LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರಿಗೆ ಮುಖ್ಯ ಮಾಹಿತಿ: ಮುಂಗಾರು ಹಂಗಾಮಿಗೆ ಮರು ವಿನ್ಯಾಸಗೊಳಿಸಿದ ಬೆಳೆ ವಿಮೆ ಯೋಜನೆ

ಧಾರವಾಡ: 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಜಿಲ್ಲೆಯ ರೈತರಿಗೆ ಸರ್ಕಾರವು ಘೋಷಿಸಿದೆ.

ಹಸಿಮೆಣಸಿನಕಾಯಿ ಬೆಳೆಗೆ ಧಾರವಾಡ, ಅಮ್ಮಿನಬಾವಿ, ಗರಗ, ಧುಮ್ಮವಾಡ ಹಾಗೂ ಛಬ್ಬಿ ಹೋಬಳಿಗಳ ಆಯ್ದ ಗ್ರಾಮ ಪಂಚಾಯತಗಳು ಹಾಗೂ ಮಾವು ಬೆಳೆಗೆ ಅಮ್ಮಿನಭಾವಿ, ಧಾರವಾಡ, ಗರಗ, ಅಳ್ನಾವರ, ಹುಬ್ಬಳ್ಳಿ, ಛಬ್ಬಿ, ಕಲಘಟಗಿ, ತ.ಹೊನ್ನಳ್ಳಿ, ದುಮ್ಮವಾಡ, ಕುಂದಗೋಳ ಹಾಗೂ ಸಂಶಿ ಹೋಬಳಿಗಳ ಆಯ್ದ ಗ್ರಾಮ ಪಂಚಾಯತಗಳನ್ನು ಈ ವಿಮೆ ಯೋಜನೆಯ ವ್ಯಾಪ್ತಿಗೆ ಒಳಪಡಿಸಲಾಗಿದೆ.

ಧಾರವಾಡ ಜಿಲ್ಲೆಗೆ ಅಗ್ರಿಕಲ್ಚರ್ ಇನ್ಸುರೆನ್ಸ್ ಕಂಪನಿಯು ಆಯ್ಕೆಯಾಗಿದ್ದು, ವಿಮೆ ಕಂತಿಗೆ ಸಂಬಂಧಪಟ್ಟಂತೆ ಹಸಿಮೆಣಸಿನಕಾಯಿ ಬೆಳೆಗೆ ರೂ. 6745 ಪ್ರತಿ ಹೆಕ್ಟೇರ್‍ಗೆ ಹಾಗೂ ಮಾವು ಬೆಳೆಗೆ ರೂ. 4000 ಪ್ರತಿ ಹೆಕ್ಟೇರ್‍ಗೆ ರೈತರು ತಮ್ಮ ವಿಮೆ ಕಂತಿನ ಮೊತ್ತವನ್ನು ಪಾವತಿಸಬೇಕಾಗಿರುತ್ತದೆ. ವಿಮಾ ಕಂತನ್ನು ಅಗಸ್ಟ್ 31, 2026 ರೊಳಗೆ ಪಾವತಿಸಬೇಕು. ಸದರಿ ಯೋಜನೆ ಅಡಿ ನೋದಾಯಿಸಿಕೊಳ್ಳಲು ಫ್ರೂಟ್ಸ್ ಐಡಿ ಹೊಂದಿರಬೇಕು.

ಯೋಜನೆಯ ಸದುಪಯೋಗ ಪಡೆಯಲು ರೈತರು ಹತ್ತಿರದ ಬ್ಯಾಂಕುಗಳಿಗೆ ಅಥವಾ ಸಾಮಾನ್ಯ ಸೇವಾ ಕೇಂದ್ರ (ಸಿಎಸ್‍ಸಿ)ಗಳಿಗೆ ಭೇಟಿ ನೀಡಿ, ರೈತರು ಯೋಜನೆಯ ಸದುಪಯೋಗ ಪಡೆಯಬಹುದು. 

ಹೆಚ್ಚಿನ ಮಾಹಿತಿಗಾಗಿ ಧಾರವಾಡ, ಹುಬ್ಬಳ್ಳಿ, ಕಲಘಟಗಿ ಹಾಗೂ ಕುಂದಗೊಳ ತಾಲೂಕುಗಳ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು, ಸ್ಥಳೀಯ ವಾಣಿಜ್ಯ, ಗ್ರಾಮೀಣ ಸಹಕಾರಿ ಬ್ಯಾಂಕ್ ಅಥವಾ ಹತ್ತಿರದ ಬ್ಯಾಂಕುಗಳ ಅಧಿಕಾರಿಗಳನ್ನು ಹಾಗೂ ಅಗ್ರಿಕಲ್ಚರ್ ಇನ್ಸುರೆನ್ಸ್ ಕಂಪನಿ (ಜಿಲ್ಲಾ ಸಂಯೋಜಕರು-ಅನುಷಾ ಎ. ಆರ್. 7411292116 ಹಾಗೂ ಸಹಾಯವಾಣಿ ಸಂ:18004250505) ಇವರನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ