LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ಅಧಿಕಾರ ಸ್ವೀಕಾರ

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಡಿಐಜಿ ಎಂ.ಎನ್.ಅನುಚೇತ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.

ಇದುವರೆಗೆ ಇಲಾಖೆಯ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ ಎಡಿಜಿಪಿ ಹೇಮಂತ್ ಎಂ. ನಿಂಬಾಳ್ಕರ್ ಅವರು ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ನೂತನ ಆಯುಕ್ತರಿಗೆ ಶುಭಕೋರಿದರು.

ಎಂ.ಎನ್.ಅನುಚೇತ್ ಅವರಿಗೆ ವಾರ್ತಾ ಇಲಾಖೆಯ ಜೊತೆಗೆ ಯುವ ಜನ ಸೇವೆ ಹಾಗೂ ಕ್ರೀಡಾ ಇಲಾಖೆಯ ಆಯುಕ್ತರ ಹೆಚ್ಚುವರಿ ಪ್ರಭಾರ ನೀಡಿ ಸರ್ಕಾರ ಆದೇಶಿಸಿದೆ.

ಎಂ.ಎನ್. ಅನುಚೇತ್ ಅವರು ಮೂಲತಃ ಕೋಲಾರ ಜಿಲ್ಲೆಯವರಾಗಿದ್ದಾರೆ. ಬೆಂಗಳೂರಿನ ಆರ್.ವಿ. ಇಂಜಿನಿಯರಿಂಗ್ ಕಾಲೇಜಿನಿಂದ 2006ರಲ್ಲಿ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಪದವಿ ಮುಗಿಸಿರುವ ಇವರು ತಾಂತ್ರಿಕ ಹಿನ್ನೆಲೆಯನ್ನು ಹೊಂದಿದ್ದಾರೆ. ಆ ಬಳಿಕ ನಾಗರಿಕ ಸೇವೆಗೆ ಸೇರುವ ಆಕಾಂಕ್ಷೆಯೊಂದಿಗೆ ಶ್ರಮಿಸಿ, 2008ರ ಸಿವಿಲ್ ಸರ್ವಿಸ್  ಪರೀಕ್ಷೆಯಲ್ಲಿ ಅತ್ಯುತ್ತಮ ಯಶಸ್ಸು ಸಾಧಿಸಿದರು. ತರುವಾಯ 2009ರ ಬ್ಯಾಚ್ ನ ಕರ್ನಾಟಕ ವೃಂದದ ಐಪಿಎಸ್ ಅಧಿಕಾರಿಯಾಗಿ ಇವರು ಆಯ್ಕೆಯಾದರು.

ವಾರ್ತಾ ಇಲಾಖೆಯ ಕಾರ್ಯವೈಖರಿಗೆ ಹೊಸ ವೇಗ ನೀಡಬಲ್ಲ ಸಾಮರ್ಥ್ಯ ಹೊಂದಿರುವ ಅನುಚೇತ್ ಅವರು, ಪೊಲೀಸ್ ಇಲಾಖೆಯಲ್ಲಿ ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆ ಹಾಗೂ ಸಮರ್ಥ ಆಡಳಿತಕ್ಕಾಗಿ ಹೆಸರಾಗಿದ್ದಾರೆ. ಈ ಹಿಂದೆ ಇವರು ಕೈಗೊಂಡ ಅತ್ಯುತ್ತಮ ತನಿಖಾ ಕಾರ್ಯಗಳನ್ನು ಗುರುತಿಸಿ ಕೇಂದ್ರ ಸರ್ಕಾರವು ಇವರಿಗೆ ಪ್ರತಿಷ್ಠಿತ “ಕೇಂದ್ರ ಗೃಹ ಸಚಿವರ ತನಿಖೆಗಾಗಿನ ಅತ್ಯುತ್ತಮ ಪದಕ ನೀಡಿ ಗೌರವಿಸಿದೆ.

2011ರಲ್ಲಿ ಪುತ್ತೂರಿನ ಸಹಾಯಕ ಪೊಲೀಸ್ ಅಧೀಕ್ಷಕರಾಗಿ(ASP) ತಮ್ಮ ವೃತ್ತಿಜೀವನ ಆರಂಭಿಸಿದ ಇವರು, ಆ ಬಳಿಕ ಸಿಐಡಿ(CID) ವಿಭಾಗದ ಎಸ್ಪಿ ಆಗಿ, ಬೆಂಗಳೂರು ನಗರದ ಕೇಂದ್ರ ವಿಭಾಗದ ಡಿಸಿಪಿ(DCP Central) ಆಗಿ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಇತ್ತೀಚೆಗೆ ಬೆಂಗಳೂರು ನಗರದ ಜಂಟಿ ಪೊಲೀಸ್ ಕಮಿಷನರ್(ಸಂಚಾರ) ಆಗಿ ಅತ್ಯಂತ ಯಶಸ್ವಿಯಾಗಿ ಸೇವೆ ಸಲ್ಲಿಸಿ, ನಗರದ ಸಂಚಾರ ನಿಯಂತ್ರಣಕ್ಕೆ ಕೃತಕ ಬುದ್ಧಿಮತ್ತೆ(AI) ತಂತ್ರಜ್ಞಾನವನ್ನು ಅಳವಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಹುದ್ದೆಗೆ ಬರುವ ಮುನ್ನ ಇವರು ಪೊಲೀಸ್ ನೇಮಕಾತಿ ವಿಭಾಗದ ಡಿಐಜಿಪಿ(DIGP) ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಈ ಸಂದರ್ಭದಲ್ಲಿ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ್, ಸಿದ್ದೇಶ್ವರಪ್ಪ ಜಿಬಿ, ಸಿ.ಆರ್.ನವೀನ್, ಉಪನಿರ್ದೇಶಕರಾದ ಬಿ.ಕೆ.ರಾಮಲಿಂಗಪ್ಪ, ಶಫಿ ಸಾದುದ್ಧಿನ್ ಸೇರಿದಂತೆ ಇತರರರು ಇದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ