LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ ಹೇಡಿತನದ ಕೃತ್ಯ: ಬಿ.ಕೆ.ಹರಿಪ್ರಸಾದ್

ಬೆಂಗಳೂರು: ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣವನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಖಂಡಿಸಿದ್ದಾರೆ.

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ಸಾರ್ವಜನಿಕವಾಗಿ ವಿರೋಧ ಪಕ್ಷದವರು ಚಪ್ಪಲಿ ಎಸೆದು ನಡೆಸಿರುವ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳು ಸಹಜ. ಆದರೆ ವಾದದಿಂದ ಎದುರಿಸಲಾಗದವರು, ಪ್ರಜಾಪ್ರಭುತ್ವದ ಭಾಷೆಯಲ್ಲಿ ಉತ್ತರಿಸಲು ಸಾಧ್ಯವಾಗದವರು ಮಾತ್ರ ಇಂತಹ ಹೇಯ ಮತ್ತು ಹೇಡಿತನದ ಕೃತ್ಯಗಳಿಗೆ ಇಳಿಯುತ್ತಾರೆ ಎಂದು ಹೇಳಿದ್ದಾರೆ.

ಭಿನ್ನಮತವನ್ನು ಹಿಂಸೆ, ಬೆದರಿಕೆ ಮತ್ತು ಅವಮಾನದಿಂದ ಹತ್ತಿಕ್ಕಲು ಹೊರಟಿರುವ ರಾಜಕೀಯ ಸಂಸ್ಕೃತಿಗೆ ಕರ್ನಾಟಕದಲ್ಲಿ ಯಾವುದೇ ಸ್ಥಾನವಿಲ್ಲ. ಜನರ ತೀರ್ಪಿಗೆ ಗೌರವ ಕೊಡುವ ಪ್ರಜಾಪ್ರಭುತ್ವದಲ್ಲಿ ಇಂತಹ ದುಷ್ಕೃತ್ಯಗಳಿಗೆ ಯಾವುದೇ ಸಮರ್ಥನೆ ಇಲ್ಲ ಎಂದಿದ್ದಾರೆ.

ಪ್ರದೀಪ್ ಈಶ್ವರ್ ಅವರು ಎದೆಗುಂದಬೇಕಿಲ್ಲ. ಕಾಂಗ್ರೆಸ್ ಪಕ್ಷ ನಿಮ್ಮೊಂದಿಗೆ ದೃಢವಾಗಿ ನಿಂತಿದೆ. ಸತ್ಯ, ಪ್ರಜಾಪ್ರಭುತ್ವ ಮತ್ತು ಜನರ ಪರವಾದ ಧ್ವನಿಯನ್ನು ಇಂತಹ ಕೃತ್ಯಗಳಿಂದ ಯಾರೂ ಮೌನಗೊಳಿಸಲು ಸಾಧ್ಯವಿಲ್ಲ ಎಂದು ಹರಿಪ್ರಸಾದ್ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ