LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಶಿರ್ವಾದ ಮಾಡುವ ನೆಪದಲ್ಲಿ ಮನೆಗೆ ಬಂದು ವ್ಯಕ್ತಿಯ ಚಿನ್ನದುಂಗುರ ಕದ್ದು ಪರಾರಿಯಾದ ನಕಲಿ ನಾಗಾಸಾಧುಗಳು

ಬೆಂಗಳೂರು: ಕಳ್ಳರು, ಖದೀಮರು ಯಾವೆಲ್ಲ ವೇಷ ಭೂಷಣಗಳನ್ನು ಧರಿಸಿ ಬಂದು ತಮ್ಮ ಕೈಚಳಕ ತೋರಿಸುತ್ತಾರೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಇತ್ತೀಚಿನ ದಿನಗಳಲ್ಲಿ ಕಳ್ಳತನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಾಗಾಸಾಧುಗಳ ವೇಷದಲ್ಲಿ ಬಂದ ಖದೀಮರು ವ್ಯಕ್ತಿಯೊಬ್ಬರ ಮನೆಗೆ ಬಂದು ಆಶಿರ್ವಾದ ಮಾಡುವ ನೆಪದಲ್ಲಿ ಚಿನ್ನದ ಉಂಗುರ ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಾಗಾಸಾಧುಗಳ ಸೋಗಿನಲ್ಲಿ ಬಂದ ನಕಲಿ ನಾಗಾಸಾಧುಗಳು ಅಮಾಯಕರನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದಾರೆ. ಬೆಂಗಳೂರಿನ ಆರ್‌ಪಿಸಿ ಲೇಔಟ್ ನಿವಾಸಿ ಅರುಣ್ ಶ್ರೀಪಾದ್ ಎಂಬುವವರ ಮನೆಗೆ ಬಂದ ನಾಗಾಸಾಧುಗಳ ವೇಷದಲ್ಲಿದ್ದ ಇಬ್ಬರು ವಂಚಕರು, ಅರುಣ್ ಶ್ರೀಪಾದ್ ಅವರ ಮನೆಗೆ ಬಂದು ಕಾಶಿ ಮತ್ತು ಗಂಗಾ ಸ್ನಾನದ ಮಹತ್ವದ ಬಗ್ಗೆ ಮನವರಿಕೆ ಮಾಡಿದ್ದಾರೆ.

ಧಾರ್ಮಿಕ ಚರ್ಚೆಗಳಲ್ಲಿ ತೊಡಗಿಸಿಕೊಂಡು, ಅವರ ನಂಬಿಕೆಯನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ, ಆಶೀರ್ವಾದ ಮಾಡುವ ನೆಪದಲ್ಲಿ ಅರುಣ್ ಶ್ರೀಪಾದ್ ಅವರ ಕೈಲಿದ್ದ ಉಂಗುರವನ್ನು ಎಗರಿಸಿ ಕ್ಷಣ ಮಾತ್ರದಲ್ಲಿ ಕಣ್ಮರೆಯಾಗಿದ್ದಾರೆ.

ವಂಚಕರು ಪರಾರಿಯಾದ ನಂತರವೂ, ಅರುಣ್ ಶ್ರೀಪಾದ್​​ಗೆ ತಮ್ಮ ಉಂಗುರ ಕಳುವಾಗಿರುವ ಬಗ್ಗೆ ತಕ್ಷಣವೇ ಅರಿವಾಗಿಲ್ಲ. ಕೆಲ ಸಮಯದ ಬಳಿಕ ಕೈಲಿದ್ದ ಉಂಗುರ ನಾಪತ್ತೆಯಾಗಿರುವುದು ಅರಿವಿಗೆ ಬಂದಿದೆ. ನಕಲಿ ನಾಗಾಸಾಧುಗಳ ಓಡಾಡ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ, ವಂಚನೆಗೊಳಗಾದ ಅರುಣ್, ವಿಜಯನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ