LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಫೇಸ್ ಬುಕ್ ನಲ್ಲಿ ಶ್ರೀರಾಮ ಹಾಗೂ ಜಗದ್ಗುರು ರೇಣುಕಾಚಾರ್ಯರ ಬಗ್ಗೆ ಅವಹೇಳನಕಾರಿ ಪೋಸ್ಟ್: ದೂರು ದಾಖಲು

ಬೀದರ್: ಬೀದರ್ ಜಿಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಶ್ರೀರಾಮನಿಗೆ ಅವಮಾನಿಸಿ ವಿಕೃತಿ ಮೆರೆದಿದ್ದಾರೆ. ಫೇಸ್‌ಬುಕ್‌ನಲ್ಲಿ ಶ್ರೀರಾಮ ಹಾಗೂ ಜಗದ್ಗುರು ರೇಣುಕಾಚಾರ್ಯರ ವಿರುದ್ಧ ಅವಹೇಳನಕಾರಿ ಪೋಸ್ಟ್‌ಗಳನ್ನು ಹಾಕಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಪೋಸ್ಟ್ ಗಳನ್ನು ಪ್ರಕಟಿಸಿ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸಿದ ಕಿಡಿಗೇಡಿಗಳ ವಿರುದ್ಧ ಬಸವಕಲ್ಯಾಣ ನಗರ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.

ಬಸವಕಲ್ಯಾಣ ನಗರದ ಅಕ್ಕಮಹಾದೇವಿ ಮಹಾವಿದ್ಯಾಲಯದ ಆವರಣದಲ್ಲಿ ನಾಳೆ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶ ಆಯೋಜನೆಗೊಂಡಿದೆ. ಈ ಸಮಾವೇಶಕ್ಕೆ ಕನ್ನೇರಿ ಶ್ರೀಗಳ ಆಗಮನಕ್ಕೆ ಅನುಮತಿ ಲಭ್ಯವಾಗುತ್ತಿದ್ದಂತೆ, ಸಾಮಾಜಿಕ ಜಾಲತಾಣದಲ್ಲಿ ವಿವಾದ ಸೃಷ್ಟಿಸಲಾಗಿದೆ. ‘ಬಸವಪರ ಸಂಘಟನೆಗಳ ಒಕ್ಕೂಟ’ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ಶ್ರೀರಾಮ ಹಾಗೂ ರೇಣುಕಾಚಾರ್ಯರನ್ನು ‘ತಾಲಿಬಾನಿಗಳು’ ಎಂದು ನಿಂದಿಸಿ ಅತ್ಯಂತ ಕೀಳುಮಟ್ಟದ ಹಾಗೂ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕಲಾಗಿದೆ.

ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಉದ್ದೇಶಪೂರ್ವಕವಾಗಿ ಸಮಾಜದ ಶಾಂತಿ ಮತ್ತು ಸೌಹಾರ್ದತೆಯನ್ನು ಹಾಳು ಮಾಡಲು ಈ ಹುನ್ನಾರ ನಡೆಸಲಾಗಿದೆ ಎಂದು ಭಕ್ತರು ಆಪಾದಿಸಿದ್ದಾರೆ.

ಶ್ರೀರಾಮನಿಗೆ ಅವಮಾನಿಸಿರುವ ಫೇಸ್‌ಬುಕ್ ಖಾತೆಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿಂದೂ ಮುಖಂಡ ಕೃಷ್ಣ ಗೋಣೆ ಅವರು ಬಸವಕಲ್ಯಾಣ ನಗರ ಪೊಲೀಸ್ ಠಾಣೆಗೆ ಅಧಿಕೃತವಾಗಿ ದೂರು ನೀಡಿದ್ದಾರೆ.

ಜಗದ್ಗುರು ಬಸವಣ್ಣನವರ ಪವಿತ್ರ ಹೆಸರನ್ನು ದುರುಪಯೋಗಪಡಿಸಿಕೊಂಡು ಹಿಂದೂ ದೇವರುಗಳಿಗೆ ಹಾಗೂ ಧಾರ್ಮಿಕ ಭಾವನೆಗಳಿಗೆ ಅಪಮಾನ ಮಾಡಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಮಾವೇಶದ ಹೊತ್ತಿನಲ್ಲಿ ಇಂತಹ ಪ್ರಚೋದನಕಾರಿ ಕೃತ್ಯ ಎಸಗಿರುವ ಕಿಡಿಗೇಡಿಗಳನ್ನು ತಕ್ಷಣವೇ ಪತ್ತೆ ಹಚ್ಚಿ ಬಂಧಿಸಬೇಕು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸಿವೆ. ಸದ್ಯ ದೂರು ಸ್ವೀಕರಿಸಿರುವ ಬಸವಕಲ್ಯಾಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ