿಕೆ ಫಲಕಗಳನ್ನು ಅಳವಡಿಸಲಾಗಿದೆ.

ಮಾಹಿತಿ ಮತ್ತು ಸೂಚನಾ ಫಲಕಗಳನ್ನು ಹಾಕಲಾಗಿದೆ.

ರಾತ್ರಿ ವೇಳೆ ವಾಹನ ಸವಾರರ ಅನುಕೂಲಕ್ಕಾಗಿ ‘ಕ್ಯಾಟ್ ಐ’ ಹಾಗೂ ಸೋಲಾರ್ ಸ್ಟಡ್ಸ್ ಗಳನ್ನು ಅಳವಡಿಸಿ ಸುರಕ್ಷತೆಯನ್ನು ಖಾತ್ರಿಪಡಿಸಲಾಗಿದೆ.

“ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ 116 ರನ್ವಯ ವಾಹನಗಳ ಸಂಚಾರಕ್ಕೆ ಸಂಬಂಧಿಸಿದಂತೆ ಜೂ. 12, 2026 ರ ಅಧಿಸೂಚನೆಯೊಂದಿಗೆ ಜೂ.18 ರಿಂದ ಹೊಸದಾಗಿ ಸೇರ್ಪಡೆಗೊಳಿಸಿ ಜಾರಿಗೆ ಬರುವಂತೆ ರಾಜ್ಯ ಹೆದ್ದಾರಿ-52 ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ಮೂಲಕ ಚಕ್ರತಳ 496 ಸೆ.ಮೀ. ಮೀರದ ಮತ್ತು 40+2 ಆಸನ ಸಾಮರ್ಥ್ಯವುಳ್ಳ ಹಾಗೂ ವಾಹನದ ಒಟ್ಟು ತೂಕ 9000 ಕೆ.ಜಿ. ಮೀರದ ಮಜಲು ಬಸ್ಸು ವಾಹನಗಳ ಏಕ ಮುಖ ಸಂಚಾರ ವ್ಯವಸ್ಥೆಯನ್ನು ಖಚಿತಪಡಿಸಿಕೊಂಡು ಮಜಲು ಬಸ್ ವಾಹನಗಳಿಗೆ ಮಾತ್ರ ಅವಕಾಶ ಕಲ್ಪಿಸಿ ಆದೇಶಿಸಲಾಗಿದೆ” ಎಂದು ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
CWRC ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು: ರಾಜ್ಯದ ರೈತರ ಹಿತ ಕಾಯಲು ಸರ್ಕರ ಬದ್ಧ: ಸಚಿವ ರಾಮಲಿಂಗಾರೆಡ್ಡಿBIG NEWS: ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ; ಆದರೂ ಡಿ.ಕೆ.ಶಿವಕುಮಾರ್ ತಮಿಳುನಾಡು ಸಿಎಂ ಅವರನ್ನು ಸಂಧಾನಕ್ಕೆ ಆಹ್ವಾನಿಸಿದ್ದೇಕೆ? ಆರ್.ಅಶೋಕ್ ಪ್ರಶ್ನೆಮಾಜಿ ಸಿಎಂ ಜೆ.ಹೆಚ್. ಪಟೇಲ್ ಬೆಂಬಲಿಗರಾಗಿದ್ದ ಪಿ. ಶೇಖರಪ್ಪ ನಿಧನSHOCKING : ಲವರ್ ಜೊತೆ ಮಾತನಾಡಲು ಅಡ್ಡಿ ; ಅಳುತ್ತಿದ್ದ 3 ವರ್ಷದ ಮಗನನ್ನೇ ಕೊಂದ ಪಾಪಿ ತಾಯಿ.!ಸ್ವಾತಂತ್ರೋತ್ಸವ ಫಲಪುಷ್ಪ ಪ್ರದರ್ಶನ : ಲಾಲ್‌ಬಾಗ್‌ನಲ್ಲಿ ವಿವಿಧ ಸ್ಪರ್ಧೆ, ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ನೀಡಿದವರೇ ಅರೆಸ್ಟ್: ಹೈಕೋರ್ಟ್ ತರಾಟೆಜಲಾಶಯದ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಸಿBIG NEWS : ಸೈಬರ್ ಅಪರಾಧಗಳಿಗೆ ಮರಣದಂಡನೆ ; ಸಂಸತ್ತಿನಲ್ಲಿ ಮಹತ್ವದ ಮಸೂದೆ ಅಂಗೀಕಾರBREAKING : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನತೆ ; ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ 20 ಮಂದಿ ಸಾವುಪೊಲೀಸ್ ನೇಮಕಾತಿ ಪರೀಕ್ಷೆ: ವಸ್ತ್ರಸಂಹಿತೆ, ನಿಷೇಧಿತ ವಸ್ತುಗಳು ಸೇರಿ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಸೂಚನೆ