LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೊಸ ಬೈಕ್ ಖರೀದಿಸಿದ ಖುಷಿಯಲ್ಲಿ ಊರಿಗೆ ತೆರಳುತ್ತಿದ್ದಾಗ ಭೀಕರ ಅಪಘಾತ: ಯುವಕ ಸ್ಥಳದಲ್ಲೇ ದುರ್ಮರಣ

ತುಮಕೂರು: ಹೊಸ ಬೈಕ್​​ ಖರೀದಿಸಿದ ಖುಷಿಯಲ್ಲಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಬೈಕ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಗಂಗಸಾಗರ ಕ್ರಾಸ್ ಬಳಿ ಈ ಘಟನೆ ನಡೆದಿದೆ. ನಂದೀಶ್​​ ಕುಮಾರ್​​ (19) ಮೃತದುರ್ದೈವಿ. ವೇಗವಾಗಿ ಬಂದ ಟಿಪ್ಪರ್​​ ಬೈಕ್​​ಗೆ ಗುದ್ದಿದ ಪರಿಣಾಮ ಕೆಳಗೆ ಬಿದ್ದ ಯುವಕ ಗಂಭೀರ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತ ನಂದೀಶ್​​ ಮೂಲತಃ ಪಾವಗಡದ ದೊಡ್ಡಹಳ್ಳಿ ನಿವಾಸಿ ಎಂದು ತಿಳಿದುಬಂದಿದೆ. ನಿನ್ನೆಯಷ್ಟೇ ಹೊಸ ಬೈಕ್​​ ಖರೀದಿಸಿದ್ದ. ಹೊಸ ಬೈಕ್ ನಲ್ಲಿ​ ತನ್ನ ಸ್ನೇಹಿತನ ಜೊತೆ ಸ್ವಗ್ರಾಮಕ್ಕೆ ಬರುತ್ತಿದ್ದ. ಈ ವೇಳೆ ವೈಎನ್ ಹೊಸಕೋಟೆ ಕಡೆಯಿಂದ ವೇಗವಾಗಿ ಬಂದ ಟಿಪ್ಪರ್ ಬೈಕ್​​ಗೆ ಡಿಕ್ಕಿಯಾಗಿದೆ. ಸ್ಥಳದಲ್ಲೇ ನಂದೀಶ್​​ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ಅದೃಷ್ಟವಶಾತ್​​ ಪ್ರಾಣಾಪಾಯದಿಂದ ಪಾರಾಗಾದ್ದಾನೆ. ಘಟನೆ ಸಂಬಂಧ ಪಾವಗಡ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ