LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೊಟ್ಟ ಕೆಲಸ ಮಾಡದ ‘ಅಡ್ಜಸ್ಟ್ ಮೆಂಟ್’ ಗಿರಾಕಿಗಳು ತಮ್ಮ ತಪ್ಪನ್ನು ಮರೆಮಾಚಲು ನನ್ನ ಹೆಸರು ತಳುಕು ಹಾಕುತ್ತಿದ್ದಾರೆ: ಯತ್ನಾಳ್ ಆಕ್ರೋಶ

ಕೈಲಾಗದವನಿಗೆ ಕತ್ತೆ ಹೊರುವ ಕೆಲಸ ಎಂಬಂತೆ ಕೊಟ್ಟ ಕೆಲಸ ಮಾಡದ ಅಡ್ಜಸ್ಟ್ ಮೆಂಟ್’ ಗಿರಾಕಿಗಳು ತಮ್ಮ ತಪ್ಪನ್ನು ಮರೆಮಾಚಲು ನನ್ನ ಹೆಸರು ತಳುಕು ಹಾಕುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟಿಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಡಲಾರದವನು ಮದ್ದಲೆ ತಿಂದ ಎಂಬಂತೆ ವಿಧಾನ ಪರಿಷದ್ ಚುನಾವಣೆಯ ಹೀನಾಯ ಸೋಲಿನಿಂದ ನಗೆಪಾಟಲಾಗಿರುವ ರಾಜ್ಯಾಧ್ಯಕ್ಷರ ತಂಡವು ನಾನು ಕಾಂಗ್ರೆಸ್ ಗೆ ಮತ ಚಲಾಯಿಸಿದ್ದೇನೆ ಎಂಬ ಸುಳ್ಳನ್ನು ಜಾಲತಾಣಗಳಲ್ಲಿ ಹರಿಬಿಡುತ್ತಿದೆ. ಕೈಲಾಗದವರು ಮೈ ಪರಚಿಕೊಂಡರು ಎಂಬಂತೆ ತಮಗೆ ನೀಡಿದ ಜವಾಬ್ದಾರಿಯಲ್ಲಿ ವಿಫಲರಾದ ‘ಅಡ್ಜಸ್ಟ್ಮೆಂಟ್’ ಗಿರಾಕಿಗಳು ತಮ್ಮ ತಪ್ಪನ್ನು ಮರೆಮಾಚಲು ನನ್ನ ಹೆಸರು ತಳುಕು ಹಾಕುತ್ತಿದ್ದಾರೆ ಎಂದು ದೂರಿದ್ದಾರೆ.

ಕೈಲಾಗದವನಿಗೆ ಕತ್ತೆ ಹೊರುವ ಕೆಲಸ ಎಂಬ ಗಾದೆ ಮಾತಂತೆ ಕೊಟ್ಟ ಕೆಲಸವನ್ನು ಮಾಡದೆ ಬೇರೆ ನಾಯಕರ ಮೇಲೆ ತಪ್ಪು ಹೊರೆಸುವ ಕಾಯಕದಲ್ಲಿ ಅಡ್ಜಸ್ಟ್ಮೆಂಟ್ ಗಿರಾಕಿಗಳು ನಿರತರಾಗಿದ್ದಾರೆ ಎಂದು ಟೀಕಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಪರ ಮತ ಚಲಾಯಿಸಿರುವುದಿಲ್ಲ. ಭಾರತೀಯ ಜನತಾ ಪಕ್ಷದ ಚಿಹ್ನೆಯಡಿ ಆಯ್ಕೆಯಾಗಿರುವ ನಾನು ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸಿರುತ್ತೇನೆ. ಕೆಲಸವಿಲ್ಲದ ಕೆಲ ತಿಳಿಗೇಡಿಗಳು ಹಾಗೂ ಅವರ ಪಟಾಲಂ ಮಾಡುತ್ತಿರುವ ಆಪಾದನೆಗಳು ಸತ್ಯಕ್ಕೆ ದೂರವಾದದ್ದು.

ಅದಕ್ಷತೆ, ಸ್ವಜಪಕ್ಷಪಾತ, ರಾಜ್ಯ ಬಿಜೆಪಿ ನಾಯಕರಲ್ಲಿ ಸಮನ್ವಯದ ಕೊರತೆ, ಅಡ್ಜಸ್ಟ್ಮೆಂಟ್ ರಾಜಕಾರಣದಿಂದ ಬಿಜೆಪಿಗೆ ಸೋಲಾಗಿದೆ. ಮೀರ್ ಸಾದಿಕ್ ಗಳು ಪಕ್ಷದಲ್ಲೇ ಇದ್ದಾರೆ. ಬೇರೆಯವರ ಮೇಲೆ ಬೊಟ್ಟು ತೋರಿಸುತ್ತಿರುವ ನಾಯಕರಿಂದಲೇ ಪಕ್ಷ ಇಂದು ಸೋಲಿನ ಮೇಲೆ ಸೋಲು ಕಾಣುತ್ತಿದೆ. ಬೇರೆಯವರ ಮೇಲೆ ಬೊಟ್ಟು ತೋರಿಸುವ ಮುನ್ನ ಪಕ್ಷವನ್ನು ಸೋಲಿಸಿದ ನಯವಂಚಕರು ಯಾರು ಮತ್ತು ಅವರ ಬೆನ್ನ ಹಿಂದೆ ಇದ್ದವರ್ಯಾರು ಎಂಬುದರ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಯತ್ನಾಳ್ ತಿರುಗೇಟು ನೀಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ನಾಳೆ ಕುಮಾರಸ್ವಾಮಿ ಭೈರಮಂಗಲಕ್ಕೆ ಹೋಗ್ತಾರೆ; ಸಿಎಂ ಡಿ.ಕೆ.ಶಿವಕುಮಾರ್ ಕೂಡ ಬಂದು ರೈತರೊಂದಿಗೆ ಚರ್ಚಿಸಲಿ: ನಿಖಿಲ್ ಕುಮಾರಸ್ವಾಮಿಕೊಟ್ಟ ಕೆಲಸ ಮಾಡದ ‘ಅಡ್ಜಸ್ಟ್ ಮೆಂಟ್’ ಗಿರಾಕಿಗಳು ತಮ್ಮ ತಪ್ಪನ್ನು ಮರೆಮಾಚಲು ನನ್ನ ಹೆಸರು ತಳುಕು ಹಾಕುತ್ತಿದ್ದಾರೆ: ಯತ್ನಾಳ್ ಆಕ್ರೋಶರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹಕ್ಕೆ ವಿದ್ಯುತ್ ಸರಬರಾಜು ಕಂಪನಿಗಳಿಂದ ವಿಭಾಗಾವಾರು 1 ಲಕ್ಷ ರೂಬೀಜಿಂಗ್‌ ನ ಅತಿ ಎತ್ತರದ ಗಗನಚುಂಬಿ ಕಟ್ಟಡಕ್ಕೆ ವಿಮಾನ ಡಿಕ್ಕಿ, ಅವಶೇಷಗಳು ಬೀಳುತ್ತಿರುವ ವೀಡಿಯೊ ವೈರಲ್ಅಯೋಧ್ಯೆ ರಾಮಮಂದಿರದಿಂದ 200 ಕೆಜಿ ಬೆಳ್ಳಿ ಇಟ್ಟಿಗೆಗಳ ಕಳ್ಳತನ..? ಎಸ್‌ಐಟಿ ತನಿಖೆಯಲ್ಲಿ ಬಯಲಾಯ್ತು ರಹಸ್ಯಭಾರತ್ ಗೌರವ್ ಡಿಲಕ್ಸ್ ಪ್ರವಾಸಿ ರೈಲಲ್ಲಿ ‘ಡಿವೈನ್ ಈಸ್ಟ್ ಟೆಂಪಲ್ ಟೂರ್’: ಹೊಸ ಪ್ರವಾಸೋದ್ಯಮ ಸರ್ಕ್ಯೂಟ್ ಪರಿಚಯಿಸಿದ IRCTCBREAKING: ಮೊಹರಂ ಆಚರಣೆ ವೇಳೆ ಜಗಳ ಬಿಡಿಸಲು ಹೋದ ಪೊಲೀಸ್ ಮೇಲೆ ಪುಂಡರಿಂದ ಹಲ್ಲೆ2026-27ನೇ ಸಾಲಿನ ಆರ್ಥಿಕ ವರ್ಷದ ಆರಂಭಿಕ ಎರಡು ತಿಂಗಳಲ್ಲಿ ಕರ್ನಾಟಕದ ತೆರಿಗೆ ಸಂಗ್ರಹದಲ್ಲಿ ಸಮಾಧಾನಕರ ಪ್ರಗತಿSHOCKING: ನಾಸಿಕ್‌ ನಲ್ಲಿ ಟೆಟನಸ್-ಡಿಫ್ತೀರಿಯಾ ಲಸಿಕೆ ಪಡೆದ ನಂತರ 17 ವರ್ಷದ ಬಾಲಕಿ ಸಾವುಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೆ ತರಲು ವೇಗದ ಹೆಜ್ಜೆ ಇಟ್ಟ ಸುವೇಂದು ಅಧಿಕಾರಿ ನೇತೃತ್ವದ ಬಿಜೆಪಿ ಸರ್ಕಾರ