LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ರೈತರೇ ಗಮನಿಸಿ ; ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಕೃಷಿ ಇಲಾಖೆ ಸೂಚನೆ

ರೈತ ಬಾಂಧವರ ಆರ್ಥಿಕ ಭದ್ರತೆಗಾಗಿ 2026-27ನೇ ಸಾಲಿನ ‘ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ’ ಯೋಜನೆಯಡಿ ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರು ಕೋರಿದ್ದಾರೆ.

ಬೆಳೆ ಸಾಲ ಪಡೆದ ಹಾಗೂ ಪಡೆಯದ ಉಭಯ ರೈತರು ತಮ್ಮ ಬೆಳೆಗಳಿಗೆ ಬ್ಯಾಂಕುಗಳ ಮೂಲಕ ವಿಮೆ ಮಾಡಿಸಬಹುದಾಗಿದೆ. ಯೋಜನೆಯಡಿ ಜಿಲ್ಲೆಯ ಗ್ರಾಮ ಪಂಚಾಯಿತಿ ಮತ್ತು ಹೋಬಳಿ ಮಟ್ಟದ ವಿವಿಧ ಪ್ರಮುಖ ಬೆಳೆಗಳಿಗೆ ವಿಮೆ ಮಾಡಿಸಲು ಕೊನೆಯ ದಿನಾಂಕಗಳನ್ನು ನಿಗದಿಪಡಿಸಲಾಗಿದೆ.

ಬೆಳೆವಾರು ವಿಮೆ ನೋಂದಣಿಗೆ ಕೊನೆಯ ದಿನಾಂಕಗಳು

ಎಳ್ಳು (ಮಳೆಯಾಶ್ರಿತ): ಜುಲೈ 15.

ಮುಸುಕಿನ ಜೋಳ (ನೀ/ಮ), ಜೋಳ (ನೀ/ಮ), ಸೂರ್ಯಕಾಂತಿ (ನೀ/ಮ), ತೊಗರಿ (ನೀರಾವರಿ), ಹತ್ತಿ (ನೀ/ಮ), ಕೆಂಪು ಮೆಣಸಿನಕಾಯಿ (ನೀ), ಈರುಳ್ಳಿ (ನೀರಾವರಿ): ಜುಲೈ 31.

ಭತ್ತ (ನೀರಾವರಿ/ಮಳೆಯಾಶ್ರಿತ), ರಾಗಿ (ಮ), ನವಣೆ (ಮ), ಹುರುಳಿ (ಮ), ನೆಲಗಡಲೆ (ನೀ/ಮ), ಸಜ್ಜೆ (ನೀ/ಮ), ತೊಗರಿ (ಮಳೆಯಾಶ್ರಿತ): ಆಗಸ್ಟ್ 14.

*ನೋಂದಣಿ ಎಲ್ಲಿ ಮಾಡಿಸಬೇಕು?

ರೈತರು ತಮ್ಮ ವ್ಯಾಪ್ತಿಯ ಯಾವುದೇ ಸ್ಥಳೀಯ ಬ್ಯಾಂಕ್‌ಗಳು, ಸಾರ್ವಜನಿಕ ಸೇವಾ ಕೇಂದ್ರಗಳು ಅಥವಾ ಗ್ರಾಮ ಪಂಚಾಯತಿ ಮಟ್ಟದಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳನ್ನು ಸಂಪರ್ಕಿಸಿ ವಿಮೆಗೆ ನೋಂದಾಯಿಸಿಕೊಳ್ಳಬಹುದು.

*ಸಾಲ ಪಡೆದ ರೈತರಿಗೆ ಪ್ರಮುಖ ಸೂಚನೆ

ಬೆಳೆ ಸಾಲ ಪಡೆದ ರೈತರು ಈ ವಿಮೆ ಯೋಜನೆಯಲ್ಲಿ ಭಾಗವಹಿಸಲು ಇಚ್ಛಿಸದಿದ್ದಲ್ಲಿ, ಬೆಳೆ ನೋಂದಣಿಯ ಅಂತಿಮ ದಿನಾಂಕಕ್ಕಿಂತ ಕನಿಷ್ಠ 7 ದಿನಗಳ ಮುಂಚಿತವಾಗಿ ತಮ್ಮ ವ್ಯಾಪ್ತಿಯ ಬ್ಯಾಂಕ್ ವ್ಯವಸ್ಥಾಪಕರಿಗೆ ಲಿಖಿತವಾಗಿ ಮುಚ್ಚಳಿಕೆ ಪತ್ರ ನೀಡಬೇಕಾಗುತ್ತದೆ. ಇಲ್ಲದಿದ್ದರೆ ಸ್ವಯಂಚಾಲಿತವಾಗಿ ವಿಮೆ ಕಂತು ಕಡಿತವಾಗಲಿದೆ.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ನೇರವಾಗಿ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
CWRC ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು: ರಾಜ್ಯದ ರೈತರ ಹಿತ ಕಾಯಲು ಸರ್ಕರ ಬದ್ಧ: ಸಚಿವ ರಾಮಲಿಂಗಾರೆಡ್ಡಿBIG NEWS: ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ; ಆದರೂ ಡಿ.ಕೆ.ಶಿವಕುಮಾರ್ ತಮಿಳುನಾಡು ಸಿಎಂ ಅವರನ್ನು ಸಂಧಾನಕ್ಕೆ ಆಹ್ವಾನಿಸಿದ್ದೇಕೆ? ಆರ್.ಅಶೋಕ್ ಪ್ರಶ್ನೆಮಾಜಿ ಸಿಎಂ ಜೆ.ಹೆಚ್. ಪಟೇಲ್ ಬೆಂಬಲಿಗರಾಗಿದ್ದ ಪಿ. ಶೇಖರಪ್ಪ ನಿಧನSHOCKING : ಲವರ್ ಜೊತೆ ಮಾತನಾಡಲು ಅಡ್ಡಿ ; ಅಳುತ್ತಿದ್ದ 3 ವರ್ಷದ ಮಗನನ್ನೇ ಕೊಂದ ಪಾಪಿ ತಾಯಿ.!ಸ್ವಾತಂತ್ರೋತ್ಸವ ಫಲಪುಷ್ಪ ಪ್ರದರ್ಶನ : ಲಾಲ್‌ಬಾಗ್‌ನಲ್ಲಿ ವಿವಿಧ ಸ್ಪರ್ಧೆ, ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ನೀಡಿದವರೇ ಅರೆಸ್ಟ್: ಹೈಕೋರ್ಟ್ ತರಾಟೆಜಲಾಶಯದ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಸಿBIG NEWS : ಸೈಬರ್ ಅಪರಾಧಗಳಿಗೆ ಮರಣದಂಡನೆ ; ಸಂಸತ್ತಿನಲ್ಲಿ ಮಹತ್ವದ ಮಸೂದೆ ಅಂಗೀಕಾರBREAKING : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನತೆ ; ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ 20 ಮಂದಿ ಸಾವುಪೊಲೀಸ್ ನೇಮಕಾತಿ ಪರೀಕ್ಷೆ: ವಸ್ತ್ರಸಂಹಿತೆ, ನಿಷೇಧಿತ ವಸ್ತುಗಳು ಸೇರಿ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಸೂಚನೆ