LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಿಂಚಿತ್ ಅಮಲು ಪದಾರ್ಥ ಬೆರೆಸಿದರೂ ರಾಜ್ಯದಲ್ಲಿ ಎಲ್ಲ ರೀತಿಯ ಪಾನ್ ಮಸಾಲಾ, ಗುಟ್ಕಾ ನಿಷೇಧ: ಸಿಎಂ ಡಿ.ಕೆ.ಶಿವಕುಮಾರ್ ಖಡಕ್ ಎಚ್ಚರಿಕೆ

ಬೆಂಗಳೂರು: ಕಿಂಚಿತ್ ಅಮಲು ಪದಾರ್ಥ ಬೆರಕೆ ಮಾಡಿದರೂ ಕರ್ನಾಟಕದಲ್ಲಿ ಎಲ್ಲ ರೀತಿಯ ಪಾನ್ ಮಸಾಲಾ, ಗುಟ್ಕಾ ಮಾರಾಟ ನಿಷೇಧ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಣದಲ್ಲಿ ಏರ್ಪಡಿಸಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ 31 ನೇ ಸಂಸ್ಥಾಪನಾ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಪಾನ್ ಮಸಾಲಾ, ಗುಟ್ಕಾ, ಅಡಿಕೆ ಮತ್ತಿತರ ಪದಾರ್ಥಗಳಲ್ಲಿ ಅಮಲು ಬರುವ ವಸ್ತುಗಳನ್ನು ಬೆರಕೆ ಮಾಡಿ ಮಾರಾಟ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದು ನಿಜವೇ ಆಗಿದ್ದರೆ, ತಕ್ಷಣ ನಿಲ್ಲದಿದ್ದರೆ ಎಲ್ಲ ರೀತಿಯ ಪಾನ್ ಮಸಾಲಾ, ಗುಟ್ಕಾ ಪದಾರ್ಥಗಳ ಮಾರಾಟವನ್ನು ಕರ್ನಾಟಕದಲ್ಲಿ ನಿಷೇಧ ಮಾಡಲಾಗುವುದು ಎಂದರು.

ಮಾದಕದ್ರವ್ಯ ಮುಕ್ತ ಕರ್ನಾಟಕ ರೂಪಿಸುವುದು ನಮ್ಮ ಗುರಿ. ಅದಕ್ಕಾಗಿ ನಾವು ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದೇವೆ. ಇಂದು ನೀವೆಲ್ಲರೂ ಸೇರಿ ನಶೆ ಮುಕ್ತ ಭಾರತ ಸಮಾವೇಶ ಹಮ್ಮಿಕೊಂಡಿರುವುದನ್ನು ನಾನು ಸ್ವಾಗತಿಸುತ್ತೇನೆ. ನೀವೆಲ್ಲರೂ ಇದರ ರಾಯಭಾರಿಗಳು. ಮಾದಕ ವ್ಯಸನ ತಡೆಯುವಿಕೆ ದೊಡ್ಡ ಸವಾಲಾಗಿದ್ದು, ನಾವೆಲ್ಲರೂ ಒಂದಾಗಿ ಸೇರಿ, ಯುವ ಪೀಳಿಗೆ ಈ ವ್ಯಸನದ ಸುಳಿಗೆ ಸಿಲುಕದಂತೆ ತಡೆಯೋಣ. ಇದು ಎಲ್ಲರ ಕರ್ತವ್ಯವಾಗಿದೆ. ನೀವು ಜೀವ ರಕ್ಷಣೆಯ ವೃತ್ತಿ ಆಯ್ಕೆ ಮಾಡಿಕೊಂಡಿದ್ದು, ನಿಮಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ದೇಶದಲ್ಲೇ ಅತಿ ದೊಡ್ಡ ಆರೋಗ್ಯ ವಿವಿಯಾಗಿದ್ದು, ಅತಿ ಹೆಚ್ಚು ವೈದ್ಯರನ್ನು ತಯಾರು ಮಾಡಿದೆ. ನಮ್ಮ ರಾಜ್ಯದಲ್ಲಿ 70 ಮೆಡಿಕಲ್ ಕಾಲೇಜುಗಳಿದ್ದು, ದೇಶದ ಬೇರೆ ಯಾವುದೇ ರಾಜ್ಯದಲ್ಲಿ ಇಷ್ಟು ಮೆಡಿಕಲ್ ಕಾಲೇಜುಗಳಿಲ್ಲ. ಈ ರಾಜೀವ್ ಗಾಂಧಿ ವಿವಿಯನ್ನು ಆರಂಭಿಸಿದ ವೀರಪ್ಪ ಮೊಯ್ಲಿ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.

ವೈದ್ಯಕೀಯ ಶಿಕ್ಷಣ ಎಲ್ಲರಿಗೂ ಸಿಗುವಂತೆ ಆಗಬೇಕು. ಬೆಂಗಳೂರಿನ ಹವಾಮಾನ ದೇಶದ ಬೇರೆ ಯಾವುದೇ ಭಾಗದಲ್ಲಿ ಇಲ್ಲ. ಹೀಗಾಗಿ ಇದನ್ನು ಹವಾನಿಯಂತ್ರಿತ ನಗರ ಎಂದು ಕರೆಯುತ್ತಾರೆ. ಕರ್ನಾಟಕದಲ್ಲಿ ಇರುವಷ್ಟು ಆಸ್ಪತ್ರೆ ಬೇರೆ ಯಾವ ರಾಜ್ಯದಲ್ಲೂ ಇಲ್ಲ. ಕರ್ನಾಟಕ ದೇಶದಲ್ಲಿ ವೈದ್ಯಕೀಯ ರಾಜಧಾನಿಯೂ ಆಗಿದೆ. ಈ ವಿವಿ ಬೆಂಗಳೂರು ದಕ್ಷಿಣ ಜಿಲ್ಲೆಯ ನೂತನ ಕ್ಯಾಂಪಸ್ ಗೆ ಸ್ಥಳಾಂತರವಾಗಲಿದೆ ಎಂದು ತಿಳಿಸಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ