LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಡವಿಟ್ಟ ಚಿನ್ನ ಕೇಳಿದ್ದಕ್ಕೆ ಜುವೆಲ್ಲರಿ ಶಾಪ್ ಮಾಲೀಕನಿಂದ ಗುಂಡಿನ ದಾಳಿ

ಧಾರವಾಡ: ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಹೋದ ವೇಳೆ ನಡೆದ ಗಲಾಟೆಯಲ್ಲಿ ತಂದೆ ಮತ್ತು ಮಗನ ಮೇಲೆ ಜುವೆಲ್ಲರಿ ಅಂಗಡಿ ಮಾಲೀಕ ಹಲವು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಯ ವೇಳೆ ಶಾಲೆಯಿಂದ ಮನೆಗೆ ಹೋಗುತ್ತಿದ್ದ ಬಾಲಕಿಯ ಕಾಲಿಗೂ ಗುಂಡು ತಾಗಿದೆ.

ಗರಗ ಗ್ರಾಮದ ಮೋಹನ ಜುವೆಲರ್ಸ್ ಮಾಲೀಕ ಮೌನೇಶ ರುದ್ರಪ್ಪ ಬಡಿಗೇರ(50) ಫೈರಿಂಗ್ ಮಾಡಿದ ಆರೋಪಿ. ಘಟನೆಯಲ್ಲಿ ಜೀರಿಗೆವಾಡ ಗ್ರಾಮದ ನಿಂಗಪ್ಪ ಹೊರಕೇರಿ(64), ಅವರ ಪುತ್ರ ಸಿದ್ದಪ್ಪ ಹೊರಕೇರಿ(30) ಮತ್ತು ನಾಲ್ಕನೇ ತರಗತಿ ಓದುತ್ತಿರುವ 9 ವರ್ಷದ ಬಾಲಕಿಗೆ ಗಾಯಗಳಾಗಿವೆ.

ಗರಗ ಗ್ರಾಮದ ಮಾರ್ಕೆಟ್ ಪ್ರದೇಶದಲ್ಲಿರುವ ಮೌನೇಶ್ವರ ಜುವೆಲ್ಲರಿಯಲ್ಲಿ ಕೆಲವು ತಿಂಗಳ ಹಿಂದೆ ನಿಂಗಪ್ಪ ಹೊರಕೇರಿ 60 ಸಾವಿರಕ್ಕೆ ಚಿನ್ನವನ್ನು ಒತ್ತೆ ಇಟ್ಟಿದ್ದರು. ಸೋಮವಾರ ಹಣ ಕೊಟ್ಟು ಚಿನ್ನಾಭರಣ ಬಿಡಿಸಿಕೊಳ್ಳಲು ಹೋದಾಗ ಅಂಗಡಿಯ ಮಾಲೀಕ ಮೌನೇಶ ಚಿನ್ನ ಮರಳಿಸಲು ಹಿಂದೇಟು ಹಾಕಿದ್ದಾನೆ. ಆತ ಅವುಗಳನ್ನು ಬೇರೆಯವರಿಗೆ ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಇದೇ ವಿಚಾರವಾಗಿ ಗಲಾಟೆಯಾಗಿ ನಿಂಗಪ್ಪ ಮತ್ತು ಅವರ ಪುತ್ರನ ಮೇಲೆ ಅಂಗಡಿ ಮಾಲೀಕನ ಗುಂಡು ಹಾರಿಸಿದ್ದಾನೆ. ನಿಂಗಪ್ಪನ ಕಾಲಿಗೆ, ಸಿದ್ದಪ್ಪನ ಹೊಟ್ಟೆಗೆ ಗುಂಡು ತಾಗಿದೆ. ಈ ಸಂದರ್ಭದಲ್ಲಿ ಮನೆಗೆ ಹೋಗುತ್ತಿದ್ದ ಬಾಲಕಿಗೂ ಗಾಯವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ