LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಟಿ ಖುಷ್ಬೂ ಮಗಳ ಮದುವೆಯಲ್ಲಿ ದೇವತೆಯರಂತೆ ಮಿಂಚಿದ ತಮನ್ನಾ ಭಾಟಿಯಾ ಮತ್ತು ತ್ರಿಷಾ ಕೃಷ್ಣನ್

ಬಹುಭಾಷಾ ನಟಿ, ರಾಜಕಾರಣಿ ಖುಷ್ಬೂ ಸುಂದರ್ ಮತ್ತು ಚಿತ್ರನಿರ್ದೇಶಕ ಸುಂದರ್ ಸಿ ಅವರ ಹಿರಿಯ ಪುತ್ರಿ ಅವಂತಿಕಾ ಸುಂದರ್ ಅವರ ವಿವಾಹ ಮಹೋತ್ಸವ ಇತ್ತೀಚೆಗೆ ಗೋವಾದಲ್ಲಿ ಅತ್ಯಂತ ಸಡಗರದಿಂದ ನೆರವೇರಿದೆ. ಈ ಅದ್ಧೂರಿ ಸಮಾರಂಭದಲ್ಲಿ ಸ್ಯಾಂಡಲ್‌ವುಡ್, ಕಾಲಿವುಡ್ ಹಾಗೂ ಬಾಲಿವುಡ್‌ನ ಖ್ಯಾತ ತಾರೆಯರು ಭಾಗವಹಿಸಿ ನವದಂಪತಿಗೆ ಶುಭ ಹಾರೈಸಿದ್ದಾರೆ. ಈ ಪೈಕಿ ದಕ್ಷಿಣ ಭಾರತದ ಖ್ಯಾತ ನಟಿಯರಾದ ತಮನ್ನಾ ಭಾಟಿಯಾ ಮತ್ತು ತ್ರಿಷಾ ಕೃಷ್ಣನ್ ತಮ್ಮ ಸಾಂಪ್ರದಾಯಿಕ ಉಡುಪಿನಲ್ಲಿ ಎಲ್ಲರ ಗಮನ ಸೆಳೆದಿದ್ದಾರೆ.

ಸರಳ ಹಾಗೂ ಆಕರ್ಷಕ ರೇಷ್ಮೆ ಸೀರೆಯಲ್ಲಿ ಕಂಗೊಳಿಸಿದ ನಟಿಯರಿಬ್ಬರು ಮದುವೆ ಸಮಾರಂಭದ ಮೆರುಗನ್ನು ಹೆಚ್ಚಿಸಿದ್ದರು. ನಟಿ ತಮನ್ನಾ ಭಾಟಿಯಾ ಅವರು ಮದುವೆಯ ಸುಂದರ ಕ್ಷಣಗಳ ಫೋಟೋಗಳನ್ನು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮನ್ನಾ ಬಿಳಿ ಬಣ್ಣದ ರೇಷ್ಮೆ ಸೀರೆಯನ್ನು ಉಟ್ಟು ಸರಳತೆಯೇ ಸೌಂದರ್ಯ ಎಂಬಂತೆ ಮಿಂಚಿದ್ದಾರೆ. ಅವರ ಸೀರೆಯ ವಿಶಿಷ್ಟ ಶೈಲಿಯ ವಿನ್ಯಾಸವು ಸಾಂಪ್ರದಾಯಿಕ ಉಡುಪಿಗೆ ಆಧುನಿಕ ಸ್ಪರ್ಶ ನೀಡುವಂತಿತ್ತು. ಈ ಉಡುಪಿಗೆ ಸೂರು ಹೊಂದುವಂತೆ ತಮ್ಮದೇ ಜ್ಯುವೆಲ್ಲರಿ ಬ್ರ್ಯಾಂಡ್‌ನ ಮುತ್ತಿನ ಹಾರವನ್ನು ಧರಿಸಿ ಅವರು ರಾಜಕುಮಾರಿಯಂತೆ ಕಾಣುತ್ತಿದ್ದರು.

ಇನ್ನೊಂದೆಡೆ ನಟಿ ತ್ರಿಷಾ ಕೃಷ್ಣನ್ ಅವರು ಸಾಂಪ್ರದಾಯಿಕ ದಕ್ಷಿಣ ಭಾರತೀಯ ಶೈಲಿಯ ಚಿನ್ನದ ಬಣ್ಣದ ರೇಷ್ಮೆ ಸೀರೆಯನ್ನು ಉಟ್ಟು ರಾಯಲ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಭವ್ಯವಾದ ಈ ರೇಷ್ಮೆ ಸೀರೆಗೆ ಮ್ಯಾಚಿಂಗ್ ಬ್ಲೌಸ್ ಧರಿಸಿದ್ದ ತ್ರಿಷಾ, ಹಸಿರು ಪಚ್ಚೆ ಮತ್ತು ವಜ್ರದ ಹಾರವನ್ನು ಧರಿಸುವ ಮೂಲಕ ಮತ್ತಷ್ಟು ಆಕರ್ಷಕವಾಗಿ ಕಾಣುತ್ತಿದ್ದರು. ಕಣ್ಣುಗಳ ಅಂದವನ್ನು ಹೆಚ್ಚಿಸುವ ಹಗುರವಾದ ಮೇಕಪ್ ಹಾಗೂ ಫ್ರೀ ಹೇರ್ ಸ್ಟೈಲ್ ಅವರ ಯೌವನಭರಿತ ಸೌಂದರ್ಯಕ್ಕೆ ಸಾಟಿಯಿಲ್ಲದಂತಿತ್ತು. ಗೋವಾದಲ್ಲಿ ನಡೆದ ಈ ಖಾಸಗಿ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಈ ಇಬ್ಬರು ನಟಿಯರ ಫೋಟೋಗಳು ಪ್ರಸ್ತುತ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ