ಧಾರವಾಡ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಧಾರವಾಡ ಪ್ರಾದೇಶಿಕ ಕೇಂದ್ರದಲ್ಲಿ 2026-27ನೇ ಸಾಲಿನ ಜುಲೈ ಆವೃತ್ತಿಯ ಪ್ರಥಮ ವರ್ಷದ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್‍ಗಳಾದ ಬಿ.ಎ/ ಬಿ.ಕಾಂ./ ಬಿ.ಎಸ್ಸಿ,/ ಬಿ.ಬಿ.ಎ./ ಬಿ.ಸಿ.ಎ./ ಬಿ.ಲಿಬ್.ಸೈನ್ಸ್./ ಬಿ.ಎಸ್.ಡಬ್ಲ್ಯೂ./ ಎಂ.ಎ./ ಎಂ.ಕಾಂ./ ಎಂ.ಎಸ್ಸಿ./ ಎಂ.ಬಿ.ಎ./ ಎಂ.ಲಿಬ್.ಸೈನ್ಸ್./ ಎಂ.ಎಸ್.ಡಬ್ಲ್ಯೂ./ ಎಂ.ಸಿ.ಎ./ ಪಿ.ಜಿ ಸರ್ಟಿಫಿಕೇಟ್/ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‍ಗಳ ಪ್ರವೇಶಾತಿಗೆ ಆನಲೈನ್ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆನ್‍ಲೈನ್ ಅರ್ಜಿಗಳಿಗಾಗಿ ಅಧಿಕೃತ ಅಂತರ್ಜಾಲ www.ksoumysuru.ac.in ಗೆ ಭೇಟಿ ನೀಡಬಹುದು ಮತ್ತು ಹೆಚ್ಚಿನ ವಿವರಗಳಿಗಾಗಿ ಕ.ರಾ.ಮು.ವಿ., ಪ್ರಾದೇಶಿಕ ಕೇಂದ್ರ, ಧಾರವಾಡ, ಅಮರಗೋಳ 2ನೇ ಹಂತ, ಜಡ್ಜ್ ಕಾಲೋನಿ ಹತ್ತಿರ, ನವನಗರ, ಹುಬ್ಬಳ್ಳಿ., ದೂರವಾಣಿ ಸಂಖ್ಯೆ: 0836-2441199/7019314679 ಗೆ ಸಂಪರ್ಕಿಸಬಹುದೆಂದು ಪ್ರಾದೇಶಿಕ ನಿರ್ದೇಶಕರಾದ ಡಾ.ಲೋಕೇಶ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನ
ಧಾರವಾಡ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವೈದ್ಯಾಧಿಕಾರಿ, ಶುಶ್ರೂಷಕಿ, ಪ್ರಯೋಗಶಾಲಾ ತಂತ್ರಜ್ಞರು ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿಗಳನ್ನು ಧಾರವಾಡ ಜಿಲ್ಲೆಯ ನಮ್ಮ ಕ್ಲಿನಿಕ್‍ಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿ ಹಾಗೂ ಅರ್ಜಿಗಳನ್ನು ಭರ್ತಿ ಮಾಡಲು https://dharwad.nic.in ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಸಂಪರ್ಕಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.