LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾರಾಷ್ಟ್ರ ಎಂಎಲ್‌ಸಿ ಚುನಾವಣೆಯಲ್ಲಿ ಕಲಬುರಗಿಯ ಕನ್ನಡಿಗ ಬಸವರಾಜ ಪಾಟೀಲ ಮರುಮ್ ಭರ್ಜರಿ ಗೆಲುವು

ಕರ್ನಾಟಕ-ಮಹಾರಾಷ್ಟ್ರ ಗಡಿಭಾಗದ ರಾಜಕೀಯ ವಲಯದಲ್ಲಿ ಈಗ ವಿಜಯೋತ್ಸವದ ತಮಟೆ ಸದ್ದು ಜೋರಾಗಿದೆ ಮಹಾರಾಷ್ಟ್ರದ ಹಿರಿಯ ಬಿಜೆಪಿ ನಾಯಕ ಹಾಗೂ ಕಲಬುರಗಿ ಜಿಲ್ಲೆಯ ಆಳಂದ ಪುರಸಭೆಯ ಮಾಜಿ ಅಧ್ಯಕ್ಷ ವಿಠ್ಠಲರಾವ್ ಪಾಟೀಲ್ ಅವರ ಸಹೋದರರಾದ ಬಸವರಾಜ ಪಾಟೀಲ ಮರುಮ್ (Basavaraj Patil Murum) ಅವರು ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದಾರೆ.

ಧಾರಾಶಿವ-ಲಾತೂರ-ಬೀಡ ಜಿಲ್ಲೆಗಳ ಸ್ಥಳೀಯ ಸಂಘ–ಸಂಸ್ಥೆಗಳ ವಿಧಾನ ಪರಿಷತ್ ಕ್ಷೇತ್ರದಲ್ಲಿ ನಡೆದ ತೀವ್ರ ಹಣಾಹಣಿಯ ಚುನಾವಣೆಯಲ್ಲಿ ಬಸವರಾಜ ಪಾಟೀಲ ಅವರು ಬರೋಬ್ಬರಿ 850 ಮತಗಳ ಭಾರಿ ಅಂತರದಿಂದ ವಿಜಯಲಕ್ಷ್ಮಿಯನ್ನು ವರಿಸಿದ್ದಾರೆ

ಆಳಂದ ಗಡಿಭಾಗದಲ್ಲಿ ಬಿಜೆಪಿ ಕಾರ್ಯಕರ್ತರ ಜಯಘೋಷ

ಬಸವರಾಜ ಪಾಟೀಲ ಮರುಮ್ ಅವರ ಗೆಲುವಿನ ಸುದ್ದಿ ಪ್ರಕಟವಾಗುತ್ತಿದ್ದಂತೆ ಇತ್ತ ಕರ್ನಾಟಕದ ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ.

ಬಸವರಾಜ ಪಾಟೀಲರ ಹಿತೈಷಿಗಳು, ಕುಟುಂಬಸ್ಥರು ಹಾಗೂ ನೂರಾರು ಬಿಜೆಪಿ ಕಾರ್ಯಕರ್ತರು ರಸ್ತೆಗಿಳಿದು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ಮಹಾರಾಷ್ಟ್ರ ರಾಜಕೀಯದಲ್ಲಿ ಈಗಾಗಲೇ 2 ಬಾರಿ ಶಾಸಕರಾಗಿ ಹಾಗೂ ಒಮ್ಮೆ ಯಶಸ್ವಿ ಸಚಿವರಾಗಿ ಜನಪರ ಸೇವೆ ಸಲ್ಲಿಸಿರುವ ಬಸವರಾಜ ಪಾಟೀಲರು, ಈ ಮಹತ್ವದ ಗೆಲುವಿನ ಮೂಲಕ ಇದೀಗ ಮತ್ತೊಮ್ಮೆ ಶಾಸನಸಭೆಯನ್ನು (ವಿಧಾನ ಪರಿಷತ್) ಪ್ರವೇಶಿಸುತ್ತಿದ್ದಾರೆ.

“ನಮ್ಮ ಮನೆತನದ ಕುಡಿ ಇಡೀ ಕುಟುಂಬಕ್ಕೆ ಹೆಮ್ಮೆ” – ವಿಠ್ಠಲರಾವ್ ಪಾಟೀಲ್ ಭಾವುಕ

ತಮ್ಮ ಸಹೋದರನ ಅದ್ಭುತ ಗೆಲುವಿನ ಬಗ್ಗೆ ಆಳಂದ ವಿಜಯೋತ್ಸವದಲ್ಲಿ ಮಾತನಾಡಿದ ಪುರಸಭೆ ಮಾಜಿ ಅಧ್ಯಕ್ಷ ವಿಠ್ಠಲರಾವ್ ಪಾಟೀಲ್ ಅವರು ಭಾವುಕರಾದರು. “ನಮ್ಮ ಮನೆತನದ ಕುಡಿಯಾದ ಬಸವರಾಜ ಅವರು ಈ ಹಿಂದೆ ಶಾಸಕರಾಗಿ, ಸಚಿವರಾಗಿ ರಾಜ್ಯಕ್ಕೆ ಅನುಪಮ ಸೇವೆ ಸಲ್ಲಿಸಿದ್ದಾರೆ. ಈಗ ಮತ್ತೊಮ್ಮೆ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವುದು ನಮ್ಮ ಇಡೀ ಕುಟುಂಬಕ್ಕೆ ಮತ್ತು ಗಡಿಭಾಗದ ಜನತೆಗೆ ಅಪಾರ ಹೆಮ್ಮೆ ತಂದಿದೆ. ಅವರ ದಶಕಗಳ ಜನಪ್ರಿಯತೆ ಮತ್ತು ನಿರಂತರ ಸಮಾಜ ಸೇವೆಯನ್ನು ಗುರುತಿಸಿ ಮತದಾರರು ಈ ಅಭೂತಪೂರ್ವ ಬೆಂಬಲ ನೀಡಿದ್ದಾರೆ” ಎಂದು ಸಂತಸ ಹಂಚಿಕೊಂಡರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: ಸಿಐಡಿ ತನಿಖೆಯಲ್ಲಿ ₹5 ಕೋಟಿಗೂ ಹೆಚ್ಚು ಅಕ್ರಮ ಹಣ ರವಾನೆ ಪತ್ತೆಹಾವೇರಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ; ತಂದೆ, ಮಗ ಸ್ಥಳದಲ್ಲೇ ದುರಂತ ಸಾವು!BREAKING : ಚಿಕ್ಕಮಗಳೂರಲ್ಲಿ ಭೀಕರ ಅಪಘಾತ : ರಸ್ತೆಗೆ ಬಿದ್ದ ಬೈಕ್ ಸವಾರರ ಮೇಲೆ ಹರಿದ ಬಸ್ : ಸ್ಥಳದಲ್ಲೇ ಇಬ್ಬರ ದುರ್ಮರಣ!BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYC