LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರವಾಸೋದ್ಯಮ ಇಲಾಖೆ : ವಿವಿಧ ತರಬೇತಿಗೆ ಅರ್ಜಿ ಆಹ್ವಾನ

ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪ್ರವಾಸೋದ್ಯಮ ಆತಿಥ್ಯ ಕ್ಷೇತ್ರದಲ್ಲಿ ಕೌಶಲಾಭಿವೃದ್ಧಿ ತರಬೇತಿ ನೀಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ.

10ನೇ ತರಗತಿ ಉತ್ತೀರ್ಣರಾದವರಿಗೆ ಆಹಾರ ಮತ್ತು ಪಾನೀಯಗಳ ವಿತರಣೆ-4 ತಿಂಗಳು ತರಬೇತಿ, 5ನೇ ತರಗತಿ ಉತ್ತೀರ್ಣರಾದವರಿಗೆ ಕೊಠಡಿ ನಿರ್ವಹಣೆ-4 ತಿಂಗಳ ತರಬೇತಿ, 8ನೇ ತರಗತಿ ಉತ್ತೀರ್ಣರಾದವರಿಗೆ ವಿವಿಧ ಆಹಾರ ತಯಾರಕರಿಗೆ 5 ತಿಂಗಳ ತರಬೇತಿ ನೀಡಲಾಗುವುದು.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಮೈಸೂರಿನ ಎಫ್.ಸಿ.ಐ (ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್) ಹಾಗೂ ಬೆಂಗಳೂರಿನ ಐಹೆಚ್‍ಎಂ (ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜಮೆಂಟ್) ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 20 ರಿಂದ 45 ವರ್ಷದೊಳಗಿರಬೇಕು. ಅರ್ಜಿಯನ್ನು ಇದೇ ಜೂನ್ 19 ರಿಂದ 30 ರವರೆಗೆ ಸಹಾಯಕ ನಿರ್ದೇಶಕರು ಕಚೇರಿ, ಪ್ರವಾಸೋದ್ಯಮ ಇಲಾಖೆ, ಕೋಟೆ ಮುಂಭಾಗ, ಚಿತ್ರದುರ್ಗ ಕಚೇರಿಯಿಂದ ಅರ್ಜಿಗಳನ್ನು ವಿತರಿಸಲಾಗುವುದು.

ತರಬೇತಿ ಪಡೆಯಲು ಆಸಕ್ತ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದ್ವಿ-ಪ್ರತಿಯಲ್ಲಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಕೋಟೆ ಮುಂಭಾಗ, ಚಿತ್ರದುರ್ಗ ಕಚೇರಿಗೆ ಸಲ್ಲಿಸಿ, ಮೂಲ ದಾಖಲೆಗಳನ್ನು ಕಚೇರಿಯ ಸಮಯದಲ್ಲಿ (ರಜೆ ದಿನಗಳನ್ನು) ಹೊರತುಪಡಿಸಿ ಪರಿಶೀಲಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಚಿತ್ರದುರ್ಗ ರವರ ಕಚೇರಿ ಹಾಗೂ ದೂರವಾಣಿ ಸಂಖ್ಯೆ 08194-234466 ಕರೆ ಮಾಡುವಂತೆ ಪ್ರಕಟಣೆ ತಿಳಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ