LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬರ ಪರಿಸ್ಥಿತಿ ಎದುರಿಸಲು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಸಂಭವನೀಯ ಪ್ರಕೃತಿ ವಿಕೋಪಗಳು ಹಾಗೂ ಸೂಪರ್ ಎಲ್ ನೀನೋ ಪರಿಣಾಮದಿಂದ ಉಂಟಾಗಬಹುದಾದ ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಧಾನಸೌಧದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಈವರೆಗೆ ಕೈಗೊಂಡಿರುವ ಅಗತ್ಯ ಕ್ರಮಗಳ ಕುರಿತು ಮಾಹಿತಿ ಪಡೆದು, ಮಳೆ ಕೊರತೆ, ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಸಮಸ್ಯೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ಸಮಗ್ರವಾಗಿ ಚರ್ಚಿಸಿದರು.

ಜಾಗತಿಕ ಹವಾಮಾನ ವೈಪರೀತ್ಯದ ಭಾಗವಾಗಿ ಸೂಪರ್ ಎಲ್ ನೀನೋ ಪರಿಣಾಮದಿಂದ ರಾಜ್ಯದಲ್ಲಿ ಉಂಟಾಗಬಹುದಾದ ಸಂಭವನೀಯ ಪರಿಣಾಮಗಳು, ಮಳೆಯ ಕೊರತೆಯಿಂದ ಜನರು ಎದುರಿಸಬಹುದಾದ ಸಮಸ್ಯೆಗಳು ಹಾಗೂ ರಾಜ್ಯದ ಕೆಲವು ಪ್ರದೇಶಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಗಳ ಕುರಿತು ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದರು.

ಸಂಭವನೀಯ ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕುಡಿಯುವ ನೀರಿನ ಲಭ್ಯತೆ, ಜಾನುವಾರುಗಳಿಗೆ ಮೇವು, ಕೃಷಿ ಚಟುವಟಿಕೆಗಳ ನಿರ್ವಹಣೆ ಹಾಗೂ ನೀರಿನ ಸಂರಕ್ಷಣೆಗೆ ಸಂಬಂಧಿಸಿದಂತೆ ಜಿಲ್ಲಾವಾರು ಕಾರ್ಯಯೋಜನೆಗಳನ್ನು ಸಿದ್ಧಪಡಿಸಬೇಕು. ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ‌ಪಂಚಾಯತ್ ಸಿಇಒಗಳಿಗೆ ಅಗತ್ಯ ಸೂಚನೆಗಳನ್ನು ನೀಡಬೇಕು.

ಜಲಾಶಯಗಳ ನೀರಿನ ಮಟ್ಟ, ಅಂತರ್ಜಲ ಪರಿಸ್ಥಿತಿ ಹಾಗೂ ನೀರಿನ ಬಳಕೆಯ ಮೇಲ್ವಿಚಾರಣೆಯನ್ನು ನಿರಂತರವಾಗಿ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯಾವುದೇ ರೀತಿಯ ಪ್ರಕೃತಿ ವಿಕೋಪ ಅಥವಾ ಬರ ಪರಿಸ್ಥಿತಿ ಎದುರಾದರೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಂಬಂಧಿತ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ತ್ವರಿತ ಕ್ರಮಗಳನ್ನು ಕೈಗೊಳ್ಳಬೇಕು.

ಕುಡಿಯುವ ನೀರಿಗಾಗಿ ಕೊಳವೆ ಬಾವಿ ಕೊರೆಸಲು ಅನುಮತಿಯನ್ನು ತ್ವರಿತಗತಿಯಲ್ಲಿ ನೀಡಬೇಕು. ಈ ವಿಚಾರದಲ್ಲಿ ಯಾವುದೇ ರೀತಿಯ ವಿಳಂಬವಾಗಬಾರದು. ಅಗತ್ಯವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದರು.

122 ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, 139 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. 789 ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆಯಲಾಗಿದ್ದು, 669 ಹಳ್ಳಿಗಳಲ್ಲಿ ಖಾಸಗಿ ಕೊಳವೆಬಾವಿಗಳಿಂದ ನೀರು ಸರಬರಾಜು ಮಾಡಲಾಗುತ್ತಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ