LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೋಚಿಂಗ್ ಸೆಂಟರ್ ನಲ್ಲಿ ಬೆಂಕಿ ದುರಂತ ಪ್ರಕರಣ: ನಾಲ್ವರು ಹಿರಿಯ ಅಧಿಕಾರಿಗಳು ಸಸ್ಪೆಂಡ್

ಲಖನೌ: ಉತ್ತರ ಪ್ರದೇಶದ ಲಖನೌನಲ್ಲಿ ಅಲಿಗಂಜ್ ಕೋಚಿಂಗ್ ಸೆಂಟರ್ ನಲ್ಲಿ ಸಂಭವಿಸಿದ್ದ ಬೆಂಕಿ ದುರಂತದಲ್ಲಿ 15 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಈ ಪ್ರಕರಣ ಸಂಬಂಧ ನಾಲ್ವರು ಹಿರಿಯ ಅಧಿಕಾಅರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಕೋಚಿಂಗ್ ಸೆಂಟರ್​ನಲ್ಲಿ ನಡೆದ ಅಗ್ನಿ ದುರಂತವನ್ನು ಗಂಭೀರವಾಗಿ ಪರಿಗಣಿಸಿರುವ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ, ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳು ಮತ್ತು ಜವಾಬ್ದಾರರ ವಿರುದ್ಧ ಕಠಿಣ ಕ್ರಮ ಜರುಗಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಹಿರಿಯ ಅಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದ್ದು, ಕೋಚಿಂಗ್ ಸೆಂಟರ್ ಮಾಲೀಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ನಡೆಸಿದ ಉನ್ನತ ಮಟ್ಟದ ಸಭೆಯ ನಂತರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸೂಚನೆಯ ಮೇರೆಗೆ, ಇಬ್ಬರು ಸದಸ್ಯರ ವಿಶೇಷ ತನಿಖಾ ತಂಡ (SIT) ರಚಿಸಲಾಗಿದೆ. 7 ದಿನಗಳಲ್ಲಿ ತನ್ನ ವರದಿಯನ್ನು ಸಲ್ಲಿಸುವಂತೆ ತಂಡಕ್ಕೆ ಸೂಚಿಸಲಾಗಿದೆ. ಪ್ರವಾಸೋದ್ಯಮ, ಧಾರ್ಮಿಕ ವ್ಯವಹಾರಗಳು ಮತ್ತು ಸಂಸ್ಕೃತಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಮೃತ್ ಅಭಿಜತ್ ಅವರನ್ನು ಎಸ್ ಐಟಿಯಲ್ಲಿ ಸೇರಿಸಲಾಗಿದೆ.

ಬೆಂಕಿ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಆರ್ಥಿಕ ನೆರವು ಘೋಷಿಸಿದ್ದರು. ಗಾಯಗೊಂಡವರಿಗೆ ತಲಾ 50,000 ಆರ್ಥಿಕ ಸಹಾಯವನ್ನೂ ಸಿಎಂ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.

ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸರ್ಕಾರ, ಕರ್ತವ್ಯ ಲೋಪ ಎಸಗಿದ ವಿವಿಧ ಇಲಾಖೆಗಳ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಿದೆ. ಇದರಲ್ಲಿ ಅಗ್ನಿಶಾಮಕ ಇಲಾಖೆ ಮತ್ತು ಸ್ಥಳೀಯ ನಗರಾಡಳಿತ ಸಂಸ್ಥೆಯ ಅಧಿಕಾರಿಗಳು ಸೇರಿದ್ದಾರೆ. ವಾಣಿಜ್ಯ ಕಟ್ಟಡದಲ್ಲಿ ಯಾವುದೇ ಸುರಕ್ಷತಾ ನಿಯಮಗಳನ್ನು ಪಾಲಿಸದೆ ಕೋಚಿಂಗ್ ಸೆಂಟರ್ ನಡೆಸಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ಸೂಕ್ತ ಸುರಕ್ಷತಾ ಮುನ್ನೆಚ್ಚರಿಕೆಗಳಿಲ್ಲದೆ ಸಂಸ್ಥೆ ನಡೆಸುತ್ತಿದ್ದ ಕೋಚಿಂಗ್ ಸೆಂಟರ್‌ನ ಮಾಲೀಕರು ಹಾಗೂ ಕಟ್ಟಡದ ವ್ಯವಸ್ಥಾಪಕರು ಸೇರಿದಂತೆ ಒಟ್ಟು 4 ಜನರನ್ನು ಬಂಧಿಸಲಾಗಿದೆ.

ಈ ಭೀಕರ ದುರಂತದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಉತ್ತರ ಪ್ರದೇಶ ಸರ್ಕಾರ, ರಾಜ್ಯಾದ್ಯಂತ ವಾಣಿಜ್ಯ ಕಟ್ಟಡಗಳಲ್ಲಿ, ಬೇಸ್‌ಮೆಂಟ್‌ಗಳಲ್ಲಿ ಹಾಗೂ ಕಿರಿದಾದ ಜಾಗಗಳಲ್ಲಿ ನಡೆಯುತ್ತಿರುವ ಎಲ್ಲಾ ಕೋಚಿಂಗ್ ಸೆಂಟರ್‌ಗಳು, ಶಾಲೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಅಗ್ನಿ ಸುರಕ್ಷತಾ ವ್ಯವಸ್ಥೆಯನ್ನು ಕಡ್ಡಾಯವಾಗಿ ತಪಾಸಣೆ ನಡೆಸುವಂತೆ ಆಡಳಿತ ಮಂಡಳಿಗೆ ಆದೇಶಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಮಳೆ ಕೊರತೆಯಿಂದ ಕಂಗಾಲಾದ ಬೆಳಗಾವಿ ರೈತರು: ಮಹಾರಾಷ್ಟ್ರದಲ್ಲಿಯೂ ನೀರಿನ ಅಭಾವವಿರುವುದರಿಂದ ಅಲ್ಲಿಂದ ನೀರು ಬಿಡುವುದು ಕಷ್ಟಕರ ಎಂದ ಸಚಿವ ಸತೀಶ್ ಜಾರಕಿಹೊಳಿಪಿಯುಸಿ, ಪದವೀಧರರಿಗೆ ಉದ್ಯೋಗಾವಕಾಶ: ಜೂ.25 ರಂದು ನೇರ ಸಂದರ್ಶನಬಿಹಾರದಲ್ಲಿ ಭಾರೀ ವಿವಾದಕ್ಕೆ ಕಾರಣವಾದ ಭರತ್ ತಿವಾರಿ ಎನ್ಕೌಂಟರ್: ಪೊಲೀಸರ ವಿರುದ್ಧ ಎಫ್ಐಆರ್: ನ್ಯಾಯಾಂಗ ತನಿಖೆಗೆ ಆದೇಶ‘ಕೋರ್ಟ್ ನಲ್ಲಿ ಪತ್ನಿಯೊಬ್ಬರು ತನ್ನ ಗಂಡನನ್ನು ಹುಡುಕುತ್ತಿದ್ದಾರೆ’: ಸಿಎಂ ವಿಜಯ್ ವಿರುದ್ಧ ವೈಯಕ್ತಿಕ ಟೀಕೆ ಮಾಡಿದ ಉದಯನಿಧಿ ಸ್ಟಾಲಿನ್: ಟಿವಿಕೆ ತಿರುಗೇಟುBREAKING: ಪ್ರಯಾಣಿಕರೇ ಗಮನಿಸಿ: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ತಾಂತ್ರಿಕ ದೋಷಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನಪಿಯು ವಿದ್ಯಾರ್ಥಿನಿಯರು ನಾಪತ್ತೆ ಪ್ರಕರಣ: 6 ತಿಂಗಳಾದರೂ ಪತ್ತೆಯಾಗದ ಯುವತಿಯರು: ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಸಿಐಡಿ ಮನವಿಬಿಡದಿ ಟೌನ್ ಶಿಪ್ ವಿವಾದ: ನಿಖಿಲ್ 5 ಎಕರೆ ಜಾಗ ಕೊಡಲಿ; ‘ನಿಖಿಲ್ ಲೇಔಟ್’ ಎಂದು ಹೆಸರಿಡುತ್ತೇವೆ ಎಂದು ಟಾಂಗ್ ನೀಡಿದ ಹೆಚ್.ಸಿ.ಬಾಲಕೃಷ್ಣರೇಣುಕಾಸ್ವಾಮಿ ಹತ್ಯೆ ಪ್ರಕರಣ: ಕೇಸ್ ನಿಂದ ಹಿಂದೆ ಸರಿದ ನಟ ದರ್ಶನ್ ಪರ ವಕೀಲಬಿಡದಿ ಟೌನ್ ಶಿಪ್ ಕೆಸರೆರಚಾಟ: ಹಣ ಕೊಟ್ಟು ಜನರನ್ನು ಕರೆಸಿ ಪ್ರತಿಭಟನೆ: ಶಾಸಕರಿಗೆ ನಿವೇಶನ; HDK ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದ ಶಾಸಕ ಬಾಲಕೃಷ್ಣ