ದಾವಣಗೆರೆ: ಶಿಶು ಅಭಿವೃದ್ದಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಚನ್ನಗಿರಿ ತಾಲ್ಲೂಕಿನ ಖಾಲಿ ಇರುವ 12 ಅಂಗನವಾಡಿ ಕಾರ್ಯಕರ್ತೆಯರ ಮತ್ತು 55 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಗೌರವಧನ ಸೇವೆ ಆಧಾರದ ಮೇಲೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಶಿಶು ಅಭಿವೃದ್ದಿ ಯೋಜನಾ ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಜುಲೈ 22 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ, ಜಿ.ಎಂ ಕಾಂಪ್ಲೆಕ್ಸ್, ಐ.ಸಿ.ಐ.ಸಿ.ಐ ಬ್ಯಾಂಕ್ ಹಿಂಬಾಗ ಚನ್ನಗಿರಿ ದೂ.ಸಂ: 08189-295455 ನ್ನು ಸಂಪರ್ಕಿಸಬಹುದೆಂದು ಶಿಶು ಅಭಿವೃದ್ದಿ ಯೋಜನಾಧಿಕಾರಿ ತಿಳಿಸಿದ್ದಾರೆ.