LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಕಸ್ಮಿಕವಾಗಿ ಕೆರೆಗೆ ಜಾರಿ ಬಿದ್ದು ಇಬ್ಬರು ಅವಳಿ ಸಹೋದರರು ದುರ್ಮರಣ

ಮಂಗಳೂರು: ತೋಟದ ಬಳಿಯ ಕೆರೆಯಲ್ಲಿ ಬಿದ್ದು ಐದು ವರ್ಷದ ಇಬ್ಬರು ಅವಳಿ ಸಹೋದರರು ಮೃತಪಟ್ಟಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಕಡೀರದಲ್ಲಿ ನಡೆದಿದೆ.

ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ. ಮೃತ ಬಾಲಕರು ಮುರುಳ್ಯ ಗ್ರಾಮದ ಕಡೀರ ನಿವಾಸಿ ವಸಂತ್ ಅವರ ಅವಳಿ ಮಕ್ಕಳು. ವಸಂತ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದು, ಶನಿವಾರ ಮಧ್ಯಾಹ್ನ ಮಕ್ಕಳನ್ನು ಶಾಲೆಯಿಂದ ಮನೆಗೆ ಕರೆತಂದಿದ್ದರು. ಸಂಜೆ ವೇಳೆಗೆ ವಸಂತ್ ಹಾಗೂ ಅವರ ಪತ್ನಿ ಮನೆಯ ಸಮೀಪದ ತೋಟದಲ್ಲಿ ಕೆಲಸ ಮಾಡಲು ತೆರಳಿದ್ದು, ಮಕ್ಕಳು ಮನೆಯಲ್ಲಿಯೇ ಇದ್ದರು. ಬಳಿಕ ಕೆಲಸ ಮುಗಿಸಿ ವಸಂತ್ ಅವರ ಪತ್ನಿ ಮನೆಗೆ ಮರಳಿದಾಗ ಮಕ್ಕಳು ಮನೆಯಲ್ಲಿ ಇರಲಿಲ್ಲ.

ಆತಂಕಗೊಂಡ ಪೋಷಕರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದರೂ ಮಕ್ಕಳು ಪತ್ತೆಯಾಗಲಿಲ್ಲ. ನಂತರ ಮನೆ ಸಮೀಪದ ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಇಬ್ಬರು ಮಕ್ಕಳ ಮೃತದೇಹಗಳು ಪತ್ತೆಯಾಗಿವೆ. ಈ ದೃಶ್ಯ ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಆಟವಾಡುತ್ತಿದ್ದ ವೇಳೆ ಮಕ್ಕಳು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಈ ಸಂಬಂಧ ವಸಂತ್​ ಅವರು ನೀಡಿದ ದೂರಿನ ಮೇರೆಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ನೀಟ್ ಮರು ಪರೀಕ್ಷೆ: ಕೇವಲ 2 ನಿಮಿಷ ತಡವಾಗಿ ಬಂದಿದ್ದಕ್ಕೆ ಗೇಟ್ ಕ್ಲೋಸ್: ಪರೀಕ್ಷೆಗೆ ಅವಕಾಶ ನೀಡದ ಸಿಬ್ಬಂದಿ: ಕಣ್ಣೀರಿಟ್ಟು ಗೋಳಾಡಿದ ವಿದ್ಯಾರ್ಥಿನಿಯರುBREAKING: ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಅಧಿಕಾರ ಸ್ವೀಕಾರನೀಟ್ ಮರು ಪರೀಕ್ಷೆ: ಜೀನ್ಸ್ ಧರಿಸಿ ಬಂದವರಿಗೆ ಪರೀಕ್ಷೆಗಿಲ್ಲ ಅವಕಾಶಆಕಸ್ಮಿಕವಾಗಿ ಕೆರೆಗೆ ಜಾರಿ ಬಿದ್ದು ಇಬ್ಬರು ಅವಳಿ ಸಹೋದರರು ದುರ್ಮರಣYOGA Day: ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ: ಯೋಗಾಭ್ಯಾಸದಲ್ಲಿ ಭಾಗಿಯಾದ ನಟ ದರ್ಶನ್BREAKING: ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಅವಘಡ: ಹೊತ್ತಿ ಉರಿದ ಹಸಿರು ಮಾರ್ಗದ ಮೆಟ್ರೋ ಸ್ಟೇಷನ್20 ಲಕ್ಷ ರೂಪಾಯಿ ದರೋಡೆ ಪ್ರಕರಣ: ಸಿಐಡಿ ಇನ್ಸ್ ಪೆಕ್ಟರ್ ನ್ಯಾಯಾಂಗ ಬಂಧನಕ್ಕೆಬಿಡದಿ ಟೌನ್ ಶಿಪ್ ಗೆ ವಿರೋಧಿಸಿ ಜೆಡಿಎಸ್ ಪಾದಯಾತ್ರೆಗೆ ಚಾಲನೆ: ಇದು ಆರಂಭವಷ್ಟೇ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ: ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆಮೇಕೆದಾಟು ಯೋಜನೆ: ಕಾಂಗ್ರೆಸ್ ಪಕ್ಷದ 9 ಸಂಸದರು ಮಾತನಾಡಿದ್ರಾ? ಕೈ ಪಡೆ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿಉದ್ಯಮಿಗೆ 2.66 ಕೋಟಿ ವಂಚನೆ: ಆಕ್ಸಿಸ್ ಬ್ಯಾಂಕ್ ಮ್ಯಾನೇಜರ್ ಅರೆಸ್ಟ್