LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದರ್ಶನ್ ಪುತ್ರ ವಿನೀಶ್ ಕಾರು ಅಪಘಾತ: ತಾಯಿ ವಿಜಯಲಕ್ಷ್ಮೀ ಹೇಳಿದ್ದೇನು?

ಬೆಂಗಳೂರು: ನಟ ದರ್ಶನ್ ಅವರ ಪುತ್ರ ವಿನೀಶ್ ಪ್ರಯಾಣಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿ ಕೆಲಕಾಲ ಗಲಾಟೆ ನಡೆದ ಘಟನೆ ಕೂಡ ನಡೆದಿದೆ. ಈ ವೇಳೆ ಸ್ಥಳೀಯರು ಹಾಗೂ ವಿನೀಶ್ ನಡುವೆ ವಾಗ್ವಾದ ನಡೆದಿದೆ.

ಬೆಂಗಳೂರಿನ ಆರ್.ಆರ್. ನಗರದ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದ ವೇಳೆ ವಿನೀಶ್ ಕಾರು ಓಡಿಸುತ್ತಿದ್ದರು ಎನ್ನಲಾಗಿತ್ತು. ಆದರೆ ನಿನೀಷ್ ಕಾರು ಓಡಿಸುತ್ತಿರಲಿಲ್ಲ. ಚಾಲಕ ಕಾರು ಓಡಿಸುತ್ತಿದ್ದು, ವಿನೀಶ್ ಪಕ್ಕದ ಸೀಟ್ ನಲ್ಲಿ ಕುಳಿತಿದ್ದರು ಎಂದು ತಿಳಿದುಬಂದಿದೆ.

ವಿನೀಶ್ ಅವರು KA01 MU9969 ಸಂಖ್ಯೆಯ ಫೋರ್ಡ್ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರು ಅಪಘಾತವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಸದ್ಯಕ್ಕೆ ಪೊಲೀಸ್ ಠಾಣೆಯಲ್ಲಿ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ.

ಅಪಘಾತಕ್ಕೆ ಸಂಬಂಧಿಸಿದಂತೆ ವಿನೀಶ್ ತಾಯಿ ವಿಜಯಲಕ್ಷ್ಮೀ ದರ್ಶನ್ ಸ್ಪಷ್ಟನೆ ನೀಡಿದ್ದಾರೆ. ವಿನೀಶ್‌ಗೆ ದೊಡ್ಡ ಅಪಘಾತವಾಗಿದೆ ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹರಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳು. ವಿನೀಶ್ ಸುರಕ್ಷಿತವಾಗಿದ್ದಾನೆ ಮತ್ತು ಆರಾಮಾಗಿದ್ದಾನೆ. ಎಂದಿನಂತೆ ನಮ್ಮ ಚಾಲಕನೇ ಕಾರನ್ನು ಚಲಾಯಿಸುತ್ತಿದ್ದನು. ವಿನೀಶ್ ವಾಹನ ಚಲಾಯಿಸುತ್ತಿರಲಿಲ್ಲ. ಬೆಂಗಳೂರಿನ ಟ್ರಾಫಿಕ್‌ನಲ್ಲಿ ಸಾಮಾನ್ಯ ಎನ್ನುವಂತಹ ಒಂದು ಸಣ್ಣ ರಸ್ತೆ ಅಪಘಾತ ಸಂಭವಿಸಿದೆ ಅಷ್ಟೆ. ಎದುರಿಗಿದ್ದ ಬೈಕ್ ಸವಾರರು ಕೂಡ ತಮ್ಮದೇ ತಪ್ಪು ಎಂದು ಒಪ್ಪಿಕೊಂಡು ಕ್ಷಮೆಯಾಚಿಸಿದ್ದಾರೆ ಎಂದು ತಿಳಿಸಿದ್ದಾರೆ.

ಬೈಕ್‌ನಲ್ಲಿದ್ದವರು ಸುರಕ್ಷಿತವಾಗಿದ್ದಾರೆಯೇ ಎಂದು ನೋಡಲು ವಿನೀಶ್ ಕಾರಿನಿಂದ ಕೆಳಗಿಳಿದಿದ್ದನು. ಆದರೆ ಆ ಕೆಲವು ಕ್ಷಣಗಳ ದೃಶ್ಯಗಳನ್ನು ಸಂದರ್ಭಕ್ಕೆ ತಕ್ಕುದಲ್ಲದ ರೀತಿಯಲ್ಲಿ ಮತ್ತು ತಪ್ಪು ದಾರಿಗೆಳೆಯುವಂತೆ ಬಿಂಬಿಸಲಾಗಿದೆ. ಯಾರು ಕೂಡ ಇಂತಹ ಸುಳ್ಳು ವರದಿಗಳನ್ನು ನಂಬಬೇಡಿ ಮತ್ತು ಶೇರ್ ಮಾಡಬೇಡಿ ಎಂದು ವಿಜಯಲಕ್ಷ್ಮೀ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ