LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕ ಎಸ್.ಆರ್.ವಿಶ್ವನಾಥ್ ಸವಾಲು ಸ್ವೀಕರಿಸಿದ್ದೇನೆ ಎಂದ ಸಂಸದ ಡಾ.ಕೆ.ಸುಧಾಕರ್

ಬೆಂಗಳೂರು: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಹಾಗೂ ಯಲಹಂಕ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಲಹಂಕ ಕ್ಷೇತ್ರದಲ್ಲಿ ಸ್ಪರ್ಧಿಸುವ ಧೈರ್ಯವಿದ್ದರೆ ಸುಧಾಕರ್ ನೇರವಾಗಿ ನನ್ನ ವಿರುದ್ಧವೇ ಕಣಕ್ಕಿಳಿಯಲಿ ಎಂದು ವಿಶ್ವನಾಥ್ ಸವಾಲು ಹಾಕಿದ್ದರು. ಇದೀಗ ಈ ಸವಾಲಿಗೆ ಪ್ರತಿಕ್ರಿಯಿಸಿರುವ ಡಾ.ಸುಧಾಕರ್, ಎಸ್.ಆರ್.ವಿಶ್ವನಾಥ್ ಸವಾಲನ್ನು ನಾನು ಸ್ವೀಕರಿಸಿದ್ದೇನೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಕೆ.ಸುಧಾಕರ್, ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಸವಾಲನ್ನು ನಾನು ಸ್ವೀಕರಿಸಿದ್ದೇನೆ. ಅವರು ಚಿಕ್ಕಬಳ್ಳಾಪುರದಲ್ಲಿ ಸ್ಪರ್ಧಿಸಲಿ, ನಾನು ಸ್ವಾಗತ ಮಾಡುತ್ತೇನೆ ಎಂದಿದ್ದಾರೆ.

ಇದೇ ವೇಳೆ ನಾನು ಯಲಹಂಕ ಕ್ಷೇತ್ರದಲ್ಲಿಯೇ ನಿಂತು ಅವರನ್ನು ಸೋಲಿಸುತ್ತೇನೆ. ಯಲಹಂಕ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನನ್ನ ಜೊತೆ ನಿಲ್ಲಲಿ. ಯಲಹಂಕದಲ್ಲಿ ಯಾರು ಗೆಲ್ತಾರೆ ಎಂಬುದನ್ನು ಆಮೇಲೆ ನೋಡೋಣ. ಕ್ಯಾಮರಾಗಳ ಮುಂದೆ ನಿಂತು ಆ ರೋತಿ ಮಾತನಾಡುವುದನ್ನು ಅವರು ಮೊದಲು ನಿಲ್ಲಿಸಬೇಕು ಎಂದು ಗುಡುಗಿದರು.

ಎಸ್.ಆರ್.ವಿಶ್ವನಾಥ್ ಅವರ ಸವಾಲು ಸ್ವೀಕರಿಸಿದ್ದೇನೆ. ಎಲ್ಲಿ ಬೇಕಾದರೂ ಸ್ಪರ್ಧಿಸುತ್ತೇನೆ. ಹೈಕಮಾಂಡ್ ನಾಯಕರು ಏನು ಹೇಳುತ್ತಾರೋ ಅದರಂತೆ ನಡೆದುಕೊಳ್ಳುತ್ತೇನೆ ಎಂದಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ