LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಡ್ಡ ಮತದಾನ ಮಾಡಿಸುವ ಮೂಲಕ ಕಾಂಗ್ರೆಸ್ ನವರು ಪ್ರಜಾಪ್ರಭುತ್ವವನ್ನು ಅಪಮೌಲ್ಯಗೊಳಿಸಿದ್ದಾರೆ: ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯ ಅಡ್ಡ ಮತದಾನಕ್ಕೆ ಸಂಬಂಧಿಸಿದಂತೆ ಸಿ.ಟಿ. ರವಿ ನೇತೃತ್ವದ ಸಮಿತಿಯು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ವರದಿ ಸಲ್ಲಿಸಿದೆ. ನ್‌ಡಿಎ ಮೈತ್ರಿಕೂಟದ ಒಟ್ಟು 12 ಸದಸ್ಯರು ಕ್ರಾಸ್ ವೋಟಿಂಗ್ ಮಾಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಸೇರಿ ಈ ಅಡ್ಡಮತದಾನ ನಡೆದಿದೆ ಎಂದು ಸಿ.ಟಿ.ರವಿ ತಿಳಿಸಿದ್ದಾರೆ.

ವರದಿ ಸಲ್ಲಿಕೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಇದು ಆಂತರಿಕ ತನಿಖೆಯ ವರದಿಯಾಗಿದ್ದು, ಸಿದ್ಧಪಡಿಸಿದ ವರದಿಯನ್ನು ರಾಜ್ಯಾಧ್ಯಕ್ಷರಿಗೆ ತಲುಪಿಸಿದ್ದೇವೆ. ಬಿಜೆಪಿ ಭಾಗದಿಂದ ಮೂರು ಮತಗಳು ಕ್ರಾಸ್ ವೋಟ್ ಆಗಿದ್ದು, ಒಂದು ಮತ ಅಸಿಂಧುಗೊಂಡಿದೆ. ಜೆಡಿಎಸ್ ಪಾಲಿನ 22 ಮತಗಳ ಪೈಕಿ ಕೇವಲ 14 ಮತಗಳು ಮಾತ್ರ ಬಂದಿದ್ದು, ಎಂಟು ಮತಗಳು ಕ್ರಾಸ್ ವೋಟ್ ಆಗಿವೆ. ಹೀಗಾಗಿ ಬಿಜೆಪಿ-ಜೆಡಿಎಸ್ ಒಟ್ಟು 12 ಮತಗಳು ಅಡ್ಡಚಲಾವಣೆಯಾಗಿವೆ ಎಂದು ತಿಳಿಸಿದ್ದಾರೆ.

ಇದು ಆಂತರಿಕ ಸಮಿತಿ ವರದಿಯಾಗಿರುವುದರಿಂದ ವರದಿಯಲ್ಲಿನ ಎಲ್ಲಾ ವಿಚಾರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಕಾಂಗ್ರೆಸ್ ನವರು ಅನೈತಿಕ ಮಾರ್ಗದಿಂದ ಈ ಅಡ್ಡ ಮತದಾನ ಮಾಡಿಸಿದ್ದು, ಅವರಿಗೆ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಬೇರೆ ರಾಜ್ಯದಲ್ಲಿ ಕ್ರಾಸ್ ವೋಟಿಂಗ್ ಆದಾಗ ಕಾಂಗ್ರೆಸ್ ನವರು ಪ್ರಜಾಪ್ರಭುತ್ವದ ಮೌಲ್ಯಕ್ಕೆ ವಿರುದ್ಧ ಎಂದು ಉಪದೇಶ ಮಾಡುತ್ತಿದ್ದರು. ಈಗ ಕಾಂಗ್ರೆಸ್ ನವರೇ ಕ್ರಾಸ್ ವೋಟಿಂಗ್ ಮಾಡಿಸುವ ಮೂಲಕ ಪ್ರಜಾಪ್ರಭುತ್ವವನ್ನು ಅಪಮೌಲ್ಯಗೊಳಿಸಿದ್ದಾರೆ. ಬೇರೆ ರಾಜ್ಯಗಳಲ್ಲಿ ಕ್ರಾಸ್ ವೋಟಿಂಗ್ ಆದರೆ ಅದನ್ನು ಪ್ರಶ್ನಿಸುವ ನೈತಿಕತೆ ನಿಮಗೆ ಇಲ್ಲ ಎಂದು ಗುಡುಗಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ