LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕರ ಆಣೆ-ಪ್ರಮಾಣಕ್ಕೆ ಸ್ವಪಕ್ಷದ ನಾಯಕರಿಂದಲೇ ಆಕ್ಷೇಪ: ರಾಜ್ಯಾಧ್ಯಕ್ಷರ ಈ ಘೋಷಣೆ ದಿಗ್ಭ್ರಮೆ ತಂದಿದೆ: ಇದು ಸರಿಯಲ್ಲ ಎಂದ ಸುರೇಶ್ ಕುಮಾರ್

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರು ಅಡ್ಡಮತದಾನ ಮಾಡಿರುವ ಹಿನ್ನೆಲೆಯಲ್ಲಿ ಅವರನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮತ್ತು ಶಾಸಕರ ಆಣೆ-ಪ್ರಮಾಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಿರ್ಧರಿಸಿದ್ದಾರೆ. ರಾಜ್ಯಾಧ್ಯಕ್ಷರ ಈ ಕ್ರಮಕ್ಕೆ ಹಿರಿಯ ನಾಯಕ ಸುರೇಶ್‌ ಕುಮಾರ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪೋಸ್ಟ್‌ ಪ್ರಕಟಿಸಿರುವ ಸುರೇಶ್ ಕುಮಾರ್, ನಿಜಕ್ಕೂ ನನಗೆ ನಮ್ಮ ಪಕ್ಷದ ರಾಜ್ಯಾಧ್ಯಕ್ಷರ ಈ ಘೋಷಣೆ ದಿಗ್ಭ್ರಮೆ ಉಂಟು ಮಾಡಿದೆ. ಇದ್ಯಾಕೋ ಸರಿಯಾದ ತೀರ್ಮಾನ ಎಂದೆನಿಸುತ್ತಿಲ್ಲ ಎಂದಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಅದರದೇ ಪಾವಿತ್ರ್ಯತೆ ಹೊಂದಿದೆ. ನಾನು ವಿಧಾನಸಭೆಯಲ್ಲಿ ಹೇಳಿದಂತೆ ನನ್ನ ಜೀವನದಲ್ಲಿ ನನ್ನ ತಾಯಿಯ ನಂತರ ನನಗಿರುವ ನಿಜವಾದ ಬಂಧು ಎಂದರೆ ಮಂಜುನಾಥ ಸ್ವಾಮಿ. ರಾಜಕಾರಣದಲ್ಲಿ ನಡೆದುಬಿಟ್ಟಿರುವ ಕೀಳು ಮಟ್ಟದ ಅಡ್ಡಮತದ ಅಪಚಾರಕ್ಕೆ ಧರ್ಮಸ್ಥಳವನ್ನು ಎಳೆಯುವುದು ದಯವಿಟ್ಟು ಬೇಡ. ಈ ಅಪಚಾರ ಮಾಡಿರುವವರು ಹೆತ್ತ ತಾಯಿಗೆ ದ್ರೋಹ ಮಾಡಿದಷ್ಟೇ ಪಾಪ ಮಾಡಿದ್ದಾರೆ.

ಈಗಾಗಲೇ ಹಲವರು ಧರ್ಮಸ್ಥಳದ ಹಿರಿಮೆಯನ್ನು ಹಾಳು ಮಾಡುವ ಕೆಲಸವನ್ನು ಮಾಡುವುದರಲ್ಲಿ ವಿಕೃತಾನಂದ ಪಡೆದಿದ್ದಾರೆ. ಇಡೀ ನಾಡಿನ ಜನತೆ ನಂಬಿಕೆ ಇಟ್ಟಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಾನದಲ್ಲಿ, ಒಂದೊಮ್ಮೆ ಅಡ್ಡ ಮತದಾನ ಮಾಡಿದ ವೀರರು ಆಣೆ – ಪ್ರಮಾಣ ಮಾಡಿ ತಾವು ಉಳಿದುಕೊಳ್ಳಲು ತಮ್ಮ ನೈತಿಕ ದಿವಾಳಿತನ ತೋರಿಸಿದರೆ, ಅದರಿಂದ ಅಪಚಾರದ ಪ್ರಮಾಣ ಹೆಚ್ಚಾಗುತ್ತದಷ್ಟೇ. ದಯವಿಟ್ಟು ಸ್ವಾಮಿ ಮಂಜುನಾಥನ ಶ್ರೇಷ್ಠತೆಯನ್ನು ಈ ರೀತಿ ಒರೆ ಹಚ್ಚುವುದು ಯಾವುದೇ ಕಾರಣಕ್ಕೂ ಬೇಡ ಎಂದು ತಿಳಿಸಿದ್ದಾರೆ.

ವಿಧಾನ ಪರಿಷತ್‌ ಚುನಾವಣೆಯಲ್ಲಿ ನಡೆದಿರುವ ಅಡ್ಡ ಮತದಾನದ ವಿವಾದ ಇದೀಗ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಪಕ್ಷಕ್ಕೆ ದ್ರೋಹ ಬಗೆದವರನ್ನು ಪತ್ತೆಹಚ್ಚಲು ಪಕ್ಷದ ಎಲ್ಲಾ 63 ಶಾಸಕರಿಂದಲೂ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಮುಂದೆ ಆಣೆ-ಪ್ರಮಾಣ ಮಾಡಿಸಲು ಬಿಜೆಪಿ ನಾಅಯಕರು ಮುಂದಾಗಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: ಸಿಐಡಿ ತನಿಖೆಯಲ್ಲಿ ₹5 ಕೋಟಿಗೂ ಹೆಚ್ಚು ಅಕ್ರಮ ಹಣ ರವಾನೆ ಪತ್ತೆಹಾವೇರಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ; ತಂದೆ, ಮಗ ಸ್ಥಳದಲ್ಲೇ ದುರಂತ ಸಾವು!BREAKING : ಚಿಕ್ಕಮಗಳೂರಲ್ಲಿ ಭೀಕರ ಅಪಘಾತ : ರಸ್ತೆಗೆ ಬಿದ್ದ ಬೈಕ್ ಸವಾರರ ಮೇಲೆ ಹರಿದ ಬಸ್ : ಸ್ಥಳದಲ್ಲೇ ಇಬ್ಬರ ದುರ್ಮರಣ!BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYC