LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಡದಿ ಟೌನ್ ಶಿಪ್ ಗೆ ವಿರೋಧಿಸಿ ಜೆಡಿಎಸ್ ಪಾದಯಾತ್ರೆಗೆ ಚಾಲನೆ: ಇದು ಆರಂಭವಷ್ಟೇ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ: ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ

ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಬೃಹತ್ ಪಾದಯಾತ್ರೆಗೆ ಚಾಲನೆ ದೊರೆತಿದೆ. ಅಂಚಿಪುರ ಗ್ರಾಮದ ದಂಡಿನ ಮಾರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆ ಆರಂಭಿಸಿದ್ದಾರೆ.

ಪಾದಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಇದು ಕೇವಲ ಆರಂಭ, ಮುಂದೆ ಹೋರಾಟ ಇನ್ನೂ ದೊಡ್ಡಮಟ್ಟದಲ್ಲಿ ಇದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಇಂದಿನ ಪಾದಯಾತ್ರೆ ರಾಜಕೀಯ ಲಾಭ-ನಷ್ಟಕ್ಕಾಗಿ ಅಲ್ಲ. ರೈತರ ಬದುಕು ಉಳಿಸುವ ಉದ್ದೇಶದಿಂದ ನಡೆಸಲಾಗುತ್ತಿದೆ ಎಂದರು. ಇದು ಒಂದು ದಿನದ ಹೋರಾಟವಲ್ಲ. ಕೇವಲ ಭಾಷಣಕ್ಕೆ ಸೀಮಿತವಾಗುವ ಕಾರ್ಯಕ್ರಮವೂ ಅಲ್ಲ. ಇದು ಆರಂಭ ಮಾತ್ರ. ಮುಂದೆ ದೊಡ್ಡ ಮಟ್ಟದ ಹೋರಾಟ ನಡೆಸುತ್ತೇವೆ. ಯೋಜನೆಗೆ ಒಪ್ಪಿಗೆ ಪಡೆಯಲು ಸರ್ಕಾರ ರೈತರಿಗೆ ಆಮಿಷ ಒಡ್ಡುತ್ತಿದೆ. ಕೃಷಿ ಭೂಮಿ ಕಳೆದುಕೊಂಡರೆ ರೈತರ ಬದುಕೇ ಸಂಕಷ್ಟಕ್ಕೆ ಸಿಲುಕಲಿದೆ. ಟೌನ್‌ಶಿಪ್ ಯೋಜನೆಯಿಂದ ಸಣ್ಣ ರೈತರಿಗೆ ಹೆಚ್ಚು ಅನ್ಯಾಯವಾಗಲಿದೆ. ರೈತರ ಭೂಮಿ ಕಸಿದುಕೊಳ್ಳಲು ದಲ್ಲಾಳಿಗಳನ್ನು ಬಳಸಲಾಗುತ್ತಿದೆ. ರೈತರ ಒಗ್ಗಟ್ಟು ಒಡೆಯುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಯೋಜನೆಯ ಒಟ್ಟು ವೆಚ್ಚ ಸುಮಾರು 18 ಸಾವಿರ ಕೋಟಿ ರೂ. ಎಂದು ಹೇಳಲಾಗುತ್ತಿದೆ. ರೈತರ ಜಮೀನು ಪಡೆದು 33 ಸಾವಿರ ಕೋಟಿ ರೂ. ಲಾಭ ಗಳಿಸುವ ಉದ್ದೇಶ ಇದರ ಹಿಂದೆ ಇದೆ. ಇದರಿಂದ ಯಾರಿಗೆ ಲಾಭವಾಗಲಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಪ್ರಶ್ನಿಸಿದರು.

ಇದೇ ವೇಳೆ ಕುಮಾರಸ್ವಾಮಿ ಕುಟುಂಬದ ಭೂಮಿ ಕುರಿತು ಕೇಳಿಬಂದ ಆರೋಪಗಳಿಗೆ ಪ್ರತಿಕ್ರಿಯಿಸಿದ ನಿಖಿಲ್, ತಮ್ಮ ಕುಟುಂಬದ ಜಮೀನುಗಳನ್ನು ಕಾನೂನುಬದ್ಧವಾಗಿ ಖರೀದಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ನಮ್ಮ ಜಮೀನಿನಲ್ಲಿ ಯಾವುದೇ ವಾಣಿಜ್ಯ ಕಟ್ಟಡ ನಿರ್ಮಿಸಿಲ್ಲ. ರೈತರಿಗೆ ಅನುಕೂಲವಾಗುವ ಯೋಜನೆಗಳಿಗೆ ಬಳಸಲು ಜಮೀನು ಉಳಿಸಿಕೊಂಡಿದ್ದೇವೆ. ಅಗತ್ಯವಿದ್ದರೆ ಶಾಲೆ ಅಥವಾ ಆಸ್ಪತ್ರೆಗೆ ಜಮೀನು ನೀಡಲು ಸಿದ್ಧ ಎಂದು ಹೇಳಿದರು.

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಯೋಜನಾ ವ್ಯಾಪ್ತಿಯ ಎಂಟು ಗ್ರಾಮಗಳಲ್ಲಿ ಸುಮಾರು 11 ಕಿಲೋಮೀಟರ್ ಪಾದಯಾತ್ರೆ ನಡೆಯಲಿದೆ. ಅಂಚಿಪುರ, ಅಂಚಿಪುರ ಕಾಲೋನಿ, ಬನ್ನಿಗಿರಿ, ಮೆರೆವೇಗೌಡನದೊಡ್ಡಿ, ಗುಂಡುತೋಪು, ಗೊಲ್ಲಹಳ್ಳಿ, ಕೋಡಿಪಾಳ್ಯ ಹಾಗೂ ಹೊಸೂರು ಗ್ರಾಮಗಳಲ್ಲಿ ಪಾದಯಾತ್ರೆ ಸಾಗಿದೆ.

ಪಾದಯಾತ್ರೆಯಲ್ಲಿ ಸಾವಿರಾರು ರೈತರು, ಜೆಡಿಎಸ್ ಕಾರ್ಯಕರ್ತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದಾರೆ. ಎಂಎಲ್‌ಸಿ ಜವರಾಯಿಗೌಡ ಹಾಗೂ ಮಾಜಿ ಎಂಎಲ್‌ಸಿ ಶ್ರೀಕಂಠೇಗೌಡ ಕೂಡ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ