LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ರಾಜ್ಯದ ವಿವಿಧ ಇಲಾಖೆ, ನಿಗಮ-ಮಂಡಳಿಗಳ ಬ್ಯಾಕ್‌ಲಾಗ್ ಹುದ್ದೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ನಿಗಮಗಳು, ಮಂಡಳಿಗಳು ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. 24-01-2025ರ ಮಾಹಿತಿಯಂತೆ ಒಟ್ಟು 916 ಹುದ್ದೆಗಳು ವಿವಿಧ ಹಂತಗಳಲ್ಲಿ ಭರ್ತಿಗೆ ಲಭ್ಯವಿದ್ದು, ಇಲಾಖೆವಾರು ಹುದ್ದೆಗಳ ವಿವರ ಪ್ರಕಟಿಸಲಾಗಿದೆ.

ರಾಜ್ಯದ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಲಭ್ಯವಾಗಿದೆ. ರಾಜ್ಯದ ವಿವಿಧ ಸರ್ಕಾರಿ ಇಲಾಖೆ, ನಿಗಮ, ಮಂಡಳಿ ಹಾಗೂ ಸಂಸ್ಥೆಗಳಲ್ಲಿ ಭರ್ತಿ ಮಾಡಬೇಕಿರುವ ಬ್ಯಾಕ್‌ಲಾಗ್ ಹುದ್ದೆಗಳ ವಿವರ ಬಿಡುಗಡೆಯಾಗಿದ್ದು, ಒಟ್ಟು 916 ಹುದ್ದೆಗಳ ಭರ್ತಿಗೆ ಅವಕಾಶವಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ಹಲವು ಇಲಾಖೆಗಳಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು, ಸಂಬಂಧಿತ ಇಲಾಖೆಗಳು ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸುವ ಸಾಧ್ಯತೆ ಇದೆ. ಅಭ್ಯರ್ಥಿಗಳು ಅಧಿಕೃತ ನೇಮಕಾತಿ ಅಧಿಸೂಚನೆಗಳನ್ನು ಗಮನಿಸಿ, ಅರ್ಹತೆ ಹಾಗೂ ಅರ್ಜಿ ಸಲ್ಲಿಕೆ ದಿನಾಂಕಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಪ್ರಮುಖ ಇಲಾಖೆಗಳಲ್ಲಿನ ಹುದ್ದೆಗಳ ವಿವರ

1. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ – 530 ಹುದ್ದೆಗಳು

  • ನರ್ಸಿಂಗ್ – 37
  • ಲ್ಯಾಬ್ ಟೆಕ್ನಿಷಿಯನ್ – 332
  • ಎಕ್ಸ್-ರೇ ಟೆಕ್ನಿಷಿಯನ್ – 16
  • ಫಾರ್ಮಾಸಿಸ್ಟ್ – 34
  • ವೈದ್ಯಾಧಿಕಾರಿ – 13
  • ಎಪಿಡೆಮಿಯಾಲಜಿಸ್ಟ್ – 76
  • ಎಪಿಡೆಮಿಯಾಲಜಿ ಸಹಾಯಕ – 21
  • ಡೇಟಾ ಎಂಟ್ರಿ ಆಪರೇಟರ್ – 1

ಒಟ್ಟು – 530 ಹುದ್ದೆಗಳು

2. ಸಾರ್ವಜನಿಕ ಶಿಕ್ಷಣ ಇಲಾಖೆ – 185 ಹುದ್ದೆಗಳು

  • ಮುಖ್ಯೋಪಾಧ್ಯಾಯರು – 4
  • ಶಿಕ್ಷಕರು – 3
  • ಉಪನ್ಯಾಸಕರು – 173
  • ವಿವಿಧ ಇತರೆ ಹುದ್ದೆಗಳು – 5

ಉದ್ಯೋಗಾಕಾಂಕ್ಷಿಗಳು ಸಂಬಂಧಿಸಿದ ಇಲಾಖೆಗಳ ಅಧಿಕೃತ ನೇಮಕಾತಿ ಅಧಿಸೂಚನೆಗಳನ್ನು ಗಮನಿಸಿ, ಅರ್ಹತೆ ಹಾಗೂ ಅರ್ಜಿ ಸಲ್ಲಿಕೆ ದಿನಾಂಕಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ