LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಶೂ, ಸಾಕ್ಸ್ ವಿತರಣೆಗೆ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ಶೂ, ಸಾಕ್ಸ್ ಮತ್ತು ಚಪ್ಪಲಿಗಳನ್ನು ಯಾವುದೇ ಲೋಪವಿಲ್ಲದೆ ವಿತರಿಸಲು ಜಿಲ್ಲಾ, ತಾಲೂಕು ಮತ್ತು ಶಾಲಾ ಮಟ್ಟದಲ್ಲಿ ಸಮಿತಿಗಳನ್ನು ರಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶಿಸಿದೆ.

ಈಗಾಗಲೇ ಶೂ, ಸಾಕ್ಸ್ ವಿತರಿಸಲು ರಾಜ್ಯಮಟ್ಟದಲ್ಲಿ ಟೆಂಡರ್ ಕರೆದು ಸರಬರಾಜು ಆದೇಶ ನೀಡಲಾಗಿದೆ. ವಿತರಿಸುವ ಹೊಣೆ ಜಿಲ್ಲಾ ಹಂತದಲ್ಲಿ ಜಿಲ್ಲಾ ಉಪ ನಿರ್ದೇಶಕರು(ಆಡಳಿತ) ತಾಲೂಕು ಹಂತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಶಾಲಾ ಹಂತದಲ್ಲಿ ಮುಖ್ಯ ಶಿಕ್ಷಕರ ನೇತೃತ್ವದ ಸಮಿತಿಯದ್ದಾಗಿರುತ್ತದೆ.

ವಿತರಣೆ ಸಂದರ್ಭದಲ್ಲಿ ಅಳತೆಯಲ್ಲಿ ವ್ಯತ್ಯಾಸ ಕಂಡು ಬಂದಲ್ಲಿ ವಾಪಸ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ತಲುಪಿಸಿ ಅಗತ್ಯವಾದ ಶೂ ನಂಬರ್ ನೀಡಬೇಕು ಎಂದು ಶಾಲಾ ಮುಖ್ಯ ಶಿಕ್ಷಕರಿಗೆ ಸೂಚಿಸಲಾಗಿದೆ. ವಿತರಣಾ ಲೋಪ ಕಂಡುಬಂದಲ್ಲಿ ಸಂಬಂಧಿಸಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರು ಎಚ್ಚರಿಸಿದ್ದಾರೆ.

2026-27ನೇ ಸಾಲಿನ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಮತ್ತು ಸ್ಯಾಂಡಲ್ಸ್ ಸರಬರಾಜು ಮಾಡುವ ಬಗ್ಗೆ.

2026-27 ಶೈಕ್ಷಣಿಕ ಸಾಲಿಗೆ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ಶೂ, ಸಾಕ್ಸ್ ಮತ್ತು ಸ್ಯಾಂಡಲ್ಸ್ ಗಳನ್ನು ಸರಬರಾಜು ಮಾಡಬೇಕಿರುತ್ತದೆ. ಈ ಬಗ್ಗೆ ಟೆಂಡರ್ ಪ್ರಕ್ರಿಯೆ ರಾಜ್ಯ ಹಂತದಲ್ಲಿ ಚಾಲನೆಯಲ್ಲಿರುತ್ತದೆ. ಶಾಲೆಗಳಿಗೆ ಸರಬರಾಜು ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ.

ರಾಜ್ಯದಲ್ಲಿನ ವಿದ್ಯಾರ್ಥಿಗಳ ಸಂಖ್ಯೆಗಳಿಗೆ ಸಂಬಂಧಿಸಿದಂತೆ SATS ತಂತ್ರಾಂಶದಲ್ಲಿ ದಾಖಲಾಗಿರುವ ಮಾಹಿತಿಗಳಿಗನುಗುಣವಾಗಿ 2025-263 ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಅವಶ್ಯಕತೆಗನುಗುಣವಾಗಿ ಶೂ-ಸಾಕ್ಸ್-ಚಪ್ಪಲಿಗಳನ್ನು ಖರೀದಿಸಿ ವಿತರಿಸುವ ಸಂಬಂಧ ರಾಜ್ಯ ಹಂತದಲ್ಲಿ ಟೆಂಡ‌ರ್ ಆಹ್ವಾನಿಸಿ ಸರಬರಾಜುದಾರರನ್ನು ಗುರುತಿಸಿ ಆದೇಶ ನೀಡಲಾಗಿರುತ್ತದೆ. ಅದರಂತೆ ಅಗತ್ಯವಾದ ಶೂ-ಸಾಕ್ಸ್-ಸರಬರಾಜುದಾರರು ತಾಲ್ಲೂಕುವಾರು ಚಪ್ಪಲಿಗಳನ್ನು ಸಂಬಂಧಿಸಿದ ತಾಲ್ಲೂಕು ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ ಸರಬರಾಜು ಮಾಡಲಿದ್ದಾರೆ.

ಸರ್ಕಾರದ ಯೋಜನೆಗಳಲ್ಲಿ ಒಂದಾಗಿರುವ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದ್ದು, ಸರಬರಾಜು ಮಾಡಲಾಗುವ ಶೂ-ಸಾಕ್ಸ್-ಚಪ್ಪಲಿಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ಜವಾಬ್ದಾರಿಯು ಜಿಲ್ಲಾ ಉಪನಿರ್ದೇಶಕರು (ಆಡಳಿತ), ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಶಾಲಾ ಮುಖ್ಯೋಪಾಧ್ಯಾಯರ ಮೇಲಿರುತ್ತದೆ.

ಈ ಹಿನ್ನೆಲೆಯಲ್ಲಿ ಸರ್ಕಾರದ ಯೋಜನೆಯನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಮುಖ್ಯೋಪಾಧ್ಯಾಯರುಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಜಿಲ್ಲಾ ಉಪನಿರ್ದೇಶಕರು (ಆಡಳಿತ) ರವರುಗಳ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಜಿಲ್ಲಾ ಹಂತ, ತಾಲ್ಲೂಕು ಹಂತ ಮತ್ತು ಶಾಲಾ ಹಂತವೆಂದು ವಿಭಾಗಿಸಿ ಅನುಸರಿಸಬೇಕಾದ ಸೂಚನೆಗಳು ಹಾಗೂ ನಿರ್ವಹಿಸಬೇಕಾದ ಜವಾಬ್ದಾರಿ ಮತ್ತು ಪಾತ್ರಗಳ ಅನುಸರಿಸುವ ಕುರಿತು ಈ ಕೆಳಕಂಡಂತೆ ನಿಗದಿಪಡಿಸಿ ಆದೇಶಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ