LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸೂಪರ್‌ಸ್ಟಾರ್ ರಜನಿಕಾಂತ್ ಹೊಸ ಚಿತ್ರಕ್ಕೆ ಮಾಸ್ ಟೈಟಲ್ ಫಿಕ್ಸ್: ‘ಧರ್ಮನ್’ ಆಗಿ ಅಬ್ಬರಿಸಲಿದ್ದಾರೆ ತಲೈವಾ

ಸೂಪರ್‌ಸ್ಟಾರ್ ರಜನಿಕಾಂತ್ ಅವರ ಬಹುನಿರೀಕ್ಷಿತ ೧೭೩ನೇ ಚಿತ್ರದ ಶೀರ್ಷಿಕೆ ಕೊನೆಗೂ ಅಧಿಕೃತವಾಗಿ ಪ್ರಕಟಗೊಂಡಿದೆ. ಈ ಬಿಗ್ ಬಜೆಟ್ ಚಿತ್ರಕ್ಕೆ ‘ಧರ್ಮನ್’ (Dharman – The Deadly Doctor) ಎಂದು ಹೆಸರಿಡಲಾಗಿದ್ದು, ಶೀರ್ಷಿಕೆ ಅನಾವರಣಗೊಳ್ಳುತ್ತಿದ್ದಂತೆ ಸಿನಿಮಾ ಪ್ರೇಮಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ.

ಭಾರತೀಯ ಚಿತ್ರರಂಗದ ಇಬ್ಬರು ದೃವತಾರೆಗಳಾದ ರಜನಿಕಾಂತ್ ಮತ್ತು ಕಮಲ್ ಹಾಸನ್ ಈ ಪ್ರಾಜೆಕ್ಟ್ ಮೂಲಕ ಒಂದಾಗಿರುವುದು ಚಿತ್ರದ ಅತಿ ದೊಡ್ಡ ವಿಶೇಷತೆಯಾಗಿದೆ. ಇಬ್ಬರೂ ಒಟ್ಟಿಗೆ ನಟಿಸದೇ ಇದ್ದರೂ, ಕಮಲ್ ಹಾಸನ್ ತಮ್ಮದೇ ಆದ ಪ್ರತಿಷ್ಠಿತ ‘ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್’ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಶೀರ್ಷಿಕೆಯೊಂದಿಗೆ ಬಿಡುಗಡೆಯಾಗಿರುವ ಫಸ್ಟ್‌ಲುಕ್ ಪೋಸ್ಟರ್‌ನಲ್ಲಿ ರಜನಿಕಾಂತ್ ಅವರು ಶಕ್ತಿಶಾಲಿ ವೈದ್ಯನ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಇದೊಂದು ಪಕ್ಕಾ ಆ್ಯಕ್ಷನ್ ಕಥಾಹಂದರ ಹೊಂದಿರುವ ಸಿನಿಮಾ ಎಂಬುದನ್ನು ಸೂಕ್ಷ್ಮವಾಗಿ ಧ್ವನಿಸುತ್ತಿದೆ.

‘ಡ್ರಾಗನ್’ ಚಿತ್ರದ ಮೂಲಕ ಗಮನ ಸೆಳೆದಿದ್ದ ಯುವ ನಿರ್ದೇಶಕ ಅಶ್ವತ್ ಮಾರಿಮುತ್ತು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಇಷ್ಟು ದೊಡ್ಡ ತಾರಾಗಣ ಹಾಗೂ ದಿಗ್ಗಜರ ಸಿನಿಮಾವನ್ನು ಮುನ್ನಡೆಸುವ ಸುವರ್ಣ ಅವಕಾಶ ಈ ಯುವ ನಿರ್ದೇಶಕನಿಗೆ ಒಲಿದಿದೆ.

ಚಿತ್ರದ ಮುಹೂರ್ತದೊಂದಿಗೆ ಚಿತ್ರೀಕರಣ ಇಂದಿನಿಂದ ಅಧಿಕೃತವಾಗಿ ಆರಂಭಗೊಂಡಿದೆ. ಅದ್ದೂರಿಯಾಗಿ ನಡೆದ ಲಾಂಚ್ ಇವೆಂಟ್‌ನಲ್ಲಿ ರಜನಿಕಾಂತ್, ಕಮಲ್ ಹಾಸನ್ ಸೇರಿದಂತೆ ಚಿತ್ರತಂಡದ ಪ್ರಮುಖರು ಭಾಗವಹಿಸಿದ್ದರು. ಚಿತ್ರದಲ್ಲಿ ರಾಶಿ ಖನ್ನಾ ಮತ್ತು ಸಿಮ್ರಾನ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜನೆ ಮಾಡುತ್ತಿದ್ದು, ರಜನಿಕಾಂತ್ ಚಿತ್ರಕ್ಕೆ ಅವರು ಐದನೇ ಬಾರಿಗೆ ಮ್ಯೂಸಿಕ್ ನೀಡುತ್ತಿದ್ದಾರೆ. ಈ ಚಿತ್ರವನ್ನು ರಾಜ್ ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಮತ್ತು ಟರ್ಮರಿಕ್ ಮೀಡಿಯಾ ಜಂಟಿಯಾಗಿ ನಿರ್ಮಿಸುತ್ತಿದ್ದು, ೨೦೨೭ರ ಸಂಕ್ರಾಂತಿ (ಪೊಂಗಲ್) ಹಬ್ಬದ ಪ್ರಯುಕ್ತ ಅದ್ಧೂರಿಯಾಗಿ ತೆರೆಗೆ ತರಲು ಚಿತ್ರತಂಡ ಯೋಜಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ